ಜಾತಿಗಣತಿ ವರದಿಯನ್ನು ಸರ್ಕಾರ ಅಂಗೀಕರಿಸಬಾರದು: ವೀರಶೈವ ಮಹಾಸಭಾ ಒತ್ತಾಯ

ತೀವ್ರ ವಿರೋಧದ ನಡುವೆಯೇ ರಾಜ್ಯ ಸರ್ಕಾರಕ್ಕೆ ಜಾತಿಗಣತಿ ವರದಿ ಸಲ್ಲಿಕೆಯಾಗಿದೆ. ಇತ್ತ ಜಾತಿಗಣತಿ ವರದಿ ಸಲ್ಲಿಕೆಯಾಗುತ್ತಿದ್ದಂತೆ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿವೆ. ಸಿಎಂ ಸಿದ್ದರಾಮಯ್ಯ ಸರ್ಕಾರದ ಕೆಲ ನಾಯಕರು ಈ ಬಗ್ಗೆ ಈಗಾಗಲೇ ಅಸಮಾಧಾನ ಹೊರಹಾಕಿದ್ದಾರೆ. ಇದೀಗ ಜಾತಿಗಣತಿ ವರದಿ ವಿರೋಧಿಸಿ ವೀರಶೈವ ಮಹಾಸಭಾ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಜಾತಿಗಣತಿ ವರದಿಯನ್ನು ಸರ್ಕಾರ ಅಂಗೀಕರಿಸಬಾರದು: ವೀರಶೈವ ಮಹಾಸಭಾ ಒತ್ತಾಯ
ಪ್ರಾತಿನಿಧಿಕ ಚಿತ್ರ
Follow us
ಪ್ರಸನ್ನ ಗಾಂವ್ಕರ್​
| Updated By: ಗಂಗಾಧರ​ ಬ. ಸಾಬೋಜಿ

Updated on: Feb 29, 2024 | 10:06 PM

ಬೆಂಗಳೂರು, ಫೆಬ್ರವರಿ 29: ತೀವ್ರ ವಿರೋಧದ ನಡುವೆಯೇ ರಾಜ್ಯ ಸರ್ಕಾರಕ್ಕೆ ಜಾತಿಗಣತಿ ವರದಿ (Caste Census Report) ಸಲ್ಲಿಕೆಯಾಗಿದೆ. ಇತ್ತ ಜಾತಿಗಣತಿ ವರದಿ ಸಲ್ಲಿಕೆಯಾಗುತ್ತಿದ್ದಂತೆ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿವೆ. ಸಿಎಂ ಸಿದ್ದರಾಮಯ್ಯ ಸರ್ಕಾರದ ಕೆಲ ನಾಯಕರು ಈ ಬಗ್ಗೆ ಈಗಾಗಲೇ ಅಸಮಾಧಾನ ಹೊರಹಾಕಿದ್ದಾರೆ. ಇದೀಗ ಜಾತಿಗಣತಿ ವರದಿ ವಿರೋಧಿಸಿ ವೀರಶೈವ ಮಹಾಸಭಾ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಇಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸಿಎಂ ಸಿದ್ದರಾಮಯ್ಯರಿಗೆ ಅಧಿಕೃತವಾಗಿ ವರದಿ ಸಲ್ಲಿಸಿದ್ದಾರೆ. ಈ ವರದಿಯ ಬಗ್ಗೆ ಈಗಾಗಲೇ ಹಲವು ಅನುಮಾನಗಳಿರುವ ಹಿನ್ನೆಲೆಯಲ್ಲಿ ಈ ವರದಿಯನ್ನು ಸರ್ಕಾರ ಅಂಗೀಕರಿಸಬಾರದು ಎಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಒತ್ತಾಯಿಸಿದೆ.

ಮೊದಲಿಗೆ ಜಾತಿಗಣತಿ ಸಮೀಕ್ಷೆಯ ಉದ್ದೇಶದಿಂದಲೇ ಕಾಂತರಾಜು ಆಯೋಗ ರಚಿಸಲಾಯಿತು. ತದನಂತರ ಇದು ‘ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ’ ಯಾಗಿ ಬದಲಾಯಿಸಲಾಯಿತು. ಈ ವರದಿ ಸಿದ್ಧವಾಗಿ ಸುಮಾರು 8 ವರ್ಷಗಳಾಗಿದೆ. ಈ ಅವಧಿಯಲ್ಲಿ ಜಾತಿವಾರು ಜನಸಂಖ್ಯೆಯಲ್ಲಿ ಸಾಕಷ್ಟು ಏರುಪೇರುಗಳಾಗಿವೆ. ಕೋವಿಡ್ ನಂತರದ ಕಾಲಘಟ್ಟದಲ್ಲಿ ಸಾಕಷ್ಟು ವ್ಯತ್ಯಾಸಗಳಾಗಿವೆ. ಈ ವರದಿ ಅಂಗೀಕರಿಸುವುದರಿಂದ ಎಲ್ಲಾ ಸಮುದಾಯಗಳಿಗೂ ಅನ್ಯಾಯವಾಗುತ್ತದೆ. ಹೀಗಾಗಿ ಅಖಿಲ ಭಾರತ ವೀರಶೈವ- ಲಿಂಗಾಯತ ಮಹಾಸಭಾ ಈ ವರದಿಗೆ ಮೊದಲಿನಿಂದಲೂ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ.

ಇದನ್ನೂ ಓದಿ: ಜಾತಿ ಗಣತಿ ವರದಿಗೆ ಬಾರಿ ಅಪಸ್ವರ: ಸಿದ್ದರಾಮಯ್ಯ ನಡೆಗೆ ಸ್ವಪಕ್ಷದ ಕೆಲ ನಾಯಕರು ಅಸಮಾಧಾನ

ದಾವಣಗೆರೆಯಲ್ಲಿ ನಡೆದ 24 ಮಹಾಧಿವೇಶನದಲ್ಲಿ ಕೂಡ ಈ ವರದಿಯನ್ನು ಅಂಗೀಕರಿಸದಂತೆ ನಿರ್ಣಯ ಕೈಗೊಳ್ಳಲಾಗಿದೆ. ವೀರಶೈವ ಲಿಂಗಾಯತ ಸಮುದಾಯ ಕರ್ನಾಟಕದ ಅತಿದೊಡ್ಡ ಸಮುದಾಯಗಳಲ್ಲಿ ಒಂದಾಗಿದೆ. ನಮ್ಮ ಸಮುದಾಯದವರು 8 ವರ್ಷಗಳ ಹಿಂದೆ ಅರಿವಿನ ಕೊರತೆ ಮತ್ತು ಮಾಹಿತಿ ಕೊರತೆ ಇತ್ತು.

ದತ್ತಾಂಶ ಸಂಗ್ರಹ ವೇಳೆ ನಿಗದಿಪಡಿಸಿದ ಸಂಕೇತವನ್ನು ನಮೂದಿಸದೇ ಇರುವುದರಿಂದ ಇಡೀ ಸಮುದಾಯದ ಜನಸಂಖ್ಯೆಯೇ ಕ್ಷೀಣಿಸಿದೆ. ಗಣತಿಗೆ ನಿಯುಕ್ತರಾದ ಸಿಬ್ಬಂದಿ ಹಲವರ ಮನೆಗಳಿಗೆ ಖುದ್ದು ಭೇಟಿ ನೀಡದೇ ಸರಿಯಾದ ಮಾಹಿತಿಯನ್ನೂ ದಾಖಲಿಸಿಲ್ಲ. ಈ ವರದಿ ಸಂಪೂರ್ಣ ಅವೈಜ್ಞಾನಿಕವಾಗಿದ್ದು, ಇದನ್ನು ತರಾತುರಿಯಲ್ಲಿ ಅಂಗೀಕರಿಸಿದರೆ, ಉಪಯೋಗಕ್ಕಿಂತ ಹಾನಿಯೇ ಹೆಚ್ಚಾಗುತ್ತದೆ. ಈ ಹಿನ್ನಲೆಯಲ್ಲಿ ಈ ವರದಿ ತಿರಸ್ಕರಿಸಬೇಕು ಎಂದು ಮಹಾಸಭಾ ಮತ್ತೊಮ್ಮೆ ಒತ್ತಾಯಿಸಿದೆ.

ಇದನ್ನೂ ಓದಿ: ಜಾತಿಗಣತಿ ವರದಿಯಲ್ಲಿ ಜನಸಂಖ್ಯೆ ಬಹಿರಂಗ: ಎಸ್ಸಿ ಫಸ್ಟ್‌, ಕುರುಬ ಜನಾಂಗವೇ ಅತಿ ಹಿಂದುಳಿದ ವರ್ಗ!

ಅಂಗೀಕರಿಸಿದರೆ ರಾಜ್ಯದ ಎಲ್ಲಾ ಹರ-ಗುರು ಚರಮೂರ್ತಿಗಳ ನೇತೃತ್ವದಲ್ಲಿ ರಾಜ್ಯಾದ್ಯಂತ ಹೋರಾಟವನ್ನು ಮಹಾಸಭಾ ರೂಪಿಸುವುದು ಅನಿವಾರ್ಯವಾಗುತ್ತದೆ ಎಂದು ಸರ್ಕಾರಕ್ಕೆ ಅಖಿಲ ಭಾರತ ವೀರಶೈವ ಮಹಾಸಭಾ ಎಚ್ಚರಿಕೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ