AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಬ್ಬನೇ ವಿದ್ಯಾರ್ಥಿ‌ ಇದ್ದರೂ ಸರ್ಕಾರಿ ಶಾಲೆ ಮುಚ್ಚಬಾರದು: ಮಂಡ್ಯ ಸಮ್ಮೇಳನ ಅಧ್ಯಕ್ಷ ಗೊರುಚ

ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಗೊ.ರು ಚನ್ನಬಸಪ್ಪ ಅವರ ಅಧ್ಯಕ್ಷತೆಯಲ್ಲಿ ಅದ್ದೂರಿಯಾಗಿ ಉದ್ಘಾಟನೆಯಾಗಿದೆ. ಕನ್ನಡ ಭಾಷೆಯ ಸಂರಕ್ಷಣೆ, ಶಿಕ್ಷಣದಲ್ಲಿ ಕನ್ನಡ ಮಾಧ್ಯಮದ ಪ್ರಾಮುಖ್ಯತೆ, ಹಾಗೂ ತಂತ್ರಜ್ಞಾನದ ಬಳಕೆ ಮುಂತಾದ ವಿಷಯಗಳ ಬಗ್ಗೆ ಗೊ.ರು ಚನ್ನಬಸಪ್ಪ ಮಾತನಾಡಿದ್ದಾರೆ. ಸರ್ಕಾರದಿಂದ ಕನ್ನಡ ಭಾಷೆ ಮತ್ತು ಶಿಕ್ಷಣಕ್ಕೆ ಒತ್ತು ನೀಡುವಂತೆ ಒತ್ತಾಯಿಸಿದ್ದಾರೆ.

ಒಬ್ಬನೇ ವಿದ್ಯಾರ್ಥಿ‌ ಇದ್ದರೂ ಸರ್ಕಾರಿ ಶಾಲೆ ಮುಚ್ಚಬಾರದು: ಮಂಡ್ಯ ಸಮ್ಮೇಳನ ಅಧ್ಯಕ್ಷ ಗೊರುಚ
ಒಬ್ಬನೇ ವಿದ್ಯಾರ್ಥಿ‌ ಇದ್ದರೂ ಸರ್ಕಾರಿ ಶಾಲೆ ಮುಚ್ಚಬಾರದು: ಮಂಡ್ಯ ಸಮ್ಮೇಳನ ಅಧ್ಯಕ್ಷ ಗೊರುಚ
ಪ್ರಶಾಂತ್​ ಬಿ.
| Edited By: |

Updated on:Dec 20, 2024 | 5:02 PM

Share

ಮಂಡ್ಯ, ಡಿಸೆಂಬರ್​ 20: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ (Kannada Sahitya Sammelana) ಇಂದು ಅದ್ದೂರಿಯಾಗಿ ಚಾಲನೆ ಸಿಕ್ಕಿದೆ. ನಾಡೋಜ ಗೊ ರು ಚನ್ನಬಸಪ್ಪ ಅಧ್ಯಕ್ಷತೆಯಲ್ಲಿ ಕನ್ನಡದ ತೇರು ಸಾಗಿದರೆ, ದೀಪ ಬೆಳಗಿಸುವುದರೊಂದಿಗೆ ಸಿಎಂ ಸಿದ್ದರಾಮಯ್ಯ ನುಡಿಜಾತ್ರೆಗೆ ಚಾಲನೆ ನೀಡಿದ್ದಾರೆ. ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಸಾಕಷ್ಟು ಖುಷಿಯ ವಿಚಾರ ಎಂದು ಗೊ.ರು ಚನ್ನಬಸಪ್ಪ ಅವರು ಭಾಷಣದ ಮಧ್ಯೆ ಭಾವುಕರಾಗಿದ್ದಾರೆ.

ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಗೊ.ರು ಚನ್ನಬಸಪ್ಪ ಅವರು, ಕಸಾಪ ಕನ್ನಡ ಪ್ರಾತಿನಿಧಿಕ ಸಂಸ್ಥೆಯಾಗಿದೆ. ಮಂಡ್ಯ ಸಾಕಷ್ಟು ಹೆಸರು ಮಾಡಿರುವ ಜಿಲ್ಲೆ. ರಾಜಕೀಯಕ್ಕೆ ಹೆಚ್ಚು ಕೊಡುಗೆ ಕೊಟ್ಟಿದೆ. ಮಂಡ್ಯದಲ್ಲಿ ಹೆಚ್ಚು ಕನ್ನಡ ಮಾತನಾಡುತ್ತಾರೆ. ನನಗೆ ಗೌರವಾಧ್ಯಕ್ಷ ಮಾಡಿರುವುದು ಹೆಮ್ಮೆಯ ವಿಚಾರ ಎಂದು ಹೇಳಿದ್ದಾರೆ.

ಇದನ್ನೂ ಓದಿ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ: ಹಲವು ವಿಶೇಷತೆಗಳಿಂದ ಕೂಡಿದ ನುಡಿ ಹಬ್ಬ

1994ರಲ್ಲಿ ನಾನು ಕಸಾಪ ಅಧ್ಯಕ್ಷನಾಗಿದ್ದೆ. ಆಗ ಮಂಡ್ಯದಲ್ಲಿ ಸಾಹಿತ್ಯ ಸಮ್ಮೇಳನ ನಡೆದಿತ್ತು. ಸಿಕ್ಕಿರುವ ಅವಕಾಶ ಅನಿರೀಕ್ಷಿತ. ನನಗೆ ಅಧ್ಯಕ್ಷರಾಗಬೇಕು ಎಂದಾಗ ಬೆರಗಾದೆ. ಪರಿಷತ್ ಕನ್ನಡಿಗರ ಸಾರ್ವಭೌಮ ಸಂಸ್ಥೆ. ನನಗೆ ಧ್ವಜ ಹಸ್ತಾಂತರ ಮಾಡಿರುವುದು ರಾಜಕೀಯ ಅಲ್ಲ. ಇದಕ್ಕೆ ಒಂದು ಘನತೆ ಇದೆ. ಶಿಕ್ಷಣ, ತಂತ್ರಜ್ಞಾನ, ಹಿಂದಿ ಏರಿಕೆ, ಗಣಿಗ ಕಲಿಕಾ ಕೇಂದ್ರಗಳು, ಪರಿಸರ ಸಂರಕ್ಷಣೆ ಇವುಗಳ ಬಗ್ಗೆ ಚರ್ಚೆ ಮಾಡಬೇಕು. ನಮ್ಮ ಭಾಷೆ ಸಮೃದ್ಧವಾಗಿ ಬೆಳೆಯಬೇಕು ಎಂದಿದ್ದಾರೆ.

ಒಬ್ಬನೇ ವಿದ್ಯಾರ್ಥಿ‌ ಇದ್ದರು ಸರ್ಕಾರಿ ಶಾಲೆ ಮುಚ್ಚಬಾರದು

ಒಂದನೆಯ ತರಗತಿಯಿಂದ 10ನೇ ತರಗತಿವರೆಗೆ ಕನ್ನಡ ಮಾಧ್ಯಮವೇ ಕಡ್ಡಾಯವಾಗಬೇಕು. ಯಾವ ಕಾರಣಕ್ಕೂ ಬೇರೆ ಭಾಷೆಯನ್ನೂ ಶಿಕ್ಷಣ ಮಾಧ್ಯಮವಾಗಿ ಹೇರಬಾರದು. ಶಿಕ್ಷಣ ಮಾಧ್ಯಮ ಕನ್ನಡ ಮಾಧ್ಯಮದಲ್ಲೇ ಆಗಬೇಕು. ಎಲ್ಲರಿಗೂ ಶಿಕ್ಷಣ ನೀಡುವುದನ್ನು ಸರ್ಕಾರ ಕರ್ತವ್ಯವಾಗಿ ಪರಿಗಣಿಸಬೇಕು. ಒಬ್ಬನೇ ವಿದ್ಯಾರ್ಥಿ‌ ಇದ್ದರು ಸರ್ಕಾರಿ ಶಾಲೆ ಮುಚ್ಚಬಾರದು. ಆಧುನಿಕ ತಂತ್ರಜ್ಞಾನವನ್ನ ಭಾಷೆಯ ಬೆಳೆವಣಿಗೆಗೆ ಹೇಗೆ ಬೆಳಸಿಕೊಳ್ಳಬೇಕು ಎಂಬುದು ಮುಖ್ಯ. ಈ ವಿಚಾರದಲ್ಲಿ ರಾಜ್ಯ ಹಿಂದೆ ಬೀಳಬಾರದು ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಹೋಗುವವರಿಗೆ ಕೆಎಸ್​ಆರ್​ಟಿಸಿ ವಿಶೇಷ ಬಸ್ ವ್ಯವಸ್ಥೆ: ಇಲ್ಲಿದೆ ವಿವರ

ತೆರಿಗೆ ವಿಚಾರವಾಗಿ ಮಾತನಾಡಿದ ಅವರು, ಹಣಕಾಸು ಆಯೋಗ ಕರ್ನಾಟಕಕ್ಕೆ ಬರಬೇಕಾದ ತೆರಿಗೆಯ ಪಾಲನ್ನು ವರ್ಗಾಯಿಸುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯದ ಬಗ್ಗೆ ಧ್ವನಿ ಎತ್ತಿರುವುದರಲ್ಲಿ ಕೂಡ ಸತ್ಯಾಂಶವಿದೆ. ಈ ಮಾತನ್ನು ರಾಜಕೀಯವಾಗಿ ನೋಡದಂತೆ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:00 pm, Fri, 20 December 24

Follow Us
ಪ್ರಶಾಂತ್​ ಬಿ.
ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ