ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ; ಸುಗ್ರೀವಾಜ್ಞೆಗೆ ರಾಜ್ಯಪಾಲರ ಸಹಿ

|

Updated on: Jan 05, 2021 | 8:02 PM

ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಗೆ ರಾಜ್ಯಪಾಲ ವಜುಭಾಯಿ ವಾಲಾ ಸಹಿ ಹಾಕಿದ್ದಾರೆ. ಹೀಗಾಗಿ, ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿದೆ.

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ; ಸುಗ್ರೀವಾಜ್ಞೆಗೆ ರಾಜ್ಯಪಾಲರ ಸಹಿ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು: ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಗೆ ರಾಜ್ಯಪಾಲ ವಜುಭಾಯಿ ವಾಲಾ ಸಹಿ ಹಾಕಿದ್ದಾರೆ. ಹೀಗಾಗಿ, ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿದೆ.

ಸದ್ಯ, ಸುಗ್ರೀವಾಜ್ಞೆಯ ಪ್ರಕಾರ ರಾಜ್ಯದಲ್ಲಿ ಜಾನುವಾರು ಸಾಗಾಣಿಕೆ, ಹತ್ಯೆಗೆ ನಿರ್ಬಂಧ ಹೇರಲಾಗಿದೆ. ಜೊತೆಗೆ, ಹತ್ಯೆಗಾಗಿ ಜಾನುವಾರು ಮಾರಾಟ, ಖರೀದಿ ಮೇಲೆ ಸಹ ನಿರ್ಬಂಧ ಹೇರಲಾಗಿದೆ.

ಒಂದು ವೇಳೆ, ಹತ್ಯೆಗಾಗಿ ಮಾರಾಟ ಮಾಡಿದ್ರೆ ಆ ಜಾನುವಾರುಗಳನ್ನು ಜಪ್ತಿ ಮಾಡಲಾಗುವುದು. ನಿಯಮ ಉಲ್ಲಂಘಿಸಿದ್ರೆ 3 ವರ್ಷದಿಂದ 7 ವರ್ಷ ಜೈಲು ಶಿಕ್ಷೆ ಸಹ ವಿಧಿಸಲಾಗುವುದು ಎಂದು ಹೇಳಲಾಗಿದೆ. ಜೊತೆಗೆ, 50 ಸಾವಿರದಿಂದ 5 ಲಕ್ಷ ರೂಪಾಯಿವರೆಗೆ ದಂಡ ಸಹ ವಿಧಿಸಲಾಗುವುದು. ಆದರೆ, ಕೃಷಿ ಮತ್ತು ಪಶು ಸಂಗೋಪನೆಗೆ ಜಾನುವಾರು ಸಾಗಿಸಬಹುದು ಎಂದು ಸುಗ್ರೀವಾಜ್ಞೆಯಲ್ಲಿ ಉಲ್ಲೇಖಿಸಲಾಗಿದೆ.

ಬಿ.ಎಸ್​. ಯಡಿಯೂರಪ್ಪಗೆ ಇಂದು ಡಬಲ್​ ಹಿನ್ನಡೆ: ಮುಖ್ಯಮಂತ್ರಿಗೆ ಎದುರಾಗುತ್ತಾ ಭೂ ಕಂಟಕ?

Published On - 7:50 pm, Tue, 5 January 21