ಕೋಟಿ ಕೋಟಿ ಹಣ ಹಾಕಿ ಬೃಹತ್ ಟ್ಯಾಂಕ್ ನಿರ್ಮಾಣ.. 15 ವರ್ಷವಾದ್ರೂ ವಿದ್ಯುತ್ ಸಂಪರ್ಕ ಕೊಡದೆ ನಿರ್ಲಕ್ಷ್ಯ, ನೀರಿಗಾಗಿ ಪರದಾಟ

ಹಳ್ಳಿಗಾಡಿನ ಜನರ ನೀರಿನ ದಾಹ ನೀಗಿಸೋಕೆ ಸರ್ಕಾರ ಕೋಟಿಗಟ್ಟಲೇ ಹಣದ ಹೊಳೆನೇ ಹರಿಸುತ್ತಿದೆ. ಆದ್ರೆ ಅಲ್ಲಿ ನಿರ್ಮಾಣ ಮಾಡಿರುವ ನೀರಿನ ಟ್ಯಾಂಕ್‌ಗಳಲ್ಲಿ ದಶಕ ಕಳೆದ್ರೂ ಇಂದಿಗೂ ಹನಿ ನೀರು ಸಹ ಸಂಗ್ರಹಿಸಲು ಸಾಧ್ಯವಾಗ್ತಿಲ್ಲ. ಹೀಗಾಗಿ ಪ್ರತಿ ಬೇಸಿಗೆಯಲ್ಲೂ ಆ ಭಾಗದ ಜನ ಹನಿ ಹನಿ ನೀರಿಗೂ ಪರದಾಡುತ್ತಿದ್ದಾರೆ.

ಕೋಟಿ ಕೋಟಿ ಹಣ ಹಾಕಿ ಬೃಹತ್ ಟ್ಯಾಂಕ್ ನಿರ್ಮಾಣ.. 15 ವರ್ಷವಾದ್ರೂ ವಿದ್ಯುತ್ ಸಂಪರ್ಕ ಕೊಡದೆ ನಿರ್ಲಕ್ಷ್ಯ, ನೀರಿಗಾಗಿ ಪರದಾಟ
ನೀರಿಗಾಗಿ ಜನರ ಪರದಾಟ.. ಖಾಲಿ ಬಿಂದಿಗೆ ಹಿಡಿದು ನಿಂತಿರುವ ಮಹಿಳೆಯರು
Follow us
ಆಯೇಷಾ ಬಾನು
|

Updated on:Mar 14, 2021 | 2:58 PM

ರಾಯಚೂರು: ಓವರ್ ಹೆಡ್ ಟ್ಯಾಂಕ್‌ನಲ್ಲಿ ಸಂಗ್ರಹವಾಗುವ ನೀರು ಸಾವಿರಾರು ಜನರ ದಾಹ ನೀಗಿಸಬೇಕಿತ್ತು. ಆದ್ರೆ ಈ ನೀರಿನ ಟ್ಯಾಂಕ್‌ಗಳು ಇದ್ದು ಇಲ್ಲದಂತಾಗಿದೆ. ರಾಯಚೂರು ತಾಲೂಕಿನ ಬೂರ್ದಿಪಾಡ ಗ್ರಾಮದಲ್ಲಿ 4 ಕೋಟಿ ರೂಪಾಯಿ ಖರ್ಚು ಮಾಡಿ ನೀರಿನ ಟ್ಯಾಂಕ್ ನಿರ್ಮಾಣ ಮಾಡಲಾಗಿದೆ. ಈ ಟ್ಯಾಂಕ್‌ನಲ್ಲಿ ನೀರು ಸಂಗ್ರಹಿಸಿ ಸುತ್ತಲಿನ ನಾಲ್ಕೈದು ಗ್ರಾಮಗಳಿಗೆ ಕುಡಿಯುವ ನೀರು ಹರಿಸಬಹುದಾಗಿತ್ತು.

ಕೃಷ್ಣ ನದಿ ಮೂಲಕ ಈ ಟ್ಯಾಂಕಿಗೆ ನೀರು ತುಂಬಿಸಲು ಪೈಪ್‌ಲೈನ್ ಸಹ ಮಾಡಲಾಗಿದೆ. ಆದ್ರೆ ವಿದ್ಯುತ್ ಸಂಪರ್ಕ ಕಲ್ಪಿಸದೇ ಇರೋದ್ರಿಂದ ಇಂದಿಗೂ ಈ ಟ್ಯಾಂಕಿಗೆ ನೀರು ಸಂಗ್ರಹಿಸಲು ಸಾಧ್ಯವಾಗದೇ ಸದ್ಯ ಈಗ ಇದು ಬೀಳುವ ಹಂತಕ್ಕೆ ತಲುಪಿದೆ. ಹೀಗಾಗಿ ಪ್ರತಿ ಬೇಸಿಗೆಯಲ್ಲೂ ರಾಯಚೂರು ತಾಲೂಕಿನ ಗಡಿ ಗ್ರಾಮಗಳ ಜನ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ಹೀಗಾಗಿ ಅಧಿಕಾರಿಗಳ ಬೇಜವಾಬ್ದಾರಿ ನಡೆಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸ್ತಿದ್ದಾರೆ.

ಇನ್ನು ಇದೇ ರೀತಿ ಅತ್ಕೂರ ಗ್ರಾಮದಲ್ಲೂ ಸಹ ಕಳೆದ 15 ವರ್ಷದ ಹಿಂದೆಯೇ ನಿರ್ಮಿಸಲಾಗಿರುವ ಓವರ್ ಹೆಡ್ ಟ್ಯಾಂಕ್ ಮತ್ತು ನೀರು ಶುದ್ದೀಕರಣ ಘಟಕ ಇಂದಿಗೂ ಪ್ರಾರಂಭಿಸಲಾಗಿಲ್ಲ. ಹೀಗಾಗಿ ಅತ್ಕೂರು, ಡೊಂಗರಾಂಪುರ ಸೇರಿದಂತೆ ಸುತ್ತಲಿನ ಹಳ್ಳಿಗಳ ಜನ ಕುಡಿಯುವ ನೀರಿಗಾಗಿ ಪರದಾಡ್ತಿದ್ದಾರೆ. ಹೀಗೆ ರಾಯಚೂರು ಜಿಲ್ಲೆಯಾದ್ಯಂತ ಇದೇ ರೀತಿ ನಿರ್ಮಿಸಲಾಗಿರುವ 56 ಓವರ್ ಹೆಡ್ ನೀರಿನ ಟ್ಯಾಂಕಗಳು ನಿಸ್ಪ್ರಯೋಜಕ ಆಗಿರೋದು ದಾಖಲೆಯಿಂದ ಬಯಲಾಗಿದೆ. ಪ್ರತಿ ಓವರ್ ಹೆಡ್ ನೀರಿನ ಟ್ಯಾಂಕ್ 4 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಅಂದಾಜು 200 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಆದ್ರೆ ಈ 56 ಟ್ಯಾಂಕ್‌ಗಳಲ್ಲಿ ಇಂದಿಗೂ ಒಂದೇ ಒಂದು ಹನಿ ನೀರು ಸಹ ಸಂಗ್ರಹಿಸಲಾಗಿಲ್ಲ. ಹೀಗಾಗಿ ಇಲ್ಲಿ ಎಲ್ಲವೂ ಹೊಳೆಯಲ್ಲಿ ಹುಣಸೆ ಹಣ್ಣು ತೊಳೆದಂತಾಗಿದೆ.

ಗ್ರಾಮೀಣ ಭಾಗದ ಜನರಿಗೆ ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಸರ್ಕಾರ ಅನುದಾನ ನೀಡಿದ್ರೂ, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ನೀರು ಸಂಗ್ರಹವಾಗುತ್ತಿಲ್ಲ. ಇನ್ನಾದ್ರೂ ಸರ್ಕಾರ ಎಚ್ಚೆತ್ತುಕೊಂಡು ಜನರು ನೀರಿಗಾಗಿ ಪರದಾಡುವುದಕ್ಕೆ ಬ್ರೇಕ್ ಹಾಕಿಸಬೇಕಿದೆ.

ಇದನ್ನೂ ಓದಿ: ನೀರಿಗಾಗಿ 40 ಅಡಿ ಆಳದ ಬಾವಿ ತೆಗೆದ ಒಂದೇ ಕುಟುಂಬದ 6 ಮಂದಿ! ಎಲ್ಲಿ?

Published On - 2:58 pm, Sun, 14 March 21

ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ