ಮಂಡ್ಯ, ಡಿಸೆಂಬರ್ 20: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ (Kannada Sahitya Sammelana) ಇಂದು ಅದ್ದೂರಿಯಾಗಿ ಚಾಲನೆ ಸಿಕ್ಕಿದೆ. ನಾಡೋಜ ಗೊ ರು ಚನ್ನಬಸಪ್ಪ ಅಧ್ಯಕ್ಷತೆಯಲ್ಲಿ ಕನ್ನಡದ ತೇರು ಸಾಗಿದರೆ, ದೀಪ ಬೆಳಗಿಸುವುದರೊಂದಿಗೆ ಸಿಎಂ ಸಿದ್ದರಾಮಯ್ಯ ನುಡಿಜಾತ್ರೆಗೆ ಚಾಲನೆ ನೀಡಿದ್ದಾರೆ. ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಸಾಕಷ್ಟು ಖುಷಿಯ ವಿಚಾರ ಎಂದು ಗೊ.ರು ಚನ್ನಬಸಪ್ಪ ಅವರು ಭಾಷಣದ ಮಧ್ಯೆ ಭಾವುಕರಾಗಿದ್ದಾರೆ.
ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಗೊ.ರು ಚನ್ನಬಸಪ್ಪ ಅವರು, ಕಸಾಪ ಕನ್ನಡ ಪ್ರಾತಿನಿಧಿಕ ಸಂಸ್ಥೆಯಾಗಿದೆ. ಮಂಡ್ಯ ಸಾಕಷ್ಟು ಹೆಸರು ಮಾಡಿರುವ ಜಿಲ್ಲೆ. ರಾಜಕೀಯಕ್ಕೆ ಹೆಚ್ಚು ಕೊಡುಗೆ ಕೊಟ್ಟಿದೆ. ಮಂಡ್ಯದಲ್ಲಿ ಹೆಚ್ಚು ಕನ್ನಡ ಮಾತನಾಡುತ್ತಾರೆ. ನನಗೆ ಗೌರವಾಧ್ಯಕ್ಷ ಮಾಡಿರುವುದು ಹೆಮ್ಮೆಯ ವಿಚಾರ ಎಂದು ಹೇಳಿದ್ದಾರೆ.
ಇದನ್ನೂ ಓದಿ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ: ಹಲವು ವಿಶೇಷತೆಗಳಿಂದ ಕೂಡಿದ ನುಡಿ ಹಬ್ಬ
1994ರಲ್ಲಿ ನಾನು ಕಸಾಪ ಅಧ್ಯಕ್ಷನಾಗಿದ್ದೆ. ಆಗ ಮಂಡ್ಯದಲ್ಲಿ ಸಾಹಿತ್ಯ ಸಮ್ಮೇಳನ ನಡೆದಿತ್ತು. ಸಿಕ್ಕಿರುವ ಅವಕಾಶ ಅನಿರೀಕ್ಷಿತ. ನನಗೆ ಅಧ್ಯಕ್ಷರಾಗಬೇಕು ಎಂದಾಗ ಬೆರಗಾದೆ. ಪರಿಷತ್ ಕನ್ನಡಿಗರ ಸಾರ್ವಭೌಮ ಸಂಸ್ಥೆ. ನನಗೆ ಧ್ವಜ ಹಸ್ತಾಂತರ ಮಾಡಿರುವುದು ರಾಜಕೀಯ ಅಲ್ಲ. ಇದಕ್ಕೆ ಒಂದು ಘನತೆ ಇದೆ. ಶಿಕ್ಷಣ, ತಂತ್ರಜ್ಞಾನ, ಹಿಂದಿ ಏರಿಕೆ, ಗಣಿಗ ಕಲಿಕಾ ಕೇಂದ್ರಗಳು, ಪರಿಸರ ಸಂರಕ್ಷಣೆ ಇವುಗಳ ಬಗ್ಗೆ ಚರ್ಚೆ ಮಾಡಬೇಕು. ನಮ್ಮ ಭಾಷೆ ಸಮೃದ್ಧವಾಗಿ ಬೆಳೆಯಬೇಕು ಎಂದಿದ್ದಾರೆ.
ಒಂದನೆಯ ತರಗತಿಯಿಂದ 10ನೇ ತರಗತಿವರೆಗೆ ಕನ್ನಡ ಮಾಧ್ಯಮವೇ ಕಡ್ಡಾಯವಾಗಬೇಕು. ಯಾವ ಕಾರಣಕ್ಕೂ ಬೇರೆ ಭಾಷೆಯನ್ನೂ ಶಿಕ್ಷಣ ಮಾಧ್ಯಮವಾಗಿ ಹೇರಬಾರದು. ಶಿಕ್ಷಣ ಮಾಧ್ಯಮ ಕನ್ನಡ ಮಾಧ್ಯಮದಲ್ಲೇ ಆಗಬೇಕು. ಎಲ್ಲರಿಗೂ ಶಿಕ್ಷಣ ನೀಡುವುದನ್ನು ಸರ್ಕಾರ ಕರ್ತವ್ಯವಾಗಿ ಪರಿಗಣಿಸಬೇಕು. ಒಬ್ಬನೇ ವಿದ್ಯಾರ್ಥಿ ಇದ್ದರು ಸರ್ಕಾರಿ ಶಾಲೆ ಮುಚ್ಚಬಾರದು. ಆಧುನಿಕ ತಂತ್ರಜ್ಞಾನವನ್ನ ಭಾಷೆಯ ಬೆಳೆವಣಿಗೆಗೆ ಹೇಗೆ ಬೆಳಸಿಕೊಳ್ಳಬೇಕು ಎಂಬುದು ಮುಖ್ಯ. ಈ ವಿಚಾರದಲ್ಲಿ ರಾಜ್ಯ ಹಿಂದೆ ಬೀಳಬಾರದು ಎಂದು ಸಲಹೆ ನೀಡಿದ್ದಾರೆ.
ಇದನ್ನೂ ಓದಿ: ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಹೋಗುವವರಿಗೆ ಕೆಎಸ್ಆರ್ಟಿಸಿ ವಿಶೇಷ ಬಸ್ ವ್ಯವಸ್ಥೆ: ಇಲ್ಲಿದೆ ವಿವರ
ತೆರಿಗೆ ವಿಚಾರವಾಗಿ ಮಾತನಾಡಿದ ಅವರು, ಹಣಕಾಸು ಆಯೋಗ ಕರ್ನಾಟಕಕ್ಕೆ ಬರಬೇಕಾದ ತೆರಿಗೆಯ ಪಾಲನ್ನು ವರ್ಗಾಯಿಸುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯದ ಬಗ್ಗೆ ಧ್ವನಿ ಎತ್ತಿರುವುದರಲ್ಲಿ ಕೂಡ ಸತ್ಯಾಂಶವಿದೆ. ಈ ಮಾತನ್ನು ರಾಜಕೀಯವಾಗಿ ನೋಡದಂತೆ ಹೇಳಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:00 pm, Fri, 20 December 24