ಸರ್ಕಾರ vs ರಾಜಭವನ: ಮತ್ತೊಂದು ಮಸೂದೆ ವಾಪಸ್ ಕಳುಹಿಸಿದ ರಾಜ್ಯಪಾಲ ಗೆಹ್ಲೋಟ್
ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ-2024ಗೆ ಸಹಿ ಹಾಕದೆ ರಾಜ್ಯಪಾರು ವಾಪಾಸ್ ಕಳುಹಿಸಿದ್ದಾರೆ. ಮುಖ್ಯಮಂತ್ರಿಗಳಿಗೆ ಅಧಿಕಾರ ವರ್ಗಾವಣೆಯ ಉದ್ದೇಶದಿಂದ ಈ ತಿದ್ದುಪಡಿ ಮಾಡಲಾಗಿದೆ ಎಂದು ರಾಜ್ಯಪಾಲರು ಆಕ್ಷೇಪಿಸಿದ್ದಾರೆ. ಬೆಳಗಾವಿಯ ವಿಧಾನಸಭಾ ಅಧಿವೇಶನದಲ್ಲಿ ಈ ಮಸೂದೆ ಮಂಡಿಸಲ್ಪಟ್ಟಿತ್ತು. ಈ ಮೂಲಕ ರಾಜ್ಯ ಸರ್ಕಾರ ಮತ್ತು ರಾಜಭವನದ ನಡುವೆ ಮುಸುಕಿನ ಗುದ್ದಾಟ ಮುಂದುವರೆದಿದೆ.

ಬೆಂಗಳೂರು, ಫೆಬ್ರವರಿ 22: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ-2024 ಸೇರಿದಂತೆ ಒಟ್ಟು ಮೂರು ಮಸೂದೆಗಳಿಗೆ (Panchayat Raj and Rural University Amendment Bill) ಸಹಿ ಹಾಕದೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸರ್ಕಾರಕ್ಕೆ ವಾಪಸ್ ಕಳಸಿದ್ದಾರೆ. ಈ ತಿದ್ದುಪಡಿಯು ದಾರಿ ತಪ್ಪಿಸುವಂತಿದೆ. ಬದಲಾವಣೆ ತರುವ ಉದ್ದೇಶಕ್ಕಿಂತಲೂ ಅಧಿಕಾರ ಕಿತ್ತುಕೊಳ್ಳುವ ಯತ್ನವಾಗಿದೆ ಎಂದಿದ್ದಾರೆ.
ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆಯನ್ನು ಬೆಳಗಾವಿಯಲ್ಲಿ ನಡೆದಿದ್ದ ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗಿತ್ತು. ಈ ಮಸೂದೆ ಪ್ರಕಾರ ವಿಶ್ವವಿದ್ಯಾಲಯಗಳಿಗೆ ರಾಜ್ಯಾಪಾಲರ ಬದಲು ಮುಖ್ಯಮಂತ್ರಿಗಳು ಕುಲಾಧಿಪತಿಗಳಾಗಲಿದ್ದಾರೆ. ವಿಶ್ವವಿದ್ಯಾಲಯದ ಎಲ್ಲ ನೇಮಕಾತಿ, ಆಡಳಿತಾತ್ಮಕ ಅಧಿಕಾರಿಗೆ ಮುಖ್ಯಮಂತ್ರಿಗಳಿಎ ಇರಲಿದೆ. ಈ ಮೂಲಕ ರಾಜ್ಯಪಾಲರ ಅಧಿಕಾರವನ್ನು ಮೊಟಕುಗೊಳಿಸಲಾಗಿದೆ.
ವಾಪಸ್ ಕಳುಹಿಸಿ ಇತರ ಎರಡು ಮಸೂದೆಗಳೆಂದರೆ ಮೈಸೂರು ಪ್ರಾಧಿಕಾರ ಅಭಿವೃದ್ಧಿ ಮಸೂದೆ- 2024 ಮತ್ತು ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ರಕ್ಷಣೆ (ತಿದ್ದುಪಡಿ) ಮಸೂದೆ-2024ಕ್ಕೆ ಸಹಿ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ.
ಇದನ್ನೂ ಓದಿ: KPSC ಅನ್ಯಾಯದ ಕುರಿತು ರಾಜ್ಯಪಾಲರಿಗೆ ದೂರು: KAS ಮರು ಪರೀಕ್ಷೆಯಾಗುತ್ತಾ?
ಈ ಹಿಂದೆಯೂ ಮಸೂದೆ ವಾಪಸ್ ಕಳುಹಿಸಿದ್ದ ರಾಜ್ಯಪಾಲರು
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿಯನ್ನು ತಡೆಗಟ್ಟುವ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ಅಂಕಿತ ಹಾಕದೆ ಹಲವು ಸ್ಪಷ್ಟನೆ ಕೇಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದರು. ಸುಗ್ರೀವಾಜ್ಞೆಯಲ್ಲಿ ಸಾಲ ಪಡೆದವರ ರಕ್ಷಣೆಗೆ ಮಾತ್ರವೇ ಗಮನ ಹರಿಸಲಾಗಿದೆ. ಸಹಜ ನ್ಯಾಯದ ಅಡಿಯಲ್ಲಿ ಸಾಲ ಕೊಟ್ಟವರಿಗೆ ರಕ್ಷಣೆ ಕಾಣಿಸುತ್ತಿಲ್ಲ. ಸುದೀರ್ಘ ಅವಧಿಯಲ್ಲಿ ಇದು ಮಾರಕವಾಗಲಿದೆ. ಮೈಕ್ರೋ ಫೈನಾನ್ಸ್ 3 ಲಕ್ಷಕ್ಕಿಂತ ಜಾಸ್ತಿ ಸಾಲ ಕೊಡುವುದಿಲ್ಲ. ನೀವು ಐದು ಲಕ್ಷ ದಂಡ ಹೇಗೆ ಹಾಕುತ್ತೀರಾ” ಎಂಹೇಗೆ ಹಾಕುತ್ತೀರಾ” ಎಂದು ರಾಜ್ಯಪಾಲರು ಸರ್ಕಾರವನ್ನು ಪ್ರಶ್ನೆ ಮಾಡಿದ್ದರು.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:33 am, Sat, 22 February 25