ಬೆಂಗಳೂರು, ಜುಲೈ 04: ಬೆಳೆಯುತ್ತಿರುವ ಬೆಂಗಳೂರಿಗೆ ಹೊಸ ರೂಪ, ಹೊಸ ವ್ಯಾಪ್ತಿ ನೀಡಲು ಸಿದ್ದತೆ ಮಾಡಲಾಗುತ್ತಿದೆ. ಗ್ರೇಟರ್ ಬೆಂಗಳೂರು (Greater Bangaluru) ಅಥಾರಿಟಿ ಸ್ಥಾಪನೆಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ಮಾಡಲಾಗುತ್ತಿದೆ. ಆ ಮೂಲಕ ರಾಮನಗರ, ಕನಕಪುರವನ್ನು ಬೆಂಗಳೂರಿಗೆ ಸೇರಿಸಲು ಚಿಂತನೆ ಮಾಡಲಾಗುತ್ತಿದೆ. ಈಗಾಗಲೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಯನ್ನು 5 ಭಾಗಗಳಾಗಿ ವಿಭಜಿಸಲು ಸರ್ಕಾರ ಯೋಜಿಸಿತ್ತು. ಹೊಸದಾಗಿ ವಾರ್ಡ್ಗಳನ್ನು ಸೇರಿಸಿಕೊಂಡು ವಿಸ್ತರಣೆ ಮಾಡಲು ಪ್ಲ್ಯಾನ್ ಮಾಡಲಾಗುತ್ತಿದೆ.
ಇದೀಗ ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಥಾರಿಟಿ ಅಸ್ತಿತ್ವಕ್ಕೆ ಬೆಂಗಳೂರು ಅಭಿವೃದ್ಧಿಗೆ ಸಚಿವ ಡಿಕೆ ಶಿವಕುಮಾರ್ ಚಿಂತನೆ ನಡೆಸಿದ್ದಾರೆ. ಸುಮಾರು 400 ವಾರ್ಡ್ಗಳು ಗ್ರೇಟರ್ ಬೆಂಗಳೂರು ಅಥಾರಿಟಿ ವ್ಯಾಪ್ತಿಗೆ ಬರುವ ಸಾಧ್ಯತೆ ಇದೆ.
ಇದನ್ನೂ ಓದಿ: BBMP ವಿಭಜನೆ ಮಾಡಿ ಗ್ರೇಟರ್ ಬೆಂಗಳೂರು ನಿರ್ಮಾಣಕ್ಕೆ ಮುಂದಾದ ಸರ್ಕಾರ; ಬೆಂಗಳೂರಿನ ಸುತ್ತಲಿನ ಪ್ರದೇಶ ಬಿಬಿಎಂಪಿ ವ್ಯಾಪ್ತಿಗೆ
ಬಿಡಬ್ಲ್ಯೂಎಸ್ಎಸ್ಬಿ, ಬಿಡಿಎ ಕೂಡ ಇದೇ ವ್ಯಾಪ್ತಿಯ ಒಳಗಡೆ ಸೇರ್ಪಡೆ ಸಾಧ್ಯತೆ ಇದೆ. ಬೆಂಗಳೂರು ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ಬಂದರೆ ಕನಕಪುರ, ರಾಮನಗರ ಗಡಿ ಭಾಗಗಳು ಕೂಡ ಸೇರಿಕೊಳ್ಳುವ ಸಾಧ್ಯತೆ ಇದೆ.
ಇದನ್ನೂ ಓದಿ: BBMP: ಬಿಬಿಎಂಪಿ ಪುನರ್ ರಚನೆಗೆ ಸಮಿತಿ ಪನರ್ ರಚಿಸಿದ ಕರ್ನಾಟಕ ಸರ್ಕಾರ
ಈ ಬಗ್ಗೆ ಚನ್ನಪಟ್ಟಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸುಳಿವು ನೀಡಿದ್ದು, ಈಗಾಲೇ ಅಧಿಕಾರಿಗಳ ಜೊತೆಗೆ ನಾಯಕರ ಮಾತುಕತೆ ನಡೆದಿದ್ದು, ನಗದೀಕರಣ, ಕಂದಾಯ ವ್ಯಾಪ್ತಿ ಸೇರಿ ಹಲವು ಕಾರಣ ಇಟ್ಟು ವಿಭಜನೆಗೆ ಚಿಂತನೆ ನಡೆಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.