ಒಂದು ಕೋಟಿ ಕೊವಿಶೀಲ್ಡ್ ಡೋಸ್ ಲಸಿಕೆ ಖರೀದಿಸಲಿದೆ ರಾಜ್ಯ ಸರ್ಕಾರ

ಈ ಕುರಿತಂತೆ ಮಾತನಾಡಿದ ಅವರು, ಲಸಿಕೆ ಒಂದೇ ನಮ್ಮ ಜನರನ್ನು ಕಾಪಾಡಲು ಸಾಧ್ಯ. ಕೊರೊನಾ 3ನೇ ಅಲೆಯನ್ನು ತಡೆಯಬೇಕಾದರೆ ಲಸಿಕೆ ಪಡೆಯಬೇಕು. ಕಡ್ಡಾಯವಾಗಿ 2 ಡೋಸ್ ಲಸಿಕೆಯನ್ನು ಪಡೆಯಿರಿ ಎಂದು ರಾಜ್ಯದ ಜನರಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮನವಿ ಮಾಡಿಕೊಂಡಿದ್ದಾರೆ.

ಒಂದು ಕೋಟಿ ಕೊವಿಶೀಲ್ಡ್ ಡೋಸ್ ಲಸಿಕೆ ಖರೀದಿಸಲಿದೆ ರಾಜ್ಯ ಸರ್ಕಾರ
ಕೊವಿಶೀಲ್ಡ್​ ಲಸಿಕೆ
Follow us
guruganesh bhat
|

Updated on:Apr 27, 2021 | 3:18 PM

ಬೆಂಗಳೂರು: ಪುಣೆಯ ಸೆರಮ್ ಇನ್ಸ್​ಟಿಟ್ಯೂಟ್​ ಆಫ್ ಇಂಡಿಯಾದ ಬಳಿ ಒಂದು ಕೋಟಿ ಡೋಸ್ ಕೊವಿಶೀಲ್ಡ್ ಲಸಿಕೆ ಖರೀದಿಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಈಗಾಗಲೇ ಸೆರಮ್ ಇನ್ಸ್​ಟಿಟ್ಯೂಟ್​ಗೆ ಬೇಡಿಕೆ ಇಡಲಾಗಿದ್ದು ಏಪ್ರಿಲ್ 30ರೊಳಗೆ ಲಸಿಕೆ ಪೂರೈಕೆಯಾಗುವ ನಿರೀಕ್ಷೆಯಲ್ಲಿ ರಾಜ್ಯ ಸರ್ಕಾರವಿದೆ.

ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಎಲ್ಲರಿಗೂ ಲಸಿಕೆ ನೀಡುವತ್ತ ಸರಕಾರ ಮುಂದಾಗಿದೆ. ರಾಜ್ಯದಲ್ಲಿ ಕೊವಿಡ್​ ಲಸಿಕೆ ಕೊರತೆ ಇಲ್ಲ. 18 ವರ್ಷ ಮೇಲ್ಪಟ್ಟವರು ಕೂಡಾ 2 ಡೋಸ್​ ಲಸಿಕೆ​ ಪಡೆಯಬೇಕು. ಎಲ್ಲರಿಗೂ ಕೊವಿಡ್​ ಲಸಿಕೆ ನೀಡುವುದನ್ನು ಮುಂದುವರಿಸುತ್ತೇವೆ ಯಾರಿಗೂ ಈ ಬಗ್ಗೆ ಗೊಂದಲ ಬೇಡ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತಂತೆ ಮಾತನಾಡಿದ ಅವರು, ಲಸಿಕೆ ಒಂದೇ ನಮ್ಮ ಜನರನ್ನು ಕಾಪಾಡಲು ಸಾಧ್ಯ. ಕೊರೊನಾ 3ನೇ ಅಲೆಯನ್ನು ತಡೆಯಬೇಕಾದರೆ ಲಸಿಕೆ ಪಡೆಯಬೇಕು. ಕಡ್ಡಾಯವಾಗಿ 2 ಡೋಸ್ ಲಸಿಕೆಯನ್ನು ಪಡೆಯಿರಿ ಎಂದು ರಾಜ್ಯದ ಜನರಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮನವಿ ಮಾಡಿಕೊಂಡಿದ್ದಾರೆ.

ಕೊವಿಡ್​ ಹಿನ್ನೆಲೆಯಲ್ಲಿ ಕೋಲಾರಕ್ಕೆ 40 ವೆಂಟಿಲೇಟರ್‌ಗಳನ್ನು ನೀಡಲಾಗಿತ್ತು. ಅದರಲ್ಲಿ 20 ವೆಂಟಿಲೇಟರ್‌ಗಳನ್ನು ಮಾತ್ರ ಬಳಸುತ್ತಿದ್ದರು. ಇನ್ನುಳಿದ ವೆಂಟಿಲೇಟರ್ ಬಳಸದಿರುವುದು ಗಮನಕ್ಕೆ ಬಂತು. ಈ ನಿಟ್ಟಿನಲ್ಲಿ ಕೋಲಾರದ ಆಸ್ಪತ್ರೆಗೆ ಭೇಟಿ ನೀಡಿದ್ದೆ. ಈ ಕುರಿತಾಗಿ ಕೋಲಾರ ಜಿಲ್ಲಾ ಸರ್ಜನ್, ಆರ್‌ಎಂಒ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಚ್ಚರಿಕೆ ನೀಡಿದ್ದೇನೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಆಸ್ಪತ್ರೆಯಲ್ಲಿ ಕೊವಿಡ್ ವಾರ್ಡ್‌ಗಳಲ್ಲಿ ನಿಯಮಗಳನ್ನು ಪಾಲಿಸುತ್ತಿರಲಿಲ್ಲ. ಹೀಗಾಗಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದೇನೆ. ಎಲ್ಲ ಆಸ್ಪತ್ರೆಗಳಿಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Covid 19 Treatment in Bengaluru: ಬೆಂಗಳೂರಿನಲ್ಲಿ ತುರ್ತು ಕೊರೊನಾ ಆರೋಗ್ಯ ಸೇವೆಗಳಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ

Fact Check: ಋತುಚಕ್ರದ ಸಮಯದಲ್ಲಿ ಮಹಿಳೆಯರು ಕೊವಿಡ್ ಲಸಿಕೆ ಪಡೆಯಬಾರದು ಎಂಬುದು ವದಂತಿ, ನಂಬಬೇಡಿ

Explainer: 18ರಿಂದ 45 ವಯೋಮಾನದವರಿಗೆ ಕೋವಿಡ್ ಲಸಿಕೆ; ನೋಂದಣಿ ಹೇಗೆ? ಪಡೆದುಕೊಳ್ಳುವುದು ಎಲ್ಲಿ? ಡೇಟ್ ಮಿಸ್ ಆದ್ರೆ ಏನು ಮಾಡಬೇಕು?

(Govt of Karnataka orders 1 crore doses covishield vaccine from Serum Institute of India)

Published On - 3:17 pm, Tue, 27 April 21

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್