ಸಿಎಂ ಬಳಿಕ ಸಚಿವ ಜಮೀರ್ ಅಹಮ್ಮದ್ ಖಾನ್ ಬಿಗ್ ಶಾಕ್ ಕೊಟ್ಟ ರಾಜ್ಯಪಾಲ

ವಕ್ಫ್​ ಆಸ್ತಿ ವಿವಾದ ಸಂಬಂಧ ಸಚಿವ ಜಮೀರ್ ಅಹಮ್ಮದ್ ಖಾನ್​ ಆಕ್ರೋಗಳು ಭುಗಿಲೆದ್ದಿವೆ. ವಿಪಕ್ಷಗಳು ಮಾತ್ರವಲ್ಲ ಸ್ವಪಕ್ಷದ ನಾಯಕರ ಕೆಂಗಣ್ಣಿಗೆ ಜಮೀರ್ ಅಹಮ್ಮದ್ ಗುರಿಯಾಗಿದ್ದಾರೆ. ಇದರಿಂದ ಜಮೀರ್ ಅಹಮ್ಮದ್ ಖಾನ್ ಮುಜುಗರಕ್ಕೀಡಾಗಿದ್ದಾರೆ. ಇದರ ಮಧ್ಯ ಜಮೀರ್​​ ಅಹಮ್ಮದ್ ಅವರಿಗೆ ರಾಜ್ಯಪಾಲರು ಬಿಗ್ ಶಾಕ್ ಕೊಟ್ಟಿದ್ದಾರೆ.

ಸಿಎಂ ಬಳಿಕ ಸಚಿವ ಜಮೀರ್ ಅಹಮ್ಮದ್ ಖಾನ್ ಬಿಗ್ ಶಾಕ್ ಕೊಟ್ಟ ರಾಜ್ಯಪಾಲ
ಥಾವರ್ ಚೆಂದ್ ಗೆಹ್ಲೋಟ್, ಜಮೀರ್ ಅಹಮ್ಮದ್ ಖಾನ್
Follow us
ಪ್ರಸನ್ನ ಗಾಂವ್ಕರ್​
| Updated By: ರಮೇಶ್ ಬಿ. ಜವಳಗೇರಾ

Updated on: Nov 10, 2024 | 5:36 PM

ಬೆಂಗಳೂರು, (ನವೆಂಬರ್ 10): ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ ಆದೇಶದ ಬಗ್ಗೆ ಮಾತನಾಡಿದ್ದ ಸಚಿವ ಜಮೀರ್ ಅಹಮ್ಮದ್ ಖಾನ್ ಇದೀಗ ಸಂಕಷ್ಟ ಎದುರಾಗಿದೆ. ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್‌ (Karnataka Highcourt) ನೀಡಿದ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿ ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಜಮೀರ್‌ ಅಹ್ಮದ್‌ ಖಾನ್‌ (Zameer Ahmed Khan) ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯಾಪಾಲರ ಥಾವರ್ ಚೆಂದ್ ಗೆಹ್ಲೋಟ್ ಅವರು ಸರ್ಕಾರದ ಅಡ್ವೋಕೇಟ್ ಜನರಲ್ ಗೆ ಸೂಚನೆ ನೀಡಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಮ್ ದೂರಿನ ಮೇರೆಗೆ ಸಚಿವ ಜಮೀರ್ ಅಹಮ್ಮದ್ ಹೇಳಿಕೆ ಸಂಬಂಧ ಅಡ್ವೋಕೇಟ್ ಜನರಲ್‌ಗೆ ರಾಜ್ಯಪಾಲರು ಪತ್ರ ಬರೆದಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ತಿಂಗಳು ಕಳೆದರೂ ಜಮೀರ್ ವಿರುದ್ಧ ಕ್ರಮಕ್ಕೆ ಮುಂದಾಗದ ಎಜಿಯನ್ನು ವಜಾ ಮಾಡಬೇಕು: ಅಬ್ರಹಾಂ

ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಟಿಜೆ ಅಬ್ರಾಹಮ್ ರಾಜ್ಯಪಾಲರಿಗೆ ದೂರು ನೀಡಿದ್ದರು. ಬಳಿಕ ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ತನಿಗೆ ಅನುಮತಿ ನೀಡಿದ್ದರು. ಇದನ್ನು ಪ್ರಶ್ನಿಸಿ ಸಿಎಂ, ಕೋರ್ಟ್​ ಮೆಟ್ಟಿಲೇರಿದ್ದರು. ಆದ್ರೆ, ಹೈಕೋರ್ಟ್​ ಸಿಎಂ ವಿರುದ್ಧದ ತನಿಖೆಗೆ ಆದೇಶಿಸಿತ್ತು. ಈ ತೀರ್ಪನ್ನು ಜಮೀರ್ ಅಹಮ್ಮದ್ ಖಾನ್, ರಾಜಕೀಯ ಪ್ರೇರಿತವಾಗಿದ್ದು, ಅದೊಂದು ರಾಜಕೀಯ ತೀರ್ಪು ಎಂದು ಹೇಳಿದ್ದರು. ಆ ಹಿನ್ನೆಲೆಯಲ್ಲಿ ಮುಡಾ ದೂರುದಾರರಲ್ಲೊಬ್ಬರಾದ ಟಿ.ಜೆ. ಅಬ್ರಹಾಂ ಅವರು ಜಮೀರ್ ಅವರ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಿ ಪಾಠ ಕಲಿಸುವುದಾಗಿ ಹೇಳಿದ್ದರು.

ಜಮೀರ್ ಅಹಮ್ಮದ್ ಖಾನ್ ಅವರು  ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಅಲ್ಲದೇ ಜಮೀರ್ ಅಹಮ್ಮದ್ ಖಾನ್ ಅವರು ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಅಬ್ರಾಹಂ ಕಿಡಿಕಾರಿದ್ದರು. ಮತ್ತೊಂದು ಹೆಜ್ಜೆ ಮುಂದೆ ಹೋಗಿ ಜಮೀರ್ ಅಹಮ್ಮದ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದರು. ಇದೀಗ ಈ ದೂರಿನ ಮೇರೆಗೆ ರಾಜ್ಯಪಾಲರು ಜಮೀರ್ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ