ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ
ಬೆಂಗಳೂರು: ಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇದರ ಪ್ರಕಾರ ದೇವಸ್ಥಾನದಲ್ಲಿ, ಮನೆಗಳಲ್ಲಿ ಅಥವಾ ಸರ್ಕಾರಿ, ಖಾಸಗಿ, ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಟ ಸಂಖ್ಯೆಯೊಂದಿಗೆ ಗಣೇಶೋತ್ಸವ ಆಚರಿಸಬಹುದು ಎಂದು ಸಿಎಂ ಕಚೇರಿಯಿಂದ ಟ್ವೀಟ್ ಮಾಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಎರಡು ಅಡಿ ಮೀರದಂತೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಬಹುದು. ಪಾರಂಪರಿಕ ಗಣೇಶೋತ್ಸವಕ್ಕೆ, ಗಣೇಶೋತ್ಸವ ಸಮಿತಿಗಳ, ಮುನ್ಸಿಪಲ್ ಕಾರ್ಪೊರೇಷನ್, ಸ್ಥಳೀಯ ಆಡಳಿತದಿಂದ ಪೂರ್ವಾನುಮತಿ ಪಡೆಯಬೇಕು. ಸಾರ್ವಜನಿಕ ಮೂರ್ತಿ […]

ಬೆಂಗಳೂರು: ಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇದರ ಪ್ರಕಾರ ದೇವಸ್ಥಾನದಲ್ಲಿ, ಮನೆಗಳಲ್ಲಿ ಅಥವಾ ಸರ್ಕಾರಿ, ಖಾಸಗಿ, ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಟ ಸಂಖ್ಯೆಯೊಂದಿಗೆ ಗಣೇಶೋತ್ಸವ ಆಚರಿಸಬಹುದು ಎಂದು ಸಿಎಂ ಕಚೇರಿಯಿಂದ ಟ್ವೀಟ್ ಮಾಡಲಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಎರಡು ಅಡಿ ಮೀರದಂತೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಬಹುದು. ಪಾರಂಪರಿಕ ಗಣೇಶೋತ್ಸವಕ್ಕೆ, ಗಣೇಶೋತ್ಸವ ಸಮಿತಿಗಳ, ಮುನ್ಸಿಪಲ್ ಕಾರ್ಪೊರೇಷನ್, ಸ್ಥಳೀಯ ಆಡಳಿತದಿಂದ ಪೂರ್ವಾನುಮತಿ ಪಡೆಯಬೇಕು. ಸಾರ್ವಜನಿಕ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ. ಒಂದು ವಾರ್ಡ್ಗೆ, ಗ್ರಾಮಕ್ಕೆ ಒಂದು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು. ಇಂತಹ ಸಾರ್ವಜನಿಕ ಸ್ಥಳಗಳಲ್ಲಿ 20 ಜನರಿಗೆ ಸೀಮಿತವಾದ ಆವರಣವನ್ನು ನಿರ್ಮಿಸುವುದು. ಒಮ್ಮೆಲೆ 20ಕ್ಕಿಂತ ಹೆಚ್ಚು ಜನ ಸೇರದಂತೆ ನೋಡಿಕೊಳ್ಳಬೇಕು.
ಗಣೇಶೋತ್ಸವ ಹೆಸರಲ್ಲಿ ಮನರಂಜನಾ ಕಾರ್ಯಕ್ರಮವಿಲ್ಲ ಗಣೇಶೋತ್ಸವ ಹೆಸರಲ್ಲಿ ಮನರಂಜನಾ ಕಾರ್ಯಕ್ರಮವಿಲ್ಲ. ಯಾವುದೇ ರೀತಿಯ ಮೆರವಣಿಗೆ ಮಾಡುವಂತಿಲ್ಲ. ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಿ ಅಥವಾ ಯಾವುದೇ ಸಂದರ್ಭಗಳಲ್ಲಿ ಯಾವುದೇ ರೀತಿಯ ಮೆರವಣಿಗೆ ಮಾಡುವಂತಿಲ್ಲ. ಇದನ್ನು ಸಂಪೂರ್ಣವಾಗಿ ನಿರ್ಬಂಧಿಸಿದೆ. ಈ ಎಲ್ಲಾ ಮಾರ್ಗಸೂಚಿಗಳನ್ನು ಪಾಲಿಸಿ ಜನ ಗಣೇಶ ಹಬ್ಬವನ್ನು ಆಚರಿಸಬೇಕಿದೆ.
ಪಾರಂಪರಿಕ ಗಣೇಶ ಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಗಳನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸಬೇಕು. ಮತ್ತು ಸರ್ಕಾರಿ, ಖಾಸಗಿ ಬಯಲು ಪ್ರದೇಶಗಳಲ್ಲಿ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಗಳನ್ನು ಅತೀ ಸಮೀಪ ವಾಗುವಂತಹ ಮಾರ್ಗ ಗಳನ್ನು ಬಳಸಿಕೊಂಡು ಮಹಾನಗರ ಪಾಲಿಕೆ, ಜಿಲ್ಲಾಡಳಿತ ಹತ್ತಿರದ ಸ್ಥಳೀಯ ಸಂಸ್ಥೆಗಳ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೋಂಡ ಅಥವಾ ಮೊಬೈಲ್ ಟ್ಯಾಂಕ್‌ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್ಗಳಲ್ಲಿ ವಿಸರ್ಜಿಸಬೇಕು.




