AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಿ, ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರ ನಿರ್ಧಾ

Karnataka government decides to revive student union elections: ವಿದ್ಯಾರ್ಥಿಗಳಲ್ಲಿ ನಾಯಕತ್ವ ಹೊಣೆಗಾರಿಕೆ ಪ್ರಜಾಪ್ರಭುತ್ವ ಮೌಲ್ಯಗಳನ್ನು ಬೆಳೆಸಲು ಕಾಲೇಜು ಮತ್ತು ವಿವಿಗಳಲ್ಲಿ ಕಾಲೇಜು ಸಂಘಗಳ ಚುನಾವಣೆ ನಡೆಸಲು ಸರ್ಕಾರ ನಿರ್ಧರಿಸಿದೆ. ಸ್ವತಃ ವಿದ್ಯಾರ್ಥಿ ಮುಖಂಡರಾಗಿ ಬೆಳೆದು ರಾಜಕೀಯ ಬಂದಿರುವ ಡಿ.ಕೆ. ಶಿವಕುಮಾರ್ ಅವರು ಈ ನಿರ್ಧಾರದ ಹಿಂದಿನ ಬ್ರೇನ್. ಕೆಲ ತಿಂಗಳ ಹಿಂದೆ ಅವರು ವಿದ್ಯಾರ್ಥಿ ಸಂಘಕ್ಕೆ ಚುನಾವಣೆ ನಡೆಸಬೇಕೋ ಬೇಡವೋ ನಿರ್ಧರಿಸಲು 9 ಸದಸ್ಯರ ಸಮಿತಿ ರಚಿಸಿದ್ದರು.

ವಿವಿ, ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರ ನಿರ್ಧಾ
ಡಿಕೆ ಶಿವಕುಮಾರ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 06, 2026 | 1:12 PM

Share

ಬೆಂಗಳೂರು, ಮಾರ್ಚ್ 6: ಕಾಲೇಜುಗಳು ಹಾಗು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ (Student Union elections) ನಡೆಸಲು ಸರ್ಕಾರ ನಿರ್ಧರಿಸಿದೆ. ವಿದ್ಯಾರ್ಥಿ ಹಂತದಲ್ಲೇ ಮಕ್ಕಳಲ್ಲಿ ನಾಯಕತ್ವದ ಮನೋಭವ ಮತ್ತು ಹೊಣೆಗಾರಿಕೆ ಪ್ರಜಾಪ್ರಭುತ್ವ ಮೌಲ್ಯಗಳನ್ನು ಬೆಳೆಸಲು ಸರ್ಕಾರ ಈ ನಿರ್ಧಾರ ತೆಗೆದುಕೊಂಡಿರುವುದು ತಿಳಿದುಬಂದಿದೆ. ಮೂರು ದಶಕಗಳ ನಂತರ ವಿದ್ಯಾರ್ಥಿ ಸಂಘಗಳಿಗೆ ಚುನಾವಣೆ ನಡೆಯುವ ಕಾಲ ಸನ್ನಿಹಿತವಾಗಿದೆ.

ರಾಜ್ಯ ಸರ್ಕಾರ ಕೆಲ ತಿಂಗಳಿಂದಲೇ ಈ ನಿರ್ಧಾರದ ಪರಿಶೀಲನೆಯಲ್ಲಿತ್ತು. 2025ರ ಡಿಸೆಂಬರ್ ತಿಂಗಳಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಈ ನಿರ್ಧಾರ ತೆಗೆದುಕೊಳ್ಳಲು ಒಂದು ಸಮಿತಿ ರಚಿಸಿದ್ದರು. ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ನೇತೃತ್ವದ ಒಂದು ಮಂದಿ ಹಿರಿಯ ನಾಯಕರು ಈ ಮಂಡಳಿಯಲ್ಲಿದ್ದರು. ಬಹುತೇಕ ರಾಜಕೀಯ ಪಕ್ಷಗಳು ಸರ್ಕಾರದ ಈ ಪ್ರಸ್ತಾಪಕ್ಕೆ ಬೆಂಬಲ ವ್ಯಕ್ತಪಡಿಸಿವೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ಇವತ್ತಿನ ಹೆಚ್ಚಿನ ಹಿರಿಯ ರಾಜಕಾರಣಿಗಳು ವಿದ್ಯಾರ್ಥಿ ಸಂಘಗಳ ಚುನಾವಣಾ ರಾಜಕೀಯದಿಂದ ಪಳಗಿ ಬಂದಿರುವವರೆ.

ಇದನ್ನೂ ಓದಿ: Karnataka Budget: ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ- ಸಿದ್ದರಾಮಯ್ಯ

1997ರಿಂದ ನಡೆದಿಲ್ಲ ವಿದ್ಯಾರ್ಥಿ ಸಂಘ ಚುನಾವಣೆ

ಕರ್ನಾಟಕದಲ್ಲಿ 90ರ ದಶಕದವರೆಗೂ ಕಾಲೇಜು ಮತ್ತು ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ಬಹಳ ತೀವ್ರತೆಯಿಂದ ನಡೆಯುತ್ತಿತ್ತು. ಸಾರ್ವತ್ರಿಕ ಚುನಾವಣೆಗಳನ್ನೂ ಮೀರಿಸುವ ರೀತಿಯಲ್ಲಿ ಚುನಾವಣೆಗಳಾಗುತ್ತಿದ್ದವು. 1989-90ರ ಶೈಕ್ಷಣಿಕ ವರ್ಷದಲ್ಲಿ ರಾಜ್ಯ ಸರ್ಕಾರ ಮೊದಲ ಬಾರಿಗೆ ವಿದ್ಯಾರ್ಥಿ ಚುನಾವಣೆಗಳಿಗೆ ನಿಷೇಧ ಹಾಕಿತು. ಬಳಿಕ ಅದನ್ನು ತೆರವುಗೊಳಿಸಲಾಯಿತು. 1997-98ರಿಂದ ಚುನಾವಣೆ ಪೂರ್ಣವಾಗಿ ನಿಂತು ಹೋಯಿತು.

ಈಗ ರಾಜ್ಯದಲ್ಲಿ ಮತ್ತೆ ವಿದ್ಯಾರ್ಥಿ ಸಂಘದ ಚುನಾವಣೆ ಶುರು ಮಾಡಲು ಕಿಡಿ ಹಚ್ಚಿದ್ದು ಡಿಕೆ ಶಿವಕುಮಾರ್. ಅವರಿಂದ ಪುನಾರಂಭವಾದ ಈ ಯೋಚನೆಗೆ ಎಲ್ಲಾ ಪಕ್ಷಗಳ ಮುಖಂಡರು ಬೆಂಬಲ ನೀಡಿರುವುದು ವಿಶೇಷ. ಬಹುತೇಕ ಎಲ್ಲಾ ರಾಜಕೀಯ ಪಕ್ಷಗಳೂ ವಿದ್ಯಾರ್ಥಿ ಘಟಕ ಹೊಂದಿವೆ. ಬಿಜೆಪಿಯಲ್ಲಿ ಎಬಿವಿಪಿ, ಕಾಂಗ್ರೆಸ್​ನಲ್ಲಿ ಎನ್​ಎಸ್​ಯುಐ, ಎಡಪಕ್ಷಗಳ ಎಸ್​ಎಫ್​ಐ, ಎಐಎಸ್​ಎ, ಎಎಪಿಯ ಎಸ್​ಎಸ್​ಎಪಿ, ಅಂಬೇಡ್ಕರ್ ಸ್ಟುಡೆಂಟ್ಸ್ ಅಸೋಸಿಯೇಶನ್ ಇತ್ಯಾದಿ ಹಲವು ವಿದ್ಯಾರ್ಥಿಗಳ ಸಂಘಗಳು ದೇಶಾದ್ಯಂತ ಇವೆ. ಕರ್ನಾಟಕದಲ್ಲಿ ಎಬಿವಿಪಿ, ಎನ್​ಎಸ್​ಯುಐ ಹಿಂದಿನಿಂದಲೂ ಬಲಿಷ್ಠ ಎನಿಸಿವೆ.

ಇದನ್ನೂ ಓದಿ: ಮದ್ಯ ಪ್ರಿಯರಿಗೆ ಬಿಗ್​​ ಶಾಕ್​​ ನೀಡಿದ ಸಿದ್ದರಾಮಯ್ಯ: ಬಜೆಟ್​​​ನಲ್ಲಿ ಮಹತ್ವದ ನಿರ್ಧಾರ

ಸರ್ಕಾರಿ ಕಾಲೇಜು, ಪಬ್ಲಿಕ್ ಯೂನಿವರ್ಸಿಟಿಗಳಲ್ಲಿ ಚುನಾವಣೆ

ಸರ್ಕಾರಿ ಸ್ವಾಮ್ಯದ ಕಾಲೇಜುಗಳು ಮತ್ತು ಯೂನಿವರ್ಸಿಟಿಗಳಲ್ಲಿ ಮಾತ್ರ ವಿದ್ಯಾರ್ಥಿ ಸಂಘಗಳ ಚುನಾವಣೆ ಕಡ್ಡಾಯ ಮಾಡಬಹುದು. ಖಾಸಗಿ ಯೂನಿವರ್ಸಿಟಿಗಳಿಗೆ ಇದು ಅನ್ವಯ ಆಗದೇ ಇರಬಹುದು.

ಇನ್ನಷ್ಟು ರಾಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ