ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್‌ ನೀಡಿದ ಸರ್ಕಾರ: ಶೇ. 38.75 ತುಟ್ಟಿಭತ್ಯೆ ಹೆಚ್ಚಳ

ರಾಜ್ಯ ಸರ್ಕಾರಿ ನೌಕರರಿಗೆ ಜುಲೈ 1, 2023 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆ ದರಗಳನ್ನು ಮೂಲ ವೇತನದ ಶೇ. 35 ರಿಂದ ಶೇ. 38.75ಕ್ಕೆ ಹೆಚ್ಚಿಸಿ ಶನಿವಾರ ಆದೇಶ ಹೊರಡಿಸಿದೆ. ಆ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ದಸರಾ ಹಬ್ಬದ ಗಿಫ್ಟ್‌ ನೀಡಿದೆ.

ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್‌ ನೀಡಿದ ಸರ್ಕಾರ: ಶೇ. 38.75 ತುಟ್ಟಿಭತ್ಯೆ ಹೆಚ್ಚಳ
ಪ್ರಾತಿನಿಧಿಕ ಚಿತ್ರImage Credit source: en.m.wikipedia
Follow us
ಗಂಗಾಧರ​ ಬ. ಸಾಬೋಜಿ
|

Updated on:Oct 21, 2023 | 7:43 PM

ಬೆಂಗಳೂರು, ಅಕ್ಟೋಬರ್​​ 21: ಸರ್ಕಾರಿ ನೌಕರರ (government employees) ತುಟ್ಟಿಭತ್ಯೆ ಹೆಚ್ಚಿಸಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಆ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ದಸರಾ ಹಬ್ಬದ ಗಿಫ್ಟ್‌ ನೀಡಿದೆ. ರಾಜ್ಯ ಸರ್ಕಾರಿ ನೌಕರರಿಗೆ ಜುಲೈ 1, 2023 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆ ದರಗಳನ್ನು ಮೂಲ ವೇತನದ ಶೇ. 35 ರಿಂದ ಶೇ. 38.75ಕ್ಕೆ ಹೆಚ್ಚಿಸಿ ಶನಿವಾರ ಆದೇಶ ಹೊರಡಿಸಿದೆ.

ಈ ಕುರಿತಾಗಿ ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಜುಲೈ 1 ರಿಂದ ಜಾರಿಗೆ ಬರುವಂತೆ ಶೇ 3.75 ರಷ್ಟು ಹೆಚ್ಚಿಸಿ ಹಾಗೂ ಯುಜಿಸಿ, ಎಐಸಿಟಿಇ, ಐಸಿಎಆರ್​​ ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ ಎನ್​​​​ಜೆಪಿಸಿ ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ನು ಶೇ. 4 ಹೆಚ್ಚಿಸಿ ಅಂದರೆ ಶೇ 46ಕ್ಕೆ ಪರಿಷ್ಕರಿಸಿ ಆದೇಶ ಹೊರಡಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ಟ್ವೀಟ್​

ಇದರಿಂದ ಸರ್ಕಾರಕ್ಕೆ ವಾರ್ಷಿಕ ರೂ.1,109 ಕೋಟಿ ಹೆಚ್ಚುವರಿ ವೆಚ್ಚವಾಗಲಿದೆ. ನಮ್ಮ ಈ ಆದೇಶವು ರಾಜ್ಯ ಸರ್ಕಾರಿ ನೌಕರರ ದಸರಾ ಸಂಭ್ರಮವನ್ನು ಇಮ್ಮಡಿಗೊಳಿಸಲಿದೆ ಎಂದು ಭಾವಿಸಿದ್ದೇನೆ ಎಂದು ಎಕ್ಸ್​​ನಲ್ಲಿ ಬರೆದುಕೊಂಡಿದ್ದಾರೆ.

ಹುತಾತ್ಮ ಪೊಲೀಸ್​ ಸಿಬ್ಬಂದಿಯ ಗುಪು ವಿಮಾ ಮೊತ್ತ: 20 ಲಕ್ಷದಿಂದ 50 ಲಕ್ಷಕ್ಕೆ ಹೆಚ್ಚಿಸಲು ಸರ್ಕಾರ ನಿರ್ಧಾರ

ಹುತಾತ್ಮ ಪೊಲೀಸ್​ ಸಿಬ್ಬಂದಿಯ ಗುಪು ವಿಮಾ ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಆ ಮೂಲಕ ಪೊಲೀಸ್​​ ಸಿಬ್ಬಂದಿಗಳೂ ಸರ್ಕಾರ ದಸರಾ ಉಡುಗೊರೆ ನೀಡಿದೆ. ಪೊಲೀಸ್ ವ್ಯವಸ್ಥೆ ರಾಜ್ಯದ ಮತ್ತು ಸರ್ಕಾರದ ಘನತೆಯನ್ನು ಹೆಚ್ಚಿಸುವಂತೆ ಕೆಲಸ ಮಾಡುತ್ತದೆ. ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆಗೆ ನೇರ ಸಂಬಂಧವಿದೆ. ಯಾವ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಮರ್ಪಕವಾಗಿರುತ್ತದೋ ಅಲ್ಲಿಗೆ ಬಂಡವಾಳ ಹರಿದು ಬರುತ್ತದೆ, ಇದರಿಂದ ಉದ್ಯೋಗ ಸೃಜನೆಯಾಗಿ ಅಭಿವೃದ್ಧಿಯು ವೇಗ ಪಡೆದುಕೊಳ್ಳುತ್ತದೆ.

ಇದನ್ನೂ ಓದಿ: ವಿಧಾನಸೌಧದಲ್ಲಿರುವ ಜೆಡಿಎಸ್ ಕಚೇರಿ ಖಾಲಿ ಮಾಡಿಸುವಂತೆ ಸ್ಪೀಕರ್​ಗೆ ಕಾಂಗ್ರೆಸ್ ದೂರು

ಸಮಾಜ ರಕ್ಷಣೆಯ ಗುರುತರ ಜವಾಬ್ದಾರಿಯನ್ನು ಹೆಗಲ ಮೇಲೆ ಹೊತ್ತು ಹಗಲು, ರಾತ್ರಿಯೆನ್ನದೆ ದುಡಿಯುವ ಪೊಲೀಸರ ಸೇವೆಯನ್ನು ಗುರುತಿಸಿ, ಗೌರವಿಸುವುದು ನಮ್ಮ ಕರ್ತವ್ಯ ಎಂದು ಭಾವಿಸಿ ಸಾರ್ವಜನಿಕರ ಆಸ್ತಿಪಾಸ್ತಿ, ಪ್ರಾಣರಕ್ಷಣೆ ಹೀಗೆ ಕರ್ತವ್ಯ ಪಾಲನೆಯ ವೇಳೆ ಹುತಾತ್ಮರಾಗುವ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು ರೂ.20 ಲಕ್ಷದಿಂದ ರೂ.50 ಲಕ್ಷಕ್ಕೆ ಏರಿಕೆ ಮಾಡಲು ನಮ್ಮ ಸರ್ಕಾರವು ನಿರ್ಧರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:30 pm, Sat, 21 October 23