ಆರ್​ಡಿಪಿಆರ್, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆ ಸಿಬ್ಬಂದಿಗಳನ್ನು ಕೊರೊನಾ ವಾರಿಯರ್ಸ್ ಎಂದು ಘೋಷಿಸಿದ ಸರ್ಕಾರ

ಆರ್​ಡಿಪಿಆರ್, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆ ಸಿಬ್ಬಂದಿಗಳನ್ನು ಕೊರೊನಾ ವಾರಿಯರ್ಸ್ ಎಂದು ಘೋಷಿಸಿದ ಸರ್ಕಾರ
ಸಾಂದರ್ಭಿಕ ಚಿತ್ರ

Corona Warriors: 2020ರ ಏಪ್ರಿಲ್ 1ರಿಂದ ಪೂರ್ವಾನ್ವಯವಾಗುವಂತೆ ಈ ಆದೇಶ ನೀಡಲಾಗಿರುವುದು ಮಹತ್ವದ ತೀರ್ಮಾನವಾಗಿದೆ.

TV9kannada Web Team

| Edited By: ganapathi bhat

Aug 02, 2021 | 8:33 PM

ಬೆಂಗಳೂರು: ಆರ್​ಡಿಪಿಆರ್​ನ ಎಲ್ಲಾ ಸಿಬ್ಬಂದಿ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್​ ಇಲಾಖೆ ಸಿಬ್ಬಂದಿಗಳನ್ನು ಕೊರೊನಾ ವಾರಿಯರ್ಸ್ ಎಂದು ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ. 2020ರ ಏಪ್ರಿಲ್ 1ರಿಂದ ಪೂರ್ವಾನ್ವಯವಾಗುವಂತೆ ಈ ಆದೇಶ ನೀಡಲಾಗಿರುವುದು ಮಹತ್ವದ ತೀರ್ಮಾನವಾಗಿದೆ.

ನಗರ ಮತ್ತು ಸ್ಥಳೀಯ ಸಂಸ್ಥೆಗಳು, ಜಿ.ಪಂ, ತಾ.ಪಂ ಸದಸ್ಯರು ಮತ್ತು ಗ್ರಾ.ಪಂ. ಸದಸ್ಯರನ್ನು ಕೊವಿಡ್ ವಾರಿಯರ್ಸ್ ಎಂದು ಪರಿಗಣಿಸಿ ಆದ್ಯತೆ ಮೇರೆಗೆ ಮೊದಲ ಡೋಸ್​ ಕೊವಿಡ್ ಲಸಿಕೆ ನೀಡುವಂತೆ ಮಾಜಿ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದರು. ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್​ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದು, ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಿಎಂಗೆ ಪತ್ರ ಬರೆದು ಮನವಿ ಮಾಡಿದ್ದರು. ಈ ಮೂಲಕ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಮನವಿಯನ್ನು ಸಿಎಂ ಯಡಿಯೂರಪ್ಪ ಪುರಸ್ಕರಿಸಿದಂತಾಗಿತ್ತು.

ಶಿಕ್ಷಕರನ್ನು ಫ್ರಂಟ್ ಲೈನ್ ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ, ವಿಮಾ ಸೌಲಭ್ಯದೊಂದಿಗೆ ಆದೇಶ ಹೊರಡಿಸಬೇಕು. ಕೊರೊನಾ ವಾರಿಯರ್ಸ್ ಸಹಿತವಾಗಿ ಕೊವಿಡ್​ನಿಂದ ಮೃತಪಟ್ಟ ಎಲ್ಲಾ ಶಿಕ್ಷಕರಿಗೂ ಪರಿಹಾರ ಒದಗಿಸಲು ಪ್ರಯತ್ನಿಸಬೇಕು. ಕೊವಿಡ್ ಕರ್ತವ್ಯಕ್ಕೆ ನಿಯೋಜಿಸುವಾಗ 50 ವರ್ಷಕ್ಕಿಂತ ಹೆಚ್ಚು ವಯಸ್ಸಿನ, ಗಂಭೀರ ಖಾಯಿಲೆ ಉಳ್ಳ, ಗರ್ಭಿಣಿ/ ಚಿಕ್ಕ ಮಕ್ಕಳುಳ್ಳ ಶಿಕ್ಷಕಿಯರನ್ನು ಹೊರತುಪಡಿಸಿ ಕರ್ತವ್ಯಕ್ಕೆ ನಿಯೋಜನೆ ಮಾಡಬೇಕು. ಕೊವಿಡ್ ಕರ್ತವ್ಯಕ್ಕೆ ನಿಯೋಜನೆ ಮಾಡಲ್ಪಟ್ಟ ಶಿಕ್ಷಕರಿಗೆ ಅಗತ್ಯ ಸುರಕ್ಷಾ ಪರಿಕರಗಳನ್ನು ಒದಗಿಸಬೇಕು. ಮತ್ತು ವಾಸವಿರುವ ಸ್ಥಳದಲ್ಲಿಯೇ ನಿಯೋಜಿಸಬೇಕು ಎಂದು ಈ ಮೊದಲು ಆಗ್ರಹ ಕೇಳಿಬಂದಿತ್ತು.

ಕೊವಿಡ್ ಆರ್ಥಿಕ ಸಂಕಷ್ಟ ಹಿನ್ನೆಲೆಯಲ್ಲಿ ಖಾಸಗಿ ಶಾಲಾ ಶಿಕ್ಷಕರು ಕೊವಿಡ್ ನಿಂದ ಆರ್ಥಿಕ ಸಂಕಷ್ಟಕ್ಕೆ ಈಡಾಗಿದ್ದಾರೆ. ಹೀಗಾಗಿ ಖಾಸಗಿ ಶಾಲೆಯ ಶಿಕ್ಷಕರಿಗೆ ಒಂದು ದಿನದ ವೇತನವನ್ನು ಸರ್ಕಾರಿ ಶಾಲಾ ಶಿಕ್ಷಕರು ನೀಡುವಂತೆ ಈ ಮುನ್ನ ಕೇಳಲಾಗಿತ್ತು. ಆದರೆ ಖಾಸಗಿ ಶಾಲೆಗಳ ಒಕ್ಕೂಟ ಇಂದು ಆನ್​ಲೈನ್ ಸಭೆ ಮಾಡಿ ಈ ಮನವಿಗೆ ವಿರೋಧ ಹೊರಹಾಕಿತ್ತು. ಎಲ್ಲಾ ಜಿಲ್ಲೆಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಮತ್ತು ರಾಜ್ಯದ ಎಲ್ಲಾ ಪದಾಧಿಕಾರಿಗಳು ಸರ್ಕಾರದ ಪ್ರಸ್ತಾವನೆಗೆ ವಿರೋಧ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: Viral Video: ಕೊರೊನಾ ವಾರಿಯರ್ಸ್​ಗೆ ಗೌರವ ಸೂಚಿಸಲು ಐಟಿಬಿಪಿ ಕಾನ್​ಸ್ಟೇಬಲ್​ ಭಾವ ಪೂರ್ಣರಾಗ

ಕೊರೊನಾ ಸೋಂಕಿತೆಗೆ ಸಹಜ ಹೆರಿಗೆ ಮಾಡಿಸಿದ ಹಾವೇರಿ ಆಸ್ಪತ್ರೆ ವೈದ್ಯರು; ಕೊವಿಡ್ ವಾರಿಯರ್ಸ್​ಗೆ ಸಾರ್ವಜನಿಕರಿಂದ ಮೆಚ್ಚುಗೆ

(Govt Announces RDPR Rural Development Panchayat Raj workers as Corona Warriors)

Follow us on

Related Stories

Most Read Stories

Click on your DTH Provider to Add TV9 Kannada