AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು: ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ

Cauvery water dispute: ತಮಿಳುನಾಡಿಗೆ 5,000 ಕ್ಯೂಸೆಕ್‌ ಕಾವೇರಿ ನೀರು ಹರಿಸಬೇಕೆಂದು ಕರ್ನಾಟಕಕ್ಕೆ ಕಾವೇರಿ ಜಲ ನಿಯಂತ್ರಣ ಸಮಿತಿ ನಿರ್ದೇಶನ ನೀಡಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, CWRC ಸಭೆಗಳಿಗೆ ಅಧಿಕಾರಿಗಳು ವರ್ಚುವಲ್ ಮೂಲಕ ಹಾಜರಾದರೆ. ನೆರೆ ರಾಜ್ಯದವರು ಖುದ್ದು ಹಾಜರಿದ್ದು ಅಂಕಿ-ಅಂಶ ಸಮೇತ ವಾದ ಮಂಡಿಸುತ್ತಾರೆ. ನೆಲ, ಜಲ, ಭಾಷೆ ಬಗ್ಗೆ ತಮಿಳುನಾಡಿನವರಿಗೆ ಇರುವ ಬದ್ಧತೆ ನಮ್ಮವರಿಗಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಯಾವ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು: ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ
ಹೆಚ್​ಡಿ ಕುಮಾರಸ್ವಾಮಿ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Sep 13, 2023 | 10:09 AM

Share

ಬೆಂಗಳೂರು, (ಸೆಪ್ಟೆಂಬರ್ 13): ತಮಿಳುನಾಡಿಗೆ(tamil nadu) 5,000 ಕ್ಯೂಸೆಕ್‌ ಕಾವೇರಿ ನೀರು(Cauvery water) ಹರಿಸಬೇಕೆಂದು ಕರ್ನಾಟಕಕ್ಕೆ ಕಾವೇರಿ ಜಲ ನಿಯಂತ್ರಣ ಸಮಿತಿ ನಿರ್ದೇಶನ ನೀಡಿದೆ. ಇದರಿಂದ ರಾಜ್ಯದಲ್ಲಿ ರೈತರ ಆಕ್ರೋಶದ ಭುಗಿಲೆದಿದ್ದು, ಮೈಸೂರು ಮಂಡ್ಯ ಭಾಗದಲ್ಲಿ ಪ್ರತಿಭಟನೆಗಳು ಶುರುವಾಗಿವೆ. ಇನ್ನು ಈ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ(HD kumaraswamy) ಪ್ರತಿಕ್ರಿಯಿಸಿ, ಯಾವ ಕಾರಣಕ್ಕೂ ರಾಜ್ಯ ಸರ್ಕಾರ ನೀರು ಹರಿಸಬಾರದು ಎಂದು ಸಲಹೆ ನೀಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, CWRC ಸಭೆಗಳಿಗೆ ಅಧಿಕಾರಿಗಳು ವರ್ಚುವಲ್ ಮೂಲಕ ಹಾಜರಾದರೆ. ನೆರೆ ರಾಜ್ಯದವರು ಖುದ್ದು ಹಾಜರಿದ್ದು ಅಂಕಿ-ಅಂಶ ಸಮೇತ ವಾದ ಮಂಡಿಸುತ್ತಾರೆ. ನೆಲ, ಜಲ, ಭಾಷೆ ಬಗ್ಗೆ ತಮಿಳುನಾಡಿನವರಿಗೆ ಇರುವ ಬದ್ಧತೆ ನಮ್ಮವರಿಗಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಕಾವೇರಿ ನದಿ ನೀರು ವಿವಾದ: ಇಂದು ತುರ್ತು ಸಭೆ ಕರೆದ ಸಿದ್ದರಾಮಯ್ಯ, ಪ್ರತಿಪಕ್ಷಗಳ ನಾಯಕರಿಗೂ ಆಹ್ವಾನ

ಕಾವೇರಿ ಜಲ ನಿಯಂತ್ರಣ ಸಮಿತಿ ಕೊಟ್ಟಿರುವ ನಿರ್ದೇಶನ ಆಘಾತಕಾರಿ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಸರ್ಕಾರ ನೀರು ಹರಿಸಬಾರದು. ತಮಿಳುನಾಡಿಗೆ ಯಾವ ಸಂಕಷ್ಟವೂ ಇಲ್ಲ, ಕರ್ನಾಟಕಕ್ಕಷ್ಟೇ ಸಂಕಷ್ಟವೇ? ಆದೇಶ ಪಾಲನೆಗಷ್ಟೇ ಕರ್ನಾಟಕ, ಅನುಭವಿಸಲಿಕ್ಕೆ ತಮಿಳುನಾಡು.ಆ ರಾಜ್ಯ ಎಷ್ಟು ವಿಸ್ತೀರ್ಣದಲ್ಲಿ ಬೆಳೆ ಬೆಳೆಯುತ್ತಿದೆ ಎಂಬ ಬಗ್ಗೆ ಚರ್ಚಿಸಿಲ್ಲ. ಸಮಿತಿಯಲ್ಲಿ ಚರ್ಚಿಸಿಲ್ಲ ಎನ್ನುವುದಕ್ಕೆ ಆ ಸಮಿತಿಯ ಆದೇಶವೇ ಸಾಕ್ಷಿ. ಸಮಿತಿ & ಪ್ರಾಧಿಕಾರದ ಸಭೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. CWRC ಸಭೆಗಳಿಗೆ ಅಧಿಕಾರಿಗಳು ವರ್ಚುವಲ್ ಮೂಲಕ ಹಾಜರಾದರೆ. ನೆರೆ ರಾಜ್ಯದವರು ಖುದ್ದು ಹಾಜರಿದ್ದು ಅಂಕಿ-ಅಂಶ ಸಮೇತ ವಾದ ಮಂಡಿಸುತ್ತಾರೆ. ನೆಲ, ಜಲ, ಭಾಷೆ ಬಗ್ಗೆ ತಮಿಳುನಾಡಿನವರಿಗೆ ಇರುವ ಬದ್ಧತೆ ನಮ್ಮವರಿಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮವರಲ್ಲಿ ಉಪೇಕ್ಷೆ, ಉಡಾಫೆ ಹೆಚ್ಚು. ಟ್ರಿಬ್ಯುನಲ್‌ ಆದೇಶ ಉಲ್ಲಂಘಿಸಿರುವ ತಮಿಳುನಾಡು ವಿರುದ್ಧ ಸಮರ್ಥ ವಾದ ಮಂಡಿಸಲು ಏಕೆ ಸಾಧ್ಯವಾಗಿಲ್ಲ? ನೀರಾವರಿ ಪ್ರದೇಶವನ್ನು ನೆರೆರಾಜ್ಯ ಅಕ್ರಮವಾಗಿ ವಿಸ್ತರಣೆ ಮಾಡಿಕೊಂಡಿರುವುದನ್ನು ಹೇಳಲೇಬೇಕಿತ್ತು. ಮೊದಲು ಸಂಕಷ್ಟಸೂತ್ರ ರೂಪಿಸಿ ಎಂದು ಪಟ್ಟು ಹಿಡಿಯಬೇಕಿತ್ತು. ಜಲ ನಿರ್ವಹಣೆ ಪ್ರಾಧಿಕಾರ, ಜಲ ನಿಯಂತ್ರಣ ಸಮಿತಿ ಏನು ಮಾಡುತ್ತಿವೆ? ಟ್ರಿಬ್ಯುನಲ್ ಆದೇಶ ಉಲ್ಲಂಘಿಸಿ, ನೀರಾವರಿ ಪ್ರದೇಶ ಹೆಚ್ಚಿಸಿಕೊಂಡಿರುವ ತಮಿಳುನಾಡು ಬಗ್ಗೆ ಇವುಗಳಿಗೆ ಮಾಹಿತಿ ಇಲ್ಲವೇ? ರಾಜ್ಯಗಳ ನೈಜಸ್ಥಿತಿ ಅರಿಯುವ ಕರ್ತವ್ಯ ಅವುಗಳಿಗೆ ಇಲ್ಲವೇ? ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಎನ್ನುವ ನೀತಿ ಯಾಕೆ? ಎಂದು ಪ್ರಶ್ನಿಸಿದ್ದಾರೆ.

ನಮ್ಮ ರೈತರಿಗೇ ನೀರಿಲ್ಲದಿದ್ದರೂ, ಅವರು ಬೆಳೆಯನ್ನೇ ಬೆಳೆಯದಿದ್ದರೂ ನೀರು ಬಿಡಲು ಸರ್ಕಾರ ಒಪ್ಪಿದೆ. ಈ ವಿಷಯದಲ್ಲಿ ರಾಜ್ಯ ಸರಕಾರ ಪೂರ್ಣ ವಿಫಲವಾಗಿದೆ. ರೈತರ ತಾಳ್ಮೆಯನ್ನೂ ದುರುಪಯೋಗ ಮಾಡಿಕೊಂಡಿದೆ. ಸುಪ್ರೀಂ ಕೋರ್ಟ್ ಏನು ಹೇಳುತ್ತದೋ ಅಲ್ಲಿಯವರೆಗೆ ಕಾಯಬೇಕಿತ್ತು. ಪ್ರಾಧಿಕಾರ, ಸಮಿತಿ ಹೇಳಿದವೆಂದು ನೀರು ಬಿಟ್ಟಿದ್ದು ತಪ್ಪು ಎಂದಿದ್ದಾರೆ.

ರೈತರ ಬಗ್ಗೆ ಕಾಳಜಿ, ಬೆಂಗಳೂರಿನ ಜನರ ಕುಡಿಯುವ ನೀರಿನ ಬಗ್ಗೆ ಆತಂಕ ಇದ್ದಿದ್ದರೆ ಸರ್ಕಾರ ನೀರು ಹರಿಸುತ್ತಿರಲಿಲ್ಲ. ಬೆಂಗಳೂರಿಗರ ಮೌನ ನನಗೆ ಅಚ್ಚರಿ ತಂದಿದೆ. ನೆರೆ ರಾಜ್ಯಗಳಿಂದ ವಲಸೆ ಬಂದು ನಮ್ಮ ನೆಲ, ಜಲ, ಆರ್ಥಿಕತೆಯ ಆಸರೆಯಲ್ಲಿ ನೆಮ್ಮದಿಯಾಗಿರುವವರು ಕೂಡ ಕಾವೇರಿ ಬಗ್ಗೆ ದನಿ ಎತ್ತಬೇಕು. ಇವರಾರಿಗೂ ಕಾವೇರಿ ನೀರಿನ ಚಿಂತೆಯೇ ಇಲ್ಲ. ಸರ್ಕಾರ ಹೆಜ್ಜೆಹೆಜ್ಜೆಗೂ ಎಡವಿದೆ. ತಮಿಳುನಾಡು ಸುಪ್ರೀಂ ಕೋರ್ಟಿಗೆ ಅರ್ಜಿ ಹಾಕಿದಾಕ್ಷಣ ರಾಜ್ಯ ಸರಕಾರವೂ ತಕ್ಷಣವೇ ಆಕ್ಷೇಪ ಸಲ್ಲಿಸಬೇಕಿತ್ತು. ವಾಸ್ತವ ಸ್ಥಿತಿಯ ಬಗ್ಗೆ ದಾಖಲೆಗಳನ್ನು ಒದಗಿಸಿ, ಸಮರ್ಥವಾಗಿ ಎದುರಿಸಬೇಕಿತ್ತು. ಕಾಲಹರಣ ಮಾಡಿದ್ದಲ್ಲದೆ, ಈಗ ಕಾವೇರಿ ಬಗ್ಗೆ ಮೊಸಳೆ ಕಣ್ಣೀರು ಹಾಕಿದರೆ ಕನ್ನಡಿಗರು ನಂಬಬೇಕಾ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ