ರಾಮನಗರ, ಕನಕಪುರವನ್ನೂ ಒಳಗೊಂಡ ಗ್ರೇಟರ್ ಬೆಂಗಳೂರು ಸ್ಥಾಪನೆಗೆ ಸರ್ಕಾರ ಪ್ಲ್ಯಾನ್

ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಥಾರಿಟಿ ಅಸ್ತಿತ್ವಕ್ಕೆ ಬೆಂಗಳೂರು ಅಭಿವೃದ್ಧಿಗೆ ಸಚಿವ ಡಿಕೆ ಶಿವಕುಮಾರ್ ಚಿಂತನೆ ನಡೆಸಿದ್ದಾರೆ. ಸುಮಾರು 400 ವಾರ್ಡ್​ಗಳು ಗ್ರೇಟರ್ ಬೆಂಗಳೂರು ಅಥಾರಿಟಿ ವ್ಯಾಪ್ತಿಗೆ ಬರುವ ಸಾಧ್ಯತೆ ಇದೆ. ರಾಮನಗರ, ಕನಕಪುರವನ್ನೂ ಒಳಗೊಂಡ ಗ್ರೇಟರ್ ಬೆಂಗಳೂರು ಸ್ಥಾಪನೆಗೆ ಸರ್ಕಾರ ಚಿಂತನೆ ನಡೆಸಿದೆ.

ರಾಮನಗರ, ಕನಕಪುರವನ್ನೂ ಒಳಗೊಂಡ ಗ್ರೇಟರ್ ಬೆಂಗಳೂರು ಸ್ಥಾಪನೆಗೆ ಸರ್ಕಾರ ಪ್ಲ್ಯಾನ್
ರಾಮನಗರ, ಕನಕಪುರವನ್ನೂ ಒಳಗೊಂಡ ಗ್ರೇಟರ್ ಬೆಂಗಳೂರು ಸ್ಥಾಪನೆಗೆ ಸರ್ಕಾರ ಪ್ಲ್ಯಾನ್
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jul 04, 2024 | 4:50 PM

ಬೆಂಗಳೂರು, ಜುಲೈ 04: ಬೆಳೆಯುತ್ತಿರುವ ಬೆಂಗಳೂರಿಗೆ ಹೊಸ ರೂಪ, ಹೊಸ ವ್ಯಾಪ್ತಿ ನೀಡಲು ಸಿದ್ದತೆ ಮಾಡಲಾಗುತ್ತಿದೆ. ಗ್ರೇಟರ್ ಬೆಂಗಳೂರು (Greater Bangaluru) ಅಥಾರಿಟಿ ಸ್ಥಾಪನೆಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ಮಾಡಲಾಗುತ್ತಿದೆ. ಆ ಮೂಲಕ ರಾಮನಗರ, ಕನಕಪುರವನ್ನು ಬೆಂಗಳೂರಿಗೆ ಸೇರಿಸಲು ಚಿಂತನೆ ಮಾಡಲಾಗುತ್ತಿದೆ. ಈಗಾಗಲೇ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP) ಯನ್ನು 5 ಭಾಗಗಳಾಗಿ ವಿಭಜಿಸಲು ಸರ್ಕಾರ ಯೋಜಿಸಿತ್ತು. ಹೊಸದಾಗಿ ವಾರ್ಡ್​ಗಳನ್ನು ಸೇರಿಸಿಕೊಂಡು ವಿಸ್ತರಣೆ ಮಾಡಲು ಪ್ಲ್ಯಾನ್​ ಮಾಡಲಾಗುತ್ತಿದೆ.

ಇದೀಗ ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಥಾರಿಟಿ ಅಸ್ತಿತ್ವಕ್ಕೆ ಬೆಂಗಳೂರು ಅಭಿವೃದ್ಧಿಗೆ ಸಚಿವ ಡಿಕೆ ಶಿವಕುಮಾರ್ ಚಿಂತನೆ ನಡೆಸಿದ್ದಾರೆ. ಸುಮಾರು 400 ವಾರ್ಡ್​ಗಳು ಗ್ರೇಟರ್ ಬೆಂಗಳೂರು ಅಥಾರಿಟಿ ವ್ಯಾಪ್ತಿಗೆ ಬರುವ ಸಾಧ್ಯತೆ ಇದೆ.

ಇದನ್ನೂ ಓದಿ: BBMP ವಿಭಜನೆ ಮಾಡಿ ಗ್ರೇಟರ್‌ ಬೆಂಗಳೂರು ನಿರ್ಮಾಣಕ್ಕೆ ಮುಂದಾದ ಸರ್ಕಾರ; ಬೆಂಗಳೂರಿನ ಸುತ್ತಲಿನ ಪ್ರದೇಶ ಬಿಬಿಎಂಪಿ ವ್ಯಾಪ್ತಿಗೆ

ಬಿಡಬ್ಲ್ಯೂಎಸ್ಎಸ್​ಬಿ, ಬಿಡಿಎ ಕೂಡ ಇದೇ ವ್ಯಾಪ್ತಿಯ ಒಳಗಡೆ ಸೇರ್ಪಡೆ ಸಾಧ್ಯತೆ ಇದೆ. ಬೆಂಗಳೂರು ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ಬಂದರೆ ಕನಕಪುರ, ರಾಮನಗರ ಗಡಿ ಭಾಗಗಳು ಕೂಡ ಸೇರಿಕೊಳ್ಳುವ ಸಾಧ್ಯತೆ ಇದೆ.

ಇದನ್ನೂ ಓದಿ: BBMP: ಬಿಬಿಎಂಪಿ ಪುನರ್ ರಚನೆಗೆ ಸಮಿತಿ ಪನರ್​ ರಚಿಸಿದ ಕರ್ನಾಟಕ ಸರ್ಕಾರ

ಈ ಬಗ್ಗೆ ಚನ್ನಪಟ್ಟಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್​ ಸುಳಿವು ನೀಡಿದ್ದು,  ಈಗಾಲೇ ಅಧಿಕಾರಿಗಳ ಜೊತೆಗೆ ನಾಯಕರ ಮಾತುಕತೆ ನಡೆದಿದ್ದು, ನಗದೀಕರಣ, ಕಂದಾಯ ವ್ಯಾಪ್ತಿ ಸೇರಿ ಹಲವು ಕಾರಣ ಇಟ್ಟು ವಿಭಜನೆಗೆ ಚಿಂತನೆ ನಡೆಸಲಾಗಿದೆ.

ಬಿಬಿಎಂಪಿ 5 ಭಾಗಗಳಾಗಿ ವಿಭಜನೆ ಹೀಗೆ?

  • ಬೆಂಗಳೂರು ಸುತ್ತಲಿನ ಹಲವು ಪ್ರದೇಶವನ್ನು ಸೇರಿಸಿ 400 ವಾರ್ಡ್ಗಳನ್ನು ರಚಿಸುವಂತೆ ಶಿಫಾರಸು
  • ಬೆಂಗಳೂರು ಕೇಂದ್ರ, ಉತ್ತರ, ಪೂರ್ವ, ಪಶ್ಚಿಮ, ದಕ್ಷಿಣ ಎಂಬ ಐದು ಪಾಲಿಕೆಗಳನ್ನು ರಚಿಸುವಂತೆ ಸಲಹೆ
  • ಬಿಬಿಎಂಪಿಯಲ್ಲಿ ಮೂರು ಹಂತದ ಆಡಳಿತ ವ್ಯವಸ್ಥೆ ಜಾರಿಗೆ ತರವಂತೆ ಸಲಹೆ
  • ಇವುಗಳ ಮೇಲೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಮಾಡಬೇಕು ಎಂದು ವರದಿಯಲ್ಲಿ ಸಲಹೆ
  • ಆಡಳಿತ ಕೇಂದ್ರ ಬಿಬಿಎಂಪಿ ಮೂಲಕ ನಗರಗಳ ಅಭಿವೃದ್ಧಿ
  • ಬೆಂಗಳೂರು ಸುತ್ತಲ್ಲಿನ ನಗರಗಳು ಬಿಬಿಎಂಪಿ ವ್ಯಾಪ್ತಿಗೆ
  • ನೆಲಮಂಗಲ, ಹೊಸಕೋಟೆ, ಬಿಡದಿ, ರಾಮನಗರ, ಕನಕಪುರ, ದೇವನಹಳ್ಳಿ ಸೇರಿ‌ ಬೆಂಗಳೂರು ಗ್ರಾಮಾಂತರದ ಹಲವು ಜಿಲ್ಲೆಗಳು ಬಿಬಿಎಂಪಿ ವ್ಯಾಪ್ತಿಗೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ