ಗುಜರಾತ್​ ಗೇಮ್ ಝೋನ್​ನಲ್ಲಿ ಅಗ್ನಿ ದುರಂತ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: ಕಟ್ಟೆಚ್ಚರ ವಹಿಸಲು ಡಿಕೆ ಶಿವಕುಮಾರ್ ಸೂಚನೆ

ಗುಜರಾತ್​ನಲ್ಲಿ ನಿನ್ನೆ ಸಂಭವಿಸಿದ ಭೀಕರ ಅಗ್ನಿ ದುರಂತ ಬೆನ್ನಲ್ಲೇ ಕರ್ನಾಟಕ ಸರ್ಕಾರ ಎಚ್ಚೆತ್ತುಕೊಂಡಿದೆ. ಸೂಕ್ತ ಮುಂಜಾಗ್ರತಾ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಡಿಸಿಎಂ ಡಿಕೆ ಶಿವಕುಮಾರ್​​ ಪತ್ರದ ಮೂಲಕ ‌ಸೂಚನೆ ನೀಡಿದ್ದಾರೆ. ಈ ದುರಂತ ಎಲ್ಲರಿಗೂ ಎಚ್ಚರಿಕೆಯ ಗಂಟೆಯಾಗಿದೆ. ಹೀಗಾಗಿ ಗೇಮ್ ಝೋನ್‌ಗಳಲ್ಲಿ ಮುಂಜಾಗ್ರತಾ ಕ್ರಮವಹಿಸಬೇಕಿದೆ ಎಂದಿದ್ದಾರೆ.

ಗುಜರಾತ್​ ಗೇಮ್ ಝೋನ್​ನಲ್ಲಿ ಅಗ್ನಿ ದುರಂತ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: ಕಟ್ಟೆಚ್ಚರ ವಹಿಸಲು ಡಿಕೆ ಶಿವಕುಮಾರ್ ಸೂಚನೆ
ಗುಜರಾತ್​ ಗೇಮ್ ಝೋನ್​ನಲ್ಲಿ ಅಗ್ನಿ ದುರಂತ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: ಕಟ್ಟೆಚ್ಚರ ವಹಿಸಲು ಡಿಕೆ ಶಿವಕುಮಾರ್ ಸೂಚನೆ
Follow us
ಗಂಗಾಧರ​ ಬ. ಸಾಬೋಜಿ
|

Updated on: May 26, 2024 | 10:11 PM

ಬೆಂಗಳೂರು, ಮೇ 26: ಗುಜರಾತ್​ನಲ್ಲಿ ನಿನ್ನೆ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ (Fire disaster) ಸಾವಿನ ಸಂಖ್ಯೆ 33ಕ್ಕೇರಿದೆ. ರಾಜ್​ಕೋಟ್​ನ ಟಿಆರ್​ಪಿ (TRP) ಗೇಮಿಂಗ್ ಝೋನ್​ನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು 9 ಮಕ್ಕಳು ಮತ್ತು ಮಹಿಳೆಯರು ಸೇರಿದಂತೆ 33 ಜನ ಸಜೀವ ದಹನವಾಗಿದ್ದಾರೆ. ಸದ್ಯ ಈ ಘಟನೆ ಬೆನ್ನಲ್ಲೇ ಕರ್ನಾಟಕ ರಾಜ್ಯ ಸರ್ಕಾರ ಎಚ್ಚೆತ್ತಿದ್ದು, ಬೆಂಗಳೂರಿನ ಮಾಲ್ ಮತ್ತು ಗೇಮಿಂಗ್ ಝೋನ್​​ಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಡಿಸಿಎಂ ಡಿಕೆ ಶಿವಕುಮಾರ್​ ಖಡಕ್​ ‌ಸೂಚನೆ ನೀಡಿದ್ದಾರೆ.

ಈ ಕುರಿತಾಗಿ ಪತ್ರ ಬರೆದಿರುವ ಡಿಕೆ ಶಿವಕುಮಾರ್​, ಬೆಂಗಳೂರಿನಾದ್ಯಂತ ಶಾಪಿಂಗ್ ಮಾಲ್‌ಗಳು, ಗೇಮಿಂಗ್ ಮತ್ತು ಸಾಹಸ ವಲಯಗಳಂತಹ ಹೆಚ್ಚಾಗಿ ಜನದಟ್ಟಣೆ ಇರುವ ಮನರಂಜನಾ ಸ್ಥಳಗಳಲ್ಲಿ ಅಹಿತಕರ ಬೆಂಕಿ ಅನಾಹುತಗಳನ್ನು ತಡೆಗಟ್ಟಲು ಸೂಕ್ತವಾದ ಸುರಕ್ಷತಾ ಕ್ರಮಗಳು ಮತ್ತು ಮುನ್ನೆಚ್ಚರಿಕೆಗಳ ಅನುಸರಣೆ ಅತ್ಯಂತ ಮಹತ್ವದ್ದಾಗಿದೆ.

ಡಿಕೆ ಶಿವಕುಮಾರ್ ಟ್ವೀಟ್​​

ಅಗ್ನಿ ಅವಘಡಗಳನ್ನು ತಪ್ಪಿಸುವುದಕ್ಕಾಗಿ ನಿಯಮಿತ ತಪಾಸಣೆಗಳನ್ನು ಕಡ್ಡಾಯವಾಗಿ ಮಾಡುವುದರೊಂದಿಗೆ, ನಗರದಾದ್ಯಂತ ಮನರಂಜನಾ ಸ್ಥಳಗಳಲ್ಲಿ ಸುರಕ್ಷಿತ ಕ್ರಮಗಳನ್ನು ತ್ವರಿತವಾಗಿ ಅಳವಡಿಸಲು ಸೂಚನೆ ನೀಡಿದ್ದಾರೆ.

ಪತ್ರದಲ್ಲೇನಿದೆ?

ಗುಜರಾತ್‌ನ ರಾಜ್ ಕೋಟ್‌ನ ಮನರಂಜನಾ ಕೇಂದ್ರದಲ್ಲಿ (ಗೇಮ್ ರೋಝನ್) ಶನಿವಾರ ಸಂಜೆ ಸಂಭವಿಸಿದ ಅಗ್ನಿ ಅವಘಡ ಸಂಭವಿಸಿರುವುದು ವರದಿಯಾಗಿದ್ದು, ಇದು ಅತ್ಯಂತ ಕಳವಳಿಕಾರಿ ದುರ್ಘಟನೆಯಾಗಿರುತ್ತದೆ. ಈ ದುರಂತವು ಎಲ್ಲರಿಗೂ ಎಚ್ಚರಿಕೆಯ ಗಂಟೆಯಾಗಿದ್ದು, ಬೆಂಗಳೂರಿನ ಹಲವು ಪ್ರತಿಷ್ಠಿತ ಮಾಲ್‌ಗಳಲ್ಲಿ ಮತ್ತು ಇತರೆ ಸ್ಥಳಗಳಲ್ಲಿ ಗೇಮ್ ಝನ್ ಹಾಗೂ ಸಾಹಸ ಕ್ರೀಡೆಗಳನ್ನು ನಡೆಸಲು ಅನುಮತಿ ನೀಡಲಾಗಿದ್ದು, ಇಂತಹ ಮನರಂಜನಾ ಕೇಂದ್ರಗಳು / ಗೇಮ್ ಜೋನ್‌ಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮವಹಿಸಬೇಕಿದೆ.

ಇದನ್ನೂ ಓದಿ: ಹೊರಗುತ್ತಿಗೆಯಲ್ಲಿ ಮೀಸಲಾತಿ ತರಲು ಮುಂದಾದ ಸರ್ಕಾರ: ಆರೋಗ್ಯ ಇಲಾಖೆ ನೌಕರರ ವಿರೋಧ ಏಕೆ?

ಮಜನರಂಜನಾ ಕೇಂದ್ರ, ಗೇಮಿಂಗ್ ರೋಝನ್​​ಗಳಿರುವ ಪ್ರದೇಶದಲ್ಲಿ ಅಗ್ನಿದುರಂತ ಸೇರಿದಂತೆ ಯಾವುದೇ ಅನಾಹುತ ಸಂಭವಿಸದ ರೀತಿಯಲ್ಲಿ ಸೂಕ್ತ ಕ್ರಮ ಕೈಗೊಂಡು, ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆಯೇ ಎಂದು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಲು ಮತ್ತು ಈಗಾಗಲೇ ವಿಧಿಸಲಾಗಿರುವ ರಕ್ಷಣಾ ನಿಯಮ ಮತ್ತು ನಿಬರ್ಂಧಗಳನ್ನು ಪಾಲನೆ ಮಾಡಲಾಗುತ್ತಿದೆಯೇ ಎಂದು ಪರಿಶೀಲಿಸಲು ತಿಳಿಸುತ್ತಾ, ಯಾವುದೇ ದುರ್ಘಟನೆಗಳು ಸಂಭವಿಸದಂತೆ ಕ್ರಮವಹಿಸಲು ಸೂಚಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್