ಕೇಂದ್ರದಿಂದ ಕರ್ನಾಟಕಕ್ಕೆ ಜಿಎಸ್​ಟಿ ಪರಿಹಾರ ಬಿಡುಗಡೆ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jul 15, 2021 | 11:38 PM

ಕರ್ನಾಟಕಕ್ಕೆ ₹ 8542 ಕೋಟಿ ಮೊತ್ತವು ಕೇಂದ್ರದ ಹಣಕಾಸು ಇಲಾಖೆಯಿಂದ ಬಿಡುಗಡೆಯಾಗಿದೆ. ಕೇಂದ್ರ ಸರ್ಕಾರವು ಸಾಲದ ಹಣದ ರೂಪದಲ್ಲಿ ಈ ಪರಿಹಾರವನ್ನು ನೀಡಿದೆ.

ಕೇಂದ್ರದಿಂದ ಕರ್ನಾಟಕಕ್ಕೆ ಜಿಎಸ್​ಟಿ ಪರಿಹಾರ ಬಿಡುಗಡೆ
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು: ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ನೀಡಬೇಕಿದ್ದ ಜಿಎಸ್​ಟಿ ಬಾಕಿ ಪರಿಹಾರದ ಹಣವನ್ನು ಗುರುವಾರ ಬಿಡುಗಡೆ ಮಾಡಿದೆ. ವಿವಿಧ ರಾಜ್ಯಗಳಿಗೆ ₹ 75 ಸಾವಿರ ಕೋಟಿ ಪರಿಹಾರ ಬಿಡುಗಡೆಯಾಗಿದೆ. ಇದರಲ್ಲಿ ಕರ್ನಾಟಕಕ್ಕೆ ₹ 8542 ಕೋಟಿ ಮೊತ್ತವು ಕೇಂದ್ರದ ಹಣಕಾಸು ಇಲಾಖೆಯಿಂದ ಬಿಡುಗಡೆಯಾಗಿದೆ. ಕೇಂದ್ರ ಸರ್ಕಾರವು ಸಾಲದ ಹಣದ ರೂಪದಲ್ಲಿ ಈ ಪರಿಹಾರವನ್ನು ನೀಡಿದೆ.

ಕರ್ನಾಟಕಕ್ಕೆ ಕಳೆದ ವರ್ಷದಷ್ಟೇ ಈ ವರ್ಷವೂ ಜಿಎಸ್​ಟಿ ಪರಿಹಾರ ಸಿಗಲಿದೆ. ರಾಜ್ಯಕ್ಕೆ ಬಾಕಿ ಇರುವ ಜಿಎಸ್​ಟಿ ಪರಿಹಾರ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಆದರೆ ಎಷ್ಟು ಪ್ರಮಾಣದ ಜಿಎಸ್​ಟಿ ದೊರೆಯಲಿದೆ ಎಂದು ನಾನು ಹೇಳಲು ಸಾಧ್ಯವಿಲ್ಲ. ಕೇಂದ್ರ ಸಾಲ ಪಡೆದು ರಾಜ್ಯಗಳಿಗೆ GST ಪರಿಹಾರ ಕೊಡುತ್ತಿದೆ. ಈ ಪ್ರಕ್ರಿಯೆ ಈ ವರ್ಷವೂ ಇದೇ ರೀತಿ ಮುಂದುವರಿಯಲಿದೆ ಎಂದು ಕೇಂದ್ರ ವಿತ್ತ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಈಚೆಗೆ ಹೇಳಿದ್ದರು.

ದೇಶದಲ್ಲಿ ಜಿಎಸ್​ಟಿ ಜಾರಿಯಾಗಿ ನಾಲ್ಕು ವರ್ಷ ಆಗಿದೆ. ಮುಂಬರುವ ಸಂಸತ್ ಅಧಿವೇಶನದಲ್ಲಿ ಜಿಎಸ್​ಟಿ ಪರಿಹಾರ ಕುರಿತು ನಡೆಯಲಿದೆ. ವಿಶೇಷ ಕಲಾಪದಲ್ಲಿ ರಾಜ್ಯಗಳ ಜಿಎಸ್​ಟಿ ಪರಿಹಾರ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದರು.

(Govt of India releases GST of Karnataka)

ಇದನ್ನೂ ಓದಿ: ಕೊರೊನಾ ಲಸಿಕೆಯ ಮೇಲೆ ಜಿಎಸ್‌ಟಿ ಬದಲಾವಣೆ ಇಲ್ಲ; ಉಳಿದ ಕೊರೊನಾ ಸಾಮಗ್ರಿ ಮೇಲೆ ಎಷ್ಟು ಜಿಎಸ್‌ಟಿ ಕಡಿಮೆಯಾಯ್ತು?

ಇದನ್ನೂ ಓದಿ: GST Council: ಬ್ಲ್ಯಾಕ್ ಫಂಗಸ್ ಔಷಧಗಳಿಗೆ ತೆರಿಗೆ ವಿನಾಯಿತಿ; ಕೊರೊನಾ ಲಸಿಕೆಯ ಮೇಲೆ ಶೇಕಡಾ 5 ಜಿಎಸ್​ಟಿ ಮುಂದುವರಿಕೆ