AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯಗೆ ಸಂಕಷ್ಟ ತಂದಿಟ್ಟ ಮುಡಾ ಹಗರಣ: ಮತ್ತೆ ವರದಿ ಕೇಳಿದ ರಾಜ್ಯಪಾಲ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಳಿಬಂದ ಮುಡಾ ಹಗರಣ ಕರ್ನಾಟಕ ರಾಜ್ಯ ರಾಜಕೀಯದಲ್ಲಿಅಲ್ಲೋಲ ಕಲ್ಲೋಲ ಸೃಷ್ಟಿಸುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ರಾಜಕೀಯ ಲೆಕ್ಕಾಚಾರ ಗಳೆ ತಲೆ ಕೆಳಗಾಗುವ ಕೆಲವೊಂದಿಷ್ಟು ಬೆಳವಣಿಗೆಗಳಿಗೆ ರಾಜಭವನದ ಅಂಗಳವೇ ನಾಂದಿ ಹಾಡುವ ಪ್ರಸಂಗ ಕಾಣಿಸುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ದೆಹಲಿಯಿಂದಲೇ ಮತ್ತೆ ಮುಡಾ ಹಗರಣ ಸಂಪೂರ್ಣ ಮಾಹಿತಿನೀಡವಂತೆ ಮುಖ್ಯಕಾರ್ಯದರ್ಶಿಗೆ ವರದಿ ಕೇಳಿದ್ದಾರೆ.

ಸಿದ್ದರಾಮಯ್ಯಗೆ ಸಂಕಷ್ಟ ತಂದಿಟ್ಟ ಮುಡಾ ಹಗರಣ: ಮತ್ತೆ ವರದಿ ಕೇಳಿದ ರಾಜ್ಯಪಾಲ
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಪ್ರಸನ್ನ ಗಾಂವ್ಕರ್​
| Edited By: |

Updated on: Jul 31, 2024 | 9:33 PM

Share

ಬೆಂಗಳೂರು, (ಜುಲೈ 31): ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ಭಾರೀ ಹಗರಣ ನಡೆದಿದೆ ಎಂದು ಕೇಳಿಬಂದಿದ್ದು, ಇದೀಗ ಈ ಹಗರಣ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೊರಳಿಗೆ ಸುತ್ತಿಕೊಳ್ಳುವ ಎಲ್ಲಾ ಲಕ್ಷಣಗಳಿವೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡಲು ಚಿಂತನೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ರಾಜ್ಯಪಾಲರು ಮತ್ತೆ ಮುಡಾ ಹಗರಣ ಸಂಪೂರ್ಣ ವರದಿ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಕೇಳಿದ್ದಾರೆ. ಈಗಾಗಲೇ ಸರ್ಕಾರಿಂದ ಒಂದು ಬಾರಿ ವರದಿ ಪಡೆದುಕೊಂಡಿರುವ ರಾಜ್ಯಪಾಲರು ಇದೀಗ ನವದೆಹಲಿಯಲ್ಲಿ ಇದ್ದುಕೊಂಡೇ ಮತ್ತೊಮ್ಮೆ ವರದಿ ಕೇಳಿರುವುದು ಸಂಚಲನ ಮೂಡಿಸಿದೆ.

ಮುಡಾ ಸೈಟ್​ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ದಾಖಲಾಗಿರುವುದಿರಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಅವರು ಮತ್ತೊಮ್ಮೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ವರದಿ ಕೇಳಿದ್ದಾರೆ. ಈಗಾಗಲೇ ಅಧಿವೇಶನದ ವೇಳೆ ರಾಜ್ಯಪಾಲರಿಗೆ ಹಗರಣದ ಸಂಬಂಧ ವರದಿ ನೀಡಲಾಗಿತ್ತು. ಅಲ್ಲದೇ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ರಾಜ್ಯಪಾಲರನ್ನು ಭೇಟಿ ಮಾಡಿದ್ದರು.  ಆದ್ರೆ, ಇದೀಗ ಖಾಸಗಿ ದೂರಿನ ಅನ್ವಯ ಮತ್ತೆ ವರದಿ ಕೇಳಿದ್ದಾರೆ. ಹೀಗಾಗಿ ನೂತನ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನಿಶ್ ಅವರು ಹೆಚ್ಚಿನ ಮಾಹಿತಿ ನೀಡಲು ವರದಿ ಸಿದ್ಧಪಡಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: 2010ರಲ್ಲಿ ಯಡಿಯೂರಪ್ಪಗೆ ಆದಂತೆ ಸಿದ್ದರಾಮಯ್ಯಗೆ ಕುತ್ತು ತರುತ್ತಾ ಪ್ರಾಸಿಕ್ಯೂಷನ್? ಅಂದು ಏನಾಗಿತ್ತು ಗೊತ್ತಾ?

ಟಿಜೆ ಅಬ್ರಾಹಂ ದೂರಿನ ಮೇರೆಗೆ ಈಗಾಗಲೇ ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡುವ ಬಗ್ಗೆ ಈಗಾಗಲೇ ಕಾನೂನು ಸಲಹೆ ಪಡೆದುಕೊಂಡಿದ್ದಾರೆ. ಇದರ ಮಧ್ಯ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಬಳಿ ಪದೇ ಪದೇ ಹಗರಣದ ಮಾಹಿತಿ ಕೇಳುತ್ತಿರುವುದು ಅಚ್ಚರಿಯಾಗಿದೆ.  ಅದರಲ್ಲೂ ದೆಹಲಿ ಪ್ರವಾಸದಲ್ಲಿರುವಾಗಲೇ ಎರಡನೇ ಬಾರಿಗೆ ವರದಿ ಕೇಳಿರುವುದು ಅಚ್ಚರಿಗೆ ಕಾರಣವಾಗಿದೆ.

ಈ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಲು ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಎಲ್ಲರ ಚಿತ್ತ ರಾಜಭವನದತ್ತ ನೆಟ್ಟಿದೆ .

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!