ರಾಮನಗರ, (ಅಕ್ಟೋಬರ್ 30): 2028ರ ವರೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆಯಲ್ಲ, ಮತ್ತೆ ನಾನೇ ಈ ರಾಜ್ಯದ ಮುಖ್ಯಮಂತ್ರಿಯಾಗಲಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭವಿಷ್ಯ ನುಡಿದಿದ್ದರು. ಈ ಹೇಳಿಕೆ ಕಾಂಗ್ರೆಸ್ನಲ್ಲಿ ಮಾತ್ರವಲ್ಲದೇ ಕರ್ನಾಟಕ ಬಿಜೆಪಿಯಲಲ್ಲೂ ಸಂಚಲನ ಮೂಡಿಸಿತ್ತು. ಇದರ ಬೆನ್ನಲ್ಲೇ ಇದೀಗ ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ಕ್ಷೇತ್ರಗಳ ಉಪಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಗೆದ್ದರೆ ಈ ಸರ್ಕಾರ ಇರುವುದಿಲ್ಲ. ಉಪಚುನಾವಣೆ ಬಳಿಕ ರಾಜ್ಯದಲ್ಲಿ ಗವರ್ನರ್(ರಾಜ್ಯಪಾಲ) ಆಳ್ವಿಕೆ ಜಾರಿಯಾಗಬಹುದು ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ನಡೆದ ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿ, ಉಪಚುನಾವಣೆಯಲ್ಲಿ ನಾವು 3 ಕ್ಷೇತ್ರ ಗೆದ್ದರೆ ಈ ಸರ್ಕಾರ ಉಳಿಯಲ್ಲ. ಉಪಚುನಾವಣೆ ಬಳಿಕ ರಾಜ್ಯದಲ್ಲಿ ಗವರ್ನರ್ ಆಳ್ವಿಕೆ ಜಾರಿಯಾಗಬಹುದು. ರಾಜ್ಯದಲ್ಲಿ ಮುಂದೆ ಏನು ಆಗುತ್ತದೆ ಅನ್ನೋದು ದೇವರ ಇಚ್ಛೆ ಎಂದು ಹೇಳಿದರು.
ಇದನ್ನೂ ಓದಿ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆ ಸ್ಥಗಿತ? ಡಿಕೆ ಶಿವಕುಮಾರ್ ಸುಳಿವು
ಮೋದಿ ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಪ್ರಯತ್ನ ಮಾಡುತ್ತಿದೆ. ಪ್ರಧಾನಿ ಮೋದಿಗಾಗಿ ನಾವು ಮೂರು ಕ್ಷೇತ್ರಗಳಲ್ಲಿ ಗೆಲ್ಲಬೇಕು. ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಮೇಲೆ ನಂಬಿಕೆ ಇದೆ ಮೋದಿ ದೇವೇಗೌಡರ ನಾಯಕತ್ವಕ್ಕೆ ಬೆಂಬಲ ಸಿಗಲಿದೆ ಅನ್ನೋ ವಿಶ್ವಾಸ ಇದೆ. ಯಡಿಯೂರಪ್ಪ ಹಬ್ಬ ಮುಗಿದ ಮೇಲೆ ಪ್ರಚಾರಕ್ಕೆ ಬರಲಿದ್ದಾರೆ. ಬಿಜೆಪಿ ಜೆಡಿಎಸ್ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಸ್ಪಷ್ಟಪಸಿದರು.
ಬಿಜೆಪಿ ಜೆಡಿಎಸ್ ಸಂಬಂಧ ಅಧಿಕಾರಕ್ಕಾಗಿ ಅಲ್ಲ. ಇದು ರಾಜ್ಯದ ಅಭಿವೃದ್ಧಿಗಾಗಿ ಆಗಿರುವುದು. ಬಿಜೆಪಿ ಜೆಡಿಎಸ್ ನಡುವೆ ಉತ್ತಮ ಬಾಂಧವ್ಯ ಇದೆ. ಬಿಜೆಪಿ ಜೆಡಿಎಸ್ ಅಣ್ಣ ತಮ್ಮಂದಿರಂತೆ ಇದ್ದೇವೆ. ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆಯಲು ನಮ್ಮ ಮೈತ್ರಿ. ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿ ಅಲ್ಲ ಎನ್ಡಿಎ ಅಭ್ಯರ್ಥಿ ಎಂದು ಹೇಳಿದರು.
ಕರ್ನಾಟಕ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ