AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Teaching Jobs: ಅತಿಥಿ ಉಪನ್ಯಾಸಕ ಹುದ್ದೆಗಳ ಆಕಾಂಕ್ಷಿಗಳಿಗೆ ಸುವರ್ಣಾವಕಾಶ; ನೇಮಕಾತಿ ವೇಳಾಪಟ್ಟಿ ಪ್ರಕಟ!

ಕರ್ನಾಟಕ ಸರ್ಕಾರಿ ಕಾಲೇಜುಗಳಲ್ಲಿ 2026-27ನೇ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕಟವಾಗಿದೆ. ಜೂನ್ 21 ರಿಂದ 27 ರವರೆಗೆ ಆನ್‌ಲೈನ್ ಅರ್ಜಿ ಸಲ್ಲಿಸಬಹುದು. ಜೂನ್ 28 ರಂದು ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟವಾಗಲಿದ್ದು, ಜೂನ್ 29-30 ರಂದು ತಿದ್ದುಪಡಿಗೆ ಅವಕಾಶವಿದೆ. ಜುಲೈ 1 ರಂದು ಕಾರ್ಯಭಾರ, ಜುಲೈ 7 ರಿಂದ ಆನ್‌ಲೈನ್ ಕೌನ್ಸೆಲಿಂಗ್ ನಡೆಯಲಿದೆ. ಹೆಚ್ಚಿನ ಮಾಹಿತಿಗೆ dce.karnataka.gov.in ಭೇಟಿ ನೀಡಿ.

Karnataka Teaching Jobs: ಅತಿಥಿ ಉಪನ್ಯಾಸಕ ಹುದ್ದೆಗಳ ಆಕಾಂಕ್ಷಿಗಳಿಗೆ ಸುವರ್ಣಾವಕಾಶ; ನೇಮಕಾತಿ ವೇಳಾಪಟ್ಟಿ ಪ್ರಕಟ!
ಅತಿಥಿ ಉಪನ್ಯಾಸಕರ ಹುದ್ದೆImage Credit source: Pinterest
ಅಕ್ಷತಾ ವರ್ಕಾಡಿ
|

Updated on: Jun 09, 2026 | 3:08 PM

Share

ಕಾಲೇಜು ಶಿಕ್ಷಣ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಕರ್ನಾಟಕ ಸರ್ಕಾರವು ಭರ್ಜರಿ ಸುದ್ದಿ ನೀಡಿದೆ. ಕಾಲೇಜು ಶಿಕ್ಷಣ ಇಲಾಖೆಯು 2026-27ನೇ ಶೈಕ್ಷಣಿಕ ಸಾಲಿಗಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಸರ್ಕಾರಿ ಸಂಸ್ಕೃತ ಮತ್ತು ಚಿತ್ರಕಲಾ ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ (Guest Lecturers) ಹುದ್ದೆಗಳ ಆಯ್ಕೆ ಪ್ರಕ್ರಿಯೆಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಬೋಧನಾ ಕಾರ್ಯಭಾರಕ್ಕೆ ಅನುಗುಣವಾಗಿ ಮೆರಿಟ್ ಮತ್ತು ಕೌನ್ಸೆಲಿಂಗ್ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎಂದು ಇಲಾಖೆ ತಿಳಿಸಿದೆ.

ಜೂನ್ 21 ರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ:

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜೂನ್ 21 ರಿಂದ ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅತಿಥಿ ಉಪನ್ಯಾಸಕ ಹುದ್ದೆಗಳಿಗೆ (ಗ್ರಂಥಪಾಲಕರು ಮತ್ತು ದೈಹಿಕ ಶಿಕ್ಷಣ ನಿರ್ದೇಶಕರು ಸೇರಿದಂತೆ) ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಿಗದಿತ ಸಮಯದೊಳಗೆ ತಮ್ಮ ಅರ್ಜಿಯನ್ನು ಪೂರ್ಣಗೊಳಿಸಬೇಕಾಗಿದ್ದು, ಅರ್ಜಿ ಸಲ್ಲಿಸಲು ಜೂನ್ 27 ಕೊನೆಯ ದಿನಾಂಕವಾಗಿರುತ್ತದೆ.

ಜೂನ್ 28 ಕ್ಕೆ ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟ:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ವಿದ್ಯಾರ್ಹತೆ ಮತ್ತು ಅರ್ಹತೆಯ ಆಧಾರದ ಮೇಲೆ ಸಿದ್ಧಪಡಿಸಲಾದ ತಾತ್ಕಾಲಿಕ ಮೆರಿಟ್ ಪಟ್ಟಿಯನ್ನು (Temporary Merit List) ಜೂನ್ 28 ರಂದು ಅಧಿಕೃತವಾಗಿ ಪ್ರಕಟಿಸಲಾಗುವುದು. ಅಭ್ಯರ್ಥಿಗಳು ತಮ್ಮ ಅರ್ಜಿಯಲ್ಲಿ ಯಾವುದೇ ಬದಲಾವಣೆ ಅಥವಾ ತಪ್ಪುಗಳಿದ್ದಲ್ಲಿ ಅವುಗಳನ್ನು ಸರಿಪಡಿಸಲು ಜೂನ್ 29 ಮತ್ತು 30 ರವರೆಗೆ ಎರಡು ದಿನಗಳ ಕಾಲ ಅರ್ಜಿ ತಿದ್ದುಪಡಿ (Edit Option) ಮಾಡಲು ಇಲಾಖೆಯು ಅವಕಾಶ ನೀಡಿದೆ.

ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ ಬಂಪರ್ ಉದ್ಯೋಗಾವಕಾಶ; 6,565 ಟೆಕ್ನೀಷಿಯನ್ ಹುದ್ದೆಗೆ ಅರ್ಜಿ ಆಹ್ವಾನ

ಜುಲೈ 1 ಕ್ಕೆ ಕಾರ್ಯಭಾರ (Workload) ವಿವರ ಬಿಡುಗಡೆ:

ರಾಜ್ಯದ ವಿವಿಧ ಸರ್ಕಾರಿ ಕಾಲೇಜುಗಳಲ್ಲಿ ಲಭ್ಯವಿರುವ ಒಟ್ಟು ಬೋಧನಾ ಕಾರ್ಯಭಾರದ (Workload) ಸಂಪೂರ್ಣ ವಿವರಗಳನ್ನು ಜುಲೈ 01, 2026 ರಂದು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದರಿಂದ ಅಭ್ಯರ್ಥಿಗಳು ತಮಗೆ ಸೂಕ್ತವಾದ ಕಾಲೇಜುಗಳನ್ನು ಆಯ್ಕೆ ಮಾಡಿಕೊಳ್ಳಲು ಸುಲಭವಾಗುತ್ತದೆ. ತದನಂತರ ಮೆರಿಟ್ ಪಟ್ಟಿಯ ಆಧಾರದ ಮೇಲೆ ಕಾಲೇಜು ಆಯ್ಕೆಗಾಗಿ ಜುಲೈ 07 ರಿಂದ ಆನ್‌ಲೈನ್ ಕೌನ್ಸೆಲಿಂಗ್ (Online Counselling) ಪ್ರಕ್ರಿಯೆಯು ಅಧಿಕೃತವಾಗಿ ಆರಂಭವಾಗಲಿದೆ.

ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ:

ಅತಿಥಿ ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ, ಅರ್ಜಿ ಸಲ್ಲಿಕೆ ಮತ್ತು ಮುಂದಿನ ಅಪ್‌ಡೇಟ್‌ಗಳಿಗಾಗಿ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್‌ ಆದ dce.karnataka.gov.in ಗೆ ಭೇಟಿ ನೀಡಲು ಕೋರಲಾಗಿದೆ. ಕೊನೆಯ ದಿನದ ವರೆಗೆ ಕಾಯದೇ ಅಭ್ಯರ್ಥಿಗಳು ಆದಷ್ಟು ಬೇಗ ಅರ್ಜಿ ಸಲ್ಲಿಸುವುದು ಉತ್ತಮ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More