Milk Price Hike: ರೈತರ ರಕ್ಷಣೆಗಾಗಿ ಹಾಲಿನ ದರ ಏರಿಕೆಗೆ ಸರ್ಕಾರ ಬದ್ಧ: ಸಚಿವ ಕೆ ವೆಂಕಟೇಶ್

ಹಾಲಿನ ದರ ಏರಿಕೆ: ಹಾಲು ಒಕ್ಕೂಟಗಳು ಮತ್ತು ಹಲವಾರು ರೈತರು ಖಾಸಗಿ ಡೇರಿಗಳಿಗೆ ವಲಸೆ ಹೋಗುತ್ತಿರುವ ಬಗ್ಗೆ ಉಲ್ಲೇಖಿಸಿದ ಅವರು ಹಾಲು ಒಕ್ಕೂಟಗಳನ್ನು ಉಳಿಸುವ ಸಲುವಾಗಿ ಹಾಲಿನ ದರವನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಕೆ ವೆಂಕಟೇಶ್ ಹೇಳಿದರು.

Milk Price Hike: ರೈತರ ರಕ್ಷಣೆಗಾಗಿ ಹಾಲಿನ ದರ ಏರಿಕೆಗೆ ಸರ್ಕಾರ ಬದ್ಧ: ಸಚಿವ ಕೆ ವೆಂಕಟೇಶ್
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on: Jul 12, 2023 | 12:41 PM

ಸರ್ಕಾರ ಈಗಾಗಲೇ ಹಾಲಿನ ದರವನ್ನು(Milk Price) ಹೆಚ್ಚಿಸುವ ಬಗ್ಗೆ ನಿರ್ಧಾರ ತೆಗೆದುಕೊಂಡಿದೆ, ಇದನ್ನು ಜಾರಿ ಮಾಡಲು ಆದೇಶ ಒಂದು ಬಾಕಿ ಇದೆ. ಇನ್ನೂ ಈ ಬಗ್ಗೆ ವಿಧಾನಪರಿಷತ್​ನಲ್ಲಿ ಸದಸ್ಯರೊಬ್ಬರು ಪ್ರಸ್ತಾಪ ಮಾಡಿದ್ದಾರೆ. ಇದಕ್ಕೆ ಉತ್ತರ ನೀಡಿದ ಪಶುಸಂಗೋಪನಾ ಸಚಿವ ಕೆ ವೆಂಕಟೇಶ್ ಅವರು ಹಾಲು ಒಕ್ಕೂಟಗಳು ಮತ್ತು ಹಲವಾರು ರೈತರು ಖಾಸಗಿ ಡೇರಿಗಳಿಗೆ ವಲಸೆ ಹೋಗುತ್ತಿರುವ ಬಗ್ಗೆ ಉಲ್ಲೇಖಿಸಿದ ಅವರು ಹಾಲು ಒಕ್ಕೂಟಗಳನ್ನು ಉಳಿಸುವ ಸಲುವಾಗಿ ಹಾಲಿನ ದರವನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮಂಗಳವಾರ ಹೇಳಿದರು. ವಿಧಾನ ಪರಿಷತ್ತಿನಲ್ಲಿ ಜೆಡಿಎಸ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ ಮತ್ತು ಎಸ್.ಎಲ್.ಭೋಜೇಗೌಡ ಅವರು ಹಾಲಿನ ದರ ಹೆಚ್ಚಳದ ಬಗ್ಗೆ ಪ್ರಸ್ತಾಪಿಸಿದ್ದಾರೆ, ಇದಕ್ಕೆ ಉತ್ತರ ನೀಡಿದ ಸಚಿವ ವೆಂಕಟೇಶ್, ಹಾಲಿನ ದರ ಹೆಚ್ಚಳದ ಪ್ರಸ್ತಾವನೆ ಸಿದ್ಧವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಂತಿಮ ಒಪ್ಪಿಗೆಗಾಗಿ ಕಾಯುತ್ತಿದ್ದೇನೆ ಎಂದು ಹೇಳಿದರು. ಹಾಲಿನ ದರ ಏರಿಕೆಯ ಮಾಡುವ ಬಗ್ಗೆ ಅಂತಿಮ ನಿರ್ಧಾರವನ್ನು ನಾವು ತೆಗೆದುಕೊಳ್ಳುವುದಿಲ್ಲ, ಆದರೆ ಸಿಎಂ ಜೊತೆ ಚರ್ಚಿಸಿದ ನಂತರ ಅದನ್ನು ಅಂತಿಮಗೊಳಿಸಲಾಗುವುದು ಎಂದು ಅವರು ಹೇಳಿದರು.

ಬೆಲೆ ಪರಿಷ್ಕರಣೆಯ ಕೊರತೆ, ಹೆಚ್ಚುತ್ತಿರುವ ಆಮದು ವೆಚ್ಚಗಳು ಮತ್ತು ಖಾಸಗಿ ಡೈರಿಗಳ ತೀವ್ರ ಪೈಪೋಟಿಯು ಭಾರತದ ಎರಡನೇ ಅತಿದೊಡ್ಡ ಹಾಲು ಉತ್ಪಾದಕರಾದ ಕರ್ನಾಟಕದ ಹೈನುಗಾರರನ್ನು ಹತಾಶೆಗೆ ದೂಡುತ್ತಿದೆ ಎಂದು ಸಚಿವರು ಹೇಳಿದರು. ದಕ್ಷಿಣ ಭಾರತದಲ್ಲಿ ಹೆಚ್ಚಿನ ಸಂಖ್ಯೆಯ ಡೈರಿ ಸಹಕಾರಿ ಸಂಸ್ಥೆಗಳು ಮತ್ತು ಉತ್ಪಾದಕ ಸದಸ್ಯರ ಹೊಂದಿರುವ ನಾವು ಬಿಕ್ಕಟ್ಟಿನತ್ತ ಸಾಗುತ್ತಿದೆ ಎಂದು ಚಿಂತೆಯಾಗುತ್ತಿದೆ. ಈ ಕಾರಣದಿಂದ ರಾಜ್ಯದಲ್ಲಿ ತಕ್ಷಣದಿಂದಲೇ ಹಾಲಿನ ದರ ಏರಿಕೆ ಮಾಡುವ ನಿರ್ಧಾರಕ್ಕೆ ಬರಬೇಕಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:Milk Price Hike: ವಿದ್ಯುತ್​ ಆಯ್ತು ಈಗ ಗ್ರಾಹಕರಿಗೆ ತಟ್ಟಲಿದೆಯಾ ಹಾಲಿನ ದರ ಏರಿಕೆ ಬಿಸಿ?

ಹೊಸ ಈ ನಿಯಮಗಳು ಜಾರಿಗೆ ಬರುವುದರ ಜತೆಗೆ, ಹಾಲು ಒಕ್ಕೂಟಗಳು ರೈತರಿಗೆ 70% ಸಬ್ಸಿಡಿಯನ್ನು ವಿತರಿಸಬೇಕಾಗುತ್ತದೆ ಮತ್ತು ರಾಜ್ಯ ಸರ್ಕಾರವು ಬಿಡುಗಡೆ ಮಾಡುವ 30% ಸಬ್ಸಿಡಿಯನ್ನು ಉಳಿಸಿಕೊಳ್ಳಲು ಅವರಿಗೆ ಅವಕಾಶ ನೀಡಬಹುದು ಎಂದು ಅವರು ಹೇಳಿದರು. ಒಬಿಸಿ ಮತ್ತು ಸಾಮಾನ್ಯ ವರ್ಗದ ರೈತರಿಗೆ ಫೆಬ್ರವರಿಯಿಂದ ಬಾಕಿ ಉಳಿದಿರುವ ಮತ್ತು ಎಸ್‌ಸಿ/ಎಸ್‌ಟಿ ರೈತರಿಗೆ ಏಪ್ರಿಲ್‌ನಿಂದ ಬಾಕಿ ಉಳಿದಿರುವ ಹಾಲಿನ ಬಾಕಿಯನ್ನು ಬಿಡುಗಡೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವರು ಸದನಕ್ಕೆ ಭರವಸೆ ನೀಡಿದರು.

ಸರಕಾರ ಜಾತಿವಾರು ಅನುದಾನ ಬಿಡುಗಡೆ ಮಾಡುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಎಂಎಲ್ ಸಿ ವೈ.ಎ.ನಾರಾಯಣಸ್ವಾಮಿ, ಸರಕಾರ ಹಣ ಬಿಡುಗಡೆ ಮಾಡುವಾಗ ಎಸ್ ಸಿ/ಎಸ್ ಟಿ ಮತ್ತು ಸಾಮಾನ್ಯ ರೈತರಿಗೆ ಬೇರೆ ಬೇರೆ ಮಾನದಂಡಗಳನ್ನು ಅಳವಡಿಸಿಕೊಳ್ಳಬಾರದು ಎಂದು ಆಗ್ರಹಿಸಿದರು. ರೈತರನ್ನು ಜಾತಿವಾರು ವಿಂಗಡಣೆ ಮಾಡದೆ ಒಂದೇ ಘಟಕವಾಗಿ ನೋಡಬೇಕು ಎಂದರು.

ಕರ್ನಾಟಕಕ್ಕೆ  ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ