ಬೆಳಗಾವಿ ಚಳಿಗಾಲದ ಅಧಿವೇಶ: ಬಿಜೆಪಿ ಅಸ್ತ್ರಕ್ಕೆ ಪ್ರತ್ಯಾಸ್ತ್ರ ಹೂಡಿದ ಕಾಂಗ್ರೆಸ್, ಎಲ್ಲರ ಚಿತ್ತ ರಾಜ್ಯಪಾಲರತ್ತ

belagavi winter session 2024: ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸಲು ರಾಜ್ಯಪಾಲ ಥಾವರ್ ಸಿಂಗ್ ಗೆಹ್ಲೋಟ್​ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಆದ್ರೆ, ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ತೀವ್ರ ಕುತೂಹಲ ಮೂಡಿಸಿದೆ. ಹಾಗಾದ್ರೆ, ಅಧಿವೇಶನ ಎಲ್ಲಿಂದ ಎಲ್ಲಿಯವರೆಗೆ ನಡೆಯಲಿದೆ ಎನ್ನುವ ವಿವರ ಇಲ್ಲಿದೆ.

ಬೆಳಗಾವಿ ಚಳಿಗಾಲದ ಅಧಿವೇಶ: ಬಿಜೆಪಿ ಅಸ್ತ್ರಕ್ಕೆ ಪ್ರತ್ಯಾಸ್ತ್ರ ಹೂಡಿದ ಕಾಂಗ್ರೆಸ್, ಎಲ್ಲರ ಚಿತ್ತ ರಾಜ್ಯಪಾಲರತ್ತ
Follow us
ರಮೇಶ್ ಬಿ. ಜವಳಗೇರಾ
| Updated By: Digi Tech Desk

Updated on:Nov 19, 2024 | 4:07 PM

ಬೆಂಗಳೂರು, (ನವೆಂಬರ್ 19): ಬೆಳಗಾವಿಯಲ್ಲಿ ( ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ (Belagavi) Winter Session) ದಿನಾಂಕ ನಿಗದಿಯಾಗಿದೆ. ಡಿಸೆಂಬರ್ 9 ರಿಂದ ಆರಂಭವಾಗಲಿರುವ ವಿಧಾನಮಂಡಲದ ಅಧಿವೇಶನ ಡಿ.20ವರೆಗೆ ನಡೆಯಲಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯು ಅಧಿವೇಶನ ಕರೆಯುವ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‍ ಅವರಿಗೆ ಕಡತ ರವಾನಿಸಿದ್ದು, ರಾಜ್ಯಪಾಲರು ಇಂದು(ನವೆಂಬರ್ 19) ಒಪ್ಪಿಗೆ ಸೂಚಿಸಿದ್ದಾರೆ.

ಇತ್ತೀಚೆಗೆ ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿದ್ದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಅಧಿಕಾರಿಗಳ ಸಭೆ ನಡೆಸಿದ್ದರು. ಅಲ್ಲದೆ, ಅಧಿವೇಶನ ನಡೆಸಲು ಅಗತ್ಯವಾದ ಸಿದ್ಧತೆಗಳನ್ನು ಮಾಡುವಂತೆ ಸೂಚನೆ ನೀಡಿದ್ದರು. ಇದೀಗ ರಾಜ್ಯಪಾಲರ ಸಹ ಅಧಿವೇಶನಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಆದ್ರೆ, ಅವರ ಭಾಷಣ ಈ ಬಾರಿ ಮಹತ್ವ ಪಡೆದುಕೊಳ್ಳಲಿದೆ. ಯಾಕಂದ್ರೆ ರಾಜ್ಯಪಾಲರು ಮತ್ತು ಸರ್ಕಾರದ ನಡುವೆ ಮುಡಾ ಸೇರಿದಂತೆ ಕೆಲ ವಿಚಾರಗಳಲ್ಲಿ ಸಂಘರ್ಷ ಏರ್ಪಟ್ಟಿತ್ತು. ಹಾಗೇ ಸರ್ಕಾರದ ವಿರುದ್ಧ ವಿರೋಧ ಪಕ್ಷ ಕೆಲ ದೂರುಗಳನ್ನು ನೀಡಿದೆ. ಇದರಿಂದ ಬೆಳಗಾವಿ ಚಳಿಗಾಲದ ಅಧಿವೇಶದಲ್ಲಿ ರಾಜ್ಯಪಾಲರು ತಮ್ಮ ಭಾಷಣದಲ್ಲಿ ಏನೆಲ್ಲಾ ಹೇಳಲಿದ್ದಾರೆ ಎನ್ನುವುದು ಕುತೂಹಲ.

ಇದನ್ನೂ ಓದಿ: ಶಾಸಕರನ್ನು ವಿಶ್ವಾಸದಲ್ಲಿಟ್ಟುಕೊಳ್ಳುವಂತೆ ಸಚಿವರಿಗೆ ಸಿಎಂ ಟಾಸ್ಕ್, ಸರ್ಕಾರಕ್ಕೆ ಇದ್ಯಾ ಆಪರೇಷನ್ ಕಮಲ ಭೀತಿ?

ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷ ಸನ್ನದ್ಧ

ಇನ್ನು ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷ ಬಿಜೆಪಿ ಮತ್ತು ಜೆಡಿಎಸ್​ ಸನ್ನದ್ಧವಾಗಿವೆ. ಈಗಾಗಲೇ ಸಾಲು ಸಾಲು ಆರೋಪಗಳನ್ನು ಮಾಡಿರುವ ವಿಪಕ್ಷಗಳು ಅವುಗಳನ್ನೇ ಅಸ್ತ್ರವಾಗಿ ಮಾಡಿಕೊಂಡು ಸದನದಲ್ಲಿ ಧ್ವನಿ ಎತ್ತಲಿವೆ. ಮುಡಾ ಹಾಗೂ ವಾಲ್ಮೀಕಿ ಹಗರಣ ಈಗಾಗಲೇ ಕಳೆದ ಮುಂಗಾರು ಅಧಿವೇಶನದಲ್ಲಿ ಚರ್ಚೆಯಾಗಿದೆ. ಈಗ ಹೊಸದಾಗಿ ವಕ್ಫ್​ ವಿವಾದ, ಬಿಪಿಎಲ್ ಕಾರ್ಡ್​ ರದ್ದು ಸೇರಿದಂತೆ ಇತರೆ ಅಂಶಗಳನ್ನು ಮುಂದಿಟ್ಟುಕೊಂಡು ಸದನದಲ್ಲಿ ಆರ್ಭಟಿಸಲು ಸಜ್ಜಾಗಿದೆ.

ವಿಪಕ್ಷಗಳಿಗೆ ತಿರುಗೇಟು ಕೊಡಲು ಸರ್ಕಾರ ಸಿದ್ಧ

ಈಗಾಗಲೇ ಸರ್ಕಾರದ ವಿರುದ್ಧ ಸಾಲು ಸಾಲು ಆರೋಪ ಮಾಡಿರುವ ಬಿಜೆಪಿ, ಸದನದಲ್ಲೂ ಧ್ವನಿ ಎತ್ತುವುದು ಖಚಿತ ಎಂದು ಗೊತ್ತಾಗುತ್ತಿದ್ದಂತೆಯೇ ಇತ್ತ ಸಿಎಂ ಸಿದ್ದರಾಮಯ್ಯ ಎಚ್ಚೆತ್ತುಕೊಂಡಿದ್ದಾರೆ. ಈ ಸಂಬಂಧ ನಿನ್ನೆ (ನವೆಂಬರ್ 18) ಹಿರಿಯ ಸಚಿವ ಜೊತೆ ಮಹತ್ವದ ಸಭೆ ನಡೆಸಿದ್ದು, ವಿಪಕ್ಷಗಳಿಗೆ ಹೇಗೆಲ್ಲಾ ತಿರುಗೇಟು ನೀಡಬೇಕೆನ್ನುವ ಬಗ್ಗೆ ಸಚಿವರಿಗೆ ಪಾಠ ಮಾಡಿದ್ದಾರೆ. ಅಲ್ಲದೇ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ಬಿಪಿಎಲ್ ಕಾರ್ಡ್​ ಗೊಂದಲ ಬೇಗ ಬಗೆಹರಿಸುವಂತೆ ಸಚಿವ ಮುನಿಯಪ್ಪ ಅವರಿಗೆ ಖಡಕ್ ಸೂಚನೆ ನೀಡಿದ್ದಾರೆ.

ಇನ್ನು ಸರ್ಕಾರ ವಿರುದ್ಧ ಹಗರಣ ಬಗ್ಗೆ ಬಿಜೆಪಿ ಧ್ವನಿ ಎತ್ತಿದರೆ ಇದಕ್ಕೆ ಪ್ರತಿಯಾಗಿ ಕೋವಿಡ್ ಹಗರಣವನ್ನು ಎತ್ತಲು ಸರ್ಕಾರ ಮುಂದಾಗಿದೆ. ಹೀಗೆ ವಿಪಕ್ಷಗಳ ಆರೋಪಗಳಿಗೆ ತಕ್ಕನಾಗಿ ತಿರುಗೇಟು ನೀಡಲು ಸಿದ್ದರಾಮಯ್ಯ ಸರ್ಕಾರ ಎಲ್ಲಾ ರೀತಿಯ ತಯಾರಿ ಮಾಡಿಕೊಳ್ಳಲುತ್ತಿದೆ.

ಹೀಗಾಗಿ ಈ ಬಾರಿ ಚಳಿಗಾಲದ ಅಧಿವೇಶನ ತೀವ್ರ ಸ್ವರೂಪ ಪಡೆದುಕೊಳ್ಳಲಿದ್ದು, ಸದನ ಕೋಲಾಹಲವಾಗುವುದರಲ್ಲಿ ಅನುಮಾನವೇ ಇಲ್ಲ. ಇನ್ನು ಪ್ರಮುಖವಾಗಿ ಉತ್ತರ ಕರ್ನಾಟದ ಸಮಸ್ಯೆ ಬಗ್ಗೆ ಚರ್ಚೆ ಮಾಡಲು ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಸಲಾಗುತ್ತದೆ ಎಂದು ಈಗಾಗಲೇ ಸ್ಪೀಕರ್​ ಹೇಳಿದ್ದಾರೆ. ಆದ್ರೆ, ಸರ್ಕಾರ ಮತ್ತು ವಿಪಕ್ಷಗಳ ಆರೋಪ-ಪ್ರತ್ಯಾರೋಪ ಮಧ್ಯ ಎಷ್ಟರಮಟ್ಟಿಗೆ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಯಾಗುತ್ತವೆ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:34 pm, Tue, 19 November 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ