AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಚುನಾವಣೆ ನಡೆಸಲು ಮುಂದಾದ ಸರ್ಕಾರ: 5 ಭಾಗಗಳಾಗಿ ವಿಂಗಡಿಸಲು ತೀರ್ಮಾನ

ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಶಾಸಕರ ಜೊತೆಗಿನ ಸಿಎಂ ಸಿದ್ದರಾಮಯ್ಯ ಸಭೆ ಅಂತ್ಯ ಬಳಿಕ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಮುಂದಾಗಿದ್ದು, 5 ಭಾಗಗಳಾಗಿ ವಿಂಗಡಿಸಲು ತೀರ್ಮಾನ ಮಾಡಲಾಗಿದೆ. ಬಹಳ ದಿನ ಚುನಾವಣೆ ಮುಂದೂಡಲು ಆಗಲ್ಲ. ಹೀಗಾಗಿ ಮಳೆಗಾಲ ಮುಗಿಯುತ್ತಿದ್ದಂತೆ ಪಾಲಿಕೆ ಚುನಾವಣೆ ಮಾಡುತ್ತೇವೆ ಎಂದು ಹೇಳಿದ್ದಾರೆ. 

ಬಿಬಿಎಂಪಿ ಚುನಾವಣೆ ನಡೆಸಲು ಮುಂದಾದ ಸರ್ಕಾರ: 5 ಭಾಗಗಳಾಗಿ ವಿಂಗಡಿಸಲು ತೀರ್ಮಾನ
ಬಿಬಿಎಂಪಿ ಚುನಾವಣೆ ನಡೆಸಲು ಮುಂದಾದ ಸರ್ಕಾರ, 5 ಭಾಗಗಳಾಗಿ ವಿಂಗಡಿಸಲು ತೀರ್ಮಾನ
Anil Kalkere
| Updated By: ಗಂಗಾಧರ​ ಬ. ಸಾಬೋಜಿ|

Updated on:Jun 10, 2024 | 9:33 PM

Share

ಬೆಂಗಳೂರು, ಜೂನ್​ 10: ಬಿಬಿಎಂಪಿ (BBMP) ಚುನಾವಣೆ ನಡೆಸಲು ಸರ್ಕಾರ ಮುಂದಾಗಿದ್ದು, 5 ಭಾಗಗಳಾಗಿ ವಿಂಗಡಿಸಲು ತೀರ್ಮಾನ ಮಾಡಿದೆ. ಈ ಕುರಿತಾಗಿ ಇಂದು ಕಾಂಗ್ರೆಸ್ ಶಾಸಕರ ಜೊತೆಗಿನ ಸಿಎಂ ಸಿದ್ದರಾಮಯ್ಯ (Siddaramaiah) ಸಭೆ ಅಂತ್ಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಿಎಂ ನೇತೃತ್ವದಲ್ಲಿ 3 ರಿಂದ 4 ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸಬೇಕೆಂದು ಚರ್ಚೆ ಆಗಿದೆ. ಮಳೆಗಾಲ ಮುಗಿಯುತ್ತಿದ್ದಂತೆ ಪಾಲಿಕೆ ಚುನಾವಣೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಬಹಳ ದಿನ ಚುನಾವಣೆ ಮುಂದೂಡಲು ಆಗಲ್ಲ. ಈಗಾಗಲೇ ಕೋರ್ಟ್ ಚುನಾವಣೆಗೆ ನಿರ್ದೇಶನ ನೀಡಿದೆ. 225 ವಾರ್ಡ್​ಗಳಲ್ಲಿ ಚುನಾವಣೆ ನಡೆಯಲಿದೆ. ಕಾನೂನು ತೊಡಕು ಹಾಗೂ ಮೀಸಲಾತಿ ಬಗೆ ಹರಿಸಿ ಚುನಾವಣೆ ಮಾಡಲಿದ್ದೇವೆ. ಅನುದಾನ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿಲ್ಲ. ಲೋಕಸಭಾ ಚುನಾವಣೆ ಫಲಿತಾಂಶದ ಸೋಲಿನ ಚರ್ಚೆ ಆಗಿಲ್ಲ. ಈ‌ ಬಗ್ಗೆ ಯಾರು‌ ಮಾತನಾಡಲಿಲ್ಲ. ಕೇವಲ ಬಿಬಿಎಂಪಿ ಚುನಾವಣೆ ಬಗ್ಗೆ ಮಾತ್ರ ಚರ್ಚೆಯಾಗಿದೆ ಅಷ್ಟೇ ಎಂದಿದ್ದಾರೆ.

ಇದನ್ನೂ ಓದಿ: ಯಾರಿಗೇ ಟಿಕೆಟ್ ಕೊಟ್ರೂ ಶಿಗ್ಗಾಂವಿ ಕ್ಷೇತ್ರ ನನ್ನ ಕೈಬಿಟ್ಟು ಹೋಗಲ್ಲ: ಬೊಮ್ಮಾಯಿ ಅಚ್ಚರಿ ಹೇಳಿಕೆ

ಸರ್ಕಾರ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ. ಮತ್ತೆ ಚುನಾವಣೆ ಆದ್ರೂ ರಾಜ್ಯದಲ್ಲಿ ನಾವೇ ಅಧಿಕಾರಕ್ಕೆ ಬರ್ತೇವೆ. ಮುಂದಿನ 9 ವರ್ಷವೂ ಗ್ಯಾರಂಟಿ ಇರುತ್ತದೆ. ಮುಂದೆ ಯೋಚನೆ ಮಾಡೋಣ. ಶಕ್ತಿ ಯೋಜನೆಗೆ ಇಂದು ವರ್ಷ ಆಗಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಕೊಡುತ್ತೇನೆ ಎಂದು ಹೇಳಿದ್ದಾರೆ.

BBMP ಚುನಾವಣೆ, ವಾರ್ಡ್ ವಿಂಗಡಣೆ ಮುಂದಾದ ಸರ್ಕಾರ

ಬಿಬಿಎಂಪಿ 5 ಭಾಗಗಳಾಗಿ ವಿಂಗಡಿಸಲು ಸರ್ಕಾರ ನಿರ್ಧರಿಸಿದೆ. ವಿಂಗಡಿಸಿ ಸುಪ್ರೀಂಕೋರ್ಟ್ ಗಮನಕ್ಕೆ ತರಲು ಸರ್ಕಾರ ನಿರ್ಧಾರ ಮಾಡಿದೆ? ವಿಂಗಡನೆ ಪ್ರಕ್ರಿಯೇ ಬಳಿಕವೇ ರಾಜ್ಯ ಸರ್ಕಾರ ಬಿಬಿಎಂಪಿ ಚುನಾವಣೆ ನಡೆಸುವ ಸಾಧ್ಯತೆ ಇದೆ. ಆದರೆ ಮೊದಲು ಚುನಾವಣೆ ಮಾಡಿ ನಂತರ ವಿಂಗಡಣೆ ಮಾಡಿ ಎಂದು ಕೆಲ ಶಾಸಕರು ಹೇಳಿದ್ದಾರೆ.

ಇದನ್ನೂ ಓದಿ: ವಾಡಿಕೆಗಿಂತ ಶೇಕಡಾ 78ರಷ್ಟು ಹೆಚ್ಚುವರಿ ಮಳೆ, 27.5 ಲಕ್ಷ ರೈತರಿಗೆ ಬರ ಪರಿಹಾರ: ಕೃಷಿ ಸಚಿವ ಮಾಹಿತಿ

3 – 5 ಭಾಗಗಳಾಗಿ ಬಿಬಿಎಂಪಿ ವಿಂಗಡಣೆ ಬಗ್ಗೆ ಸಭೆಯಲ್ಲಿ ಚರ್ಚೆ ಆಗಿದ್ದು, ಸಭೆಯಲ್ಲಿ ಎಜಿ ಮತ್ತು ಬಿಬಿಎಂಪಿ ಅಧಿಕಾರಿಗಳಿಂದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ವಾಸ್ತವ ಮಾಹಿತಿ ಪಡೆದುಕೊಂಡಿದ್ದಾರೆ. ಮೊದಲು ಚುನಾವಣೆ ಮಾಡಿ ಎಂದು ಬಹುತೇಕ ಶಾಸಕರು ಒತ್ತಾಯಿಸಿದ್ದಾರೆ. ಚುನಾವಣೆಗೂ ಮುನ್ನ ಬ್ರ್ಯಾಂಡ್ ಬೆಂಗಳೂರು ಅಭಿವೃದ್ಧಿಯಾಗಬೇಕು. ಹೆಚ್ಚಿನ ಅನುದಾನ ನೀಡಬೇಕು ಎಂದು ಸಭೆಯಲ್ಲಿ ಶಾಸಕರಿಂದ ಸಿಎಂ ಬಳಿ ಮನವಿ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:18 pm, Mon, 10 June 24