ಕೇಂದ್ರ ಗೃಹ ಸಚಿವಾಲಯ, ರಾಷ್ಟ್ರಪತಿ ಅಂಗಳ ತಲುಪಿದ ಮುಡಾ ಪ್ರಕರಣ: ಸಿಎಂಗೆ ಮತ್ತಷ್ಟು ಸಂಕಷ್ಟ ಎದುರಾಗುತ್ತಾ?

| Updated By: ರಮೇಶ್ ಬಿ. ಜವಳಗೇರಾ

Updated on: Sep 05, 2024 | 7:52 PM

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣದಲ್ಲಿ ರಾಜ್ಯಪಾಲರು, ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ನೀಡಿದ್ದು, ಇದನ್ನು ಪ್ರಶ್ನಿಸಿ ಸಿಎಂ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ನಡೆಯುತ್ತಿದೆ. ಇದರ ನಡುವೆ ಮುಡಾ ಹಗರಣ ಇದೀಗ ರಾಷ್ಟ್ರಪತಿ ಹಾಗೂ ಕೇಂದ್ರ ಗೃಹ ಸಚಿವಾಲಯದ ಅಂಗಳ ತಲುಪಿದೆ.

ಕೇಂದ್ರ ಗೃಹ ಸಚಿವಾಲಯ, ರಾಷ್ಟ್ರಪತಿ ಅಂಗಳ ತಲುಪಿದ ಮುಡಾ ಪ್ರಕರಣ: ಸಿಎಂಗೆ ಮತ್ತಷ್ಟು ಸಂಕಷ್ಟ ಎದುರಾಗುತ್ತಾ?
ಮುಡಾ ಹಗರಣ
Follow us on

ಬೆಂಗಳೂರು, (ಸೆಪ್ಟೆಂಬರ್ 05): ಮುಡಾ ಹಗರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ರಾಜ್ಯಪಾಲ ಥಾವರ್ ಚೆಂದ ಗೆಹ್ಲೋಟ್​ ನೀಡಿರುವ ಪ್ರಾಸಿಕ್ಯೂಷನ್​ ವಿರುದ್ಧ ಸಿಎಂ ಸಿದ್ದರಾಮಯ್ಯ ಕಾನೂನು ಸಮರ ನಡೆಸಿದ್ದಾರೆ. ಇದರ ಮಧ್ಯ ಇದೀಗ ಮುಡಾ ಹಗರಣ ರಾಷ್ಟ್ರಪತಿ ಅಂಗಳ ತಲುಪಿದೆ. ಹೌದು…ಮುಡಾ ಹಗರಣದ ವಿಚಾರವಾಗಿ ಪ್ರತಿಭಟನೆಯಿಂದ ರಾಜ್ಯ ಸರ್ಕಾರ, ರಾಜಭವನದ ಮೇಲೆ‌ ನಿರಂತರ ಒತ್ತಡ ಹಾಕಲಾಗುತ್ತಿದೆ ಎಂದು ರಾಜ್ಯಪಾಲ ಥಾವರ್ ಚೆಂದ ಗೆಹ್ಲೋಟ್ ಅವರು ರಾಜ್ಯ ವಿದ್ಯಮಾನಗಳ ಬಗ್ಗೆ ರಾಷ್ಟ್ರಪತಿಗೆ ಮಾಹಿತಿ ರವಾನಸಿದ್ದಾರೆ. ಅಲ್ಲದೇ ಕೇಂದ್ರ ಗೃಹ ಸಚಿವಾಲಯಕ್ಕೂ ಮಾಹಿತಿ ನೀಡಿದ್ದಾರೆ.

ಪ್ರತಿಭಟನೆಯೊಂದಾಗಿ ಸಾರ್ವಜನಿಕ ಸಮಾರಂಭಗಳಿಗೆ ಹಾಜರಾಗದಂತಗ ದಿಗ್ಬಂಧನ ಸ್ಥಿತಿ ನಿರ್ಮಾಣವಾಗಿದೆ. ಗುಪ್ತಚರ ಇಲಾಖೆ‌ ಸಲಹೆಯಂತೆ ಬುಲೆಟ್‌ಪ್ರೂಫ್ ಕಾರು ಬಳಕೆ ಮಾಡುತ್ತಿದ್ದೇನೆ. ಕೆಲ ಸಚಿವರು ಉದ್ದೇಶಪೂರ್ವಕವಾಗಿ ಕರ್ನಾಟಕ ವಿರೋಧಿ ರಾಜ್ಯಪಾಲರು, ಗೋಬ್ಯಾಕ್ ಗವರ್ನರ್ ಚಳವಳಿ ನಡೆಸಿದ್ದಾರೆ ಎಂಬ ಅಂಶಗಳನ್ನೊಳಗೊಂಡ ವರದಿಯನ್ನು ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ರಾಷ್ಟ್ರಪತಿ ಹಾಗೂ ಕೇಂದ್ರ ಗೃಹಸಚಿವಾಲಯಕ್ಕೆ ರವಾನಿಸಿದ್ದಾರೆ.

ಇದನ್ನೂ ಓದಿ: ಮುಡಾ ಹಗರಣ: ಆರೋಪ ಒಪ್ಪಿಕೊಂಡ ಸರ್ಕಾರ, ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ!

ಮುಡಾ ವಿಚಾರವಾಗಿ ರಾಜ್ಯದಲ್ಲಿ ಪ್ರತಿಭಟನೆ ಮೂಲಕ ರಾಜ್ಯ ಸರ್ಕಾರ, ರಾಜಭವನದ ಮೇಲೆ‌ ನಿರಂತರ ಒತ್ತಡ ಹೇರುತ್ತಿದೆ. ರಾಜ್ಯಾದ್ಯಂತ ವ್ಯಾಪಕ ಪ್ರತಿಭಟನೆ, ಹಲವೆಡೆ ತಮ್ಮ ಪ್ರತಿಕೃತಿ ದಹನ ಮಾಡಲಾಗಿದೆ. ಸಾಲದಕ್ಕೆ ಕಾಂಗ್ರೆಸ್‌ ನಾಯಕರಿಂದ ರಾಜಭವನಕ್ಕೆ‌ ನುಗ್ಗುವ ಬೆದರಿಕೆ ಇದೆ ಎಂದು ವರದಿಯಲ್ಲಿ ರಾಜ್ಯಪಾಲರು ಉಲ್ಲೇಖಿಸಿದ್ದಾರೆ.

ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ್ದ ಕಾಂಗ್ರೆಸ್

ಇನ್ನು ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ವಿರುದ್ಧವಾಗಿ ಪ್ರತಿಭಟನೆ ನಡೆಸುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕರೆ ನೀಡಿದ್ದರು. ಅದರಂತೆ ಸಚಿವರು ಆದಿಯಾಗಿ ಶಾಸಕರು, ಮುಖಂಡರು ಕಾರ್ಯಕರ್ತರು ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ಮಾಡಿದ್ದರು. ಅಲ್ಲದೇ ಸಿದ್ದರಾಮಯ್ಯನವರನ್ನು ಬೆಂಬಲಿಸಿ ಅಹಿಂದ ವರ್ಗ ಸಹ ರಾಜ್ಯಪಾಲರ ವಿರುದ್ಧ ಪ್ರತಿಬಟನೆ ನಡೆಸಿತ್ತು. ಪ್ರತಿಭಟನೆ ವೇಲೆ ಗೋಬ್ಯಾಕ್ ಗವರ್ನರ್ ಅಂತೆಲ್ಲಾ ಘೋಷಣೆಗಳನ್ನು ಕೂಗಿ ಥಾವರ್ ಚೆಂದ್ ಗೆಹ್ಲೋಟ್ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದರು.

ಇದರ ಬೆನ್ನಲ್ಲೇ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್​ಗೆ ಬುಲೆಟ್ ಪ್ರೂಫ್​ ಕಾರು ನೀಡಲಾಗಿತ್ತು. ಇದೀಗ ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ರಾಜ್ಯಪಾಲರು, ಕೇಂದ್ರ ಗೃಹ ಸಚಿವಾಲಯ ಮತ್ತು ರಾಷ್ಟ್ರಪತಿಗೆ ವರದಿ ನೀಡಿದ್ದಾರೆ.  ಈ ವರದಿ ಬೆನ್ನಲ್ಲೆ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಸಂಘರ್ಷ ಮತ್ತೊಂದು ಹಂತಕ್ಕೆ ಹೋದಂತಿದೆ.

ಇನ್ನು ಈ ಸಂಬಂಧ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ ಎದುರಾಗುತ್ತಾ? ಇನ್ನು ರಾಜ್ಯಪಾಲರ ದೂರಿನ ವರದಿ ಬಗ್ಗೆ ರಾಷ್ಟ್ರಪತಿ ಮತ್ತು ಕೇಂದ್ರ ಗೃಹ ಸಚಿವಾಲಯ ಯಾವ ಕ್ರಮಕೈಗೊಳ್ಳುತ್ತೇ ಎನ್ನುವುದು ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ