ಹೆಣ್ಣುಮಕ್ಕಳ ತುಚ್ಛೀಕರಣವನ್ನ ಸರ್ಕಾರ ಸಹಿಸುವುದಿಲ್ಲ: ಕಿಡಿಗೇಡಿಗಳ ವಿರುದ್ಧ ಕ್ರಮ ಎಂದ ಸಿದ್ದರಾಮಯ್ಯ

|

Updated on: Apr 06, 2024 | 9:44 PM

ಸಂವಿಧಾನವನ್ನು ತಿರಸ್ಕರಿಸಿ ಮನುವಾದವನ್ನು ಪುರಸ್ಕರಿಸಬೇಕೆಂದು ಕೆಲವು ಸಮಾಜ ವಿರೋಧಿ ಶಕ್ತಿಗಳು ಹಾಕುತ್ತಿರುವ ಕೂಗಿನ ಫಲ. ಹೆಣ್ಣುಮಕ್ಕಳ ತುಚ್ಛೀಕರಣವನ್ನು ನಮ್ಮ ಸರ್ಕಾರ ಖಂಡಿತ ಸಹಿಸುವುದಿಲ್ಲ, ಇದಕ್ಕೆ ಕಾರಣಕರ್ತರಾದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಹೆಣ್ಣುಮಕ್ಕಳ ತುಚ್ಛೀಕರಣವನ್ನ ಸರ್ಕಾರ ಸಹಿಸುವುದಿಲ್ಲ: ಕಿಡಿಗೇಡಿಗಳ ವಿರುದ್ಧ ಕ್ರಮ ಎಂದ ಸಿದ್ದರಾಮಯ್ಯ
ಸಿದ್ದರಾಮಯ್ಯ
Follow us on

ಬೆಂಗಳೂರು, ಏಪ್ರಿಲ್​ 06: ಹೆಣ್ಣಿಗೆ ಸ್ವಾತಂತ್ರ್ಯವನ್ನು ನಿರಾಕರಿಸಿ ಗುಲಾಮಳನ್ನಾಗಿ ಮಾಡಿ ಮನೆಯೊಳಗೆ ಕೂರಿಸಿದ ಮನುವಾದದ ಸಂಕೋಲೆಯನ್ನು ಮಹಿಳೆಯರೇ ಕಿತ್ತುಹಾಕಿ ಸ್ವತಂತ್ರರಾಗುತ್ತಿದ್ದಾರೆ. ಸಂವಿಧಾನದತ್ತ ಸ್ವಾತಂತ್ರ್ಯದೊಂದಿಗೆ ಪುರುಷರಿಗೆ ಸರಿಸಮಾನರಾಗಿ ಎಲ್ಲ ಕ್ಷೇತ್ರಗಳಲ್ಲಿಯೂ ಮುನ್ನಡೆಯುತ್ತಿದ್ದಾರೆ. ಆದರೆ ಇತ್ತೀಚೆಗೆ ರಾಜ್ಯದಲ್ಲಿ ಹೆಣ್ಣುಮಕ್ಕಳನ್ನು ಸಾರ್ವಜನಿಕವಾಗಿ ಅಪಮಾನಿಸುತ್ತಿರುವುದು ಖಂಡನೀಯ, ಇದಕ್ಕೆ ಕಾರಣಕರ್ತರಾದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಭರವಸೆ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕವಾಗಿ ಹೆಣ್ಣುಮಕ್ಕಳ ಅಪಮಾನ ಖಂಡನೀಯ

ಈ ಕುರಿತಾಗಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ‘ಹೆಣ್ಣಿಗೆ ಸ್ವಾತಂತ್ರ್ಯವನ್ನು ನಿರಾಕರಿಸಿ ಗುಲಾಮಳನ್ನಾಗಿ ಮಾಡಿ ಮನೆಯೊಳಗೆ ಕೂರಿಸಿದ ಮನುವಾದದ ಸಂಕೋಲೆಯನ್ನು ಮಹಿಳೆಯರೇ ಕಿತ್ತುಹಾಕಿ ಸ್ವತಂತ್ರರಾಗುತ್ತಿದ್ದಾರೆ. ಸಂವಿಧಾನದತ್ತ ಸ್ವಾತಂತ್ರ್ಯದೊಂದಿಗೆ ಪುರುಷರಿಗೆ ಸರಿಸಮಾನರಾಗಿ ಎಲ್ಲ ಕ್ಷೇತ್ರಗಳಲ್ಲಿಯೂ ಮುನ್ನಡೆಯುತ್ತಿದ್ದಾರೆ. ಪತಿಯನ್ನು ಕಳೆದುಕೊಂಡು ಹೆಣ್ಣುಮಕ್ಕಳು ಕೂಡಾ ವೈಯಕ್ತಿಕ ಬದುಕಿನ ನೋವುಗಳನ್ನು ನುಂಗಿಕೊಂಡು ಸಾಮಾಜಿಕ ಮತ್ತು ಔದ್ಯಮಿಕ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಮಾದರಿಯಾಗುತ್ತಿದ್ದಾರೆ. ಈ ಸಾಮಾಜಿಕ ಬದಲಾವಣೆಯಲ್ಲಿ ಬುದ್ಧ, ಬಸವ, ಅಂಬೇಡ್ಕರ್, ಗಾಂಧೀಜಿಯವರಂತಹ ಮಹನೀಯರ ಸಮಾಜ ಸುಧಾರಣೆಯ ಕೊಡುಗೆಯೂ ಇದೆ’ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್ 

‘ಹೀಗಿದ್ದರೂ ಇತಿಹಾಸದ ಚಕ್ರವನ್ನು ಹಿಂದಕ್ಕೆ ಎಳೆದೊಯ್ಯುವ ಪ್ರಯತ್ನವನ್ನು ಕೆಲವು ಕಿಡಿಗೇಡಿಗಳು ನಡೆಸುತ್ತಿದ್ದಾರೆ. ಇತ್ತೀಚೆಗೆ ಕೆಲವು ಗೊಡ್ಡು ಸಂಪ್ರದಾಯವಾದಿಗಳು ಪತಿಯನ್ನು ಕಳೆದುಕೊಂಡ ಹೆಣ್ಣುಮಕ್ಕಳನ್ನು ಸಾರ್ವಜನಿಕವಾಗಿ ಅಪಮಾನಿಸಿ ತಮ್ಮ ವಿಕೃತಿಯನ್ನು ಮೆರೆಯುತ್ತಿರುವುದು ಖಂಡನೀಯ’.

ಇದನ್ನೂ ಓದಿ: ಮಾತನಾಡುವ ಭರದಲ್ಲಿ ಸಿದ್ದರಾಮಯ್ಯ ಯಡವಟ್ಟು: ‘ಕಾಂಗ್ರೆಸ್​ ನುಡಿದಂತೆ ನಡೆಯಲ್ಲ’ ಎಂದ ಸಿಎಂ

‘ಇದು ಸಂವಿಧಾನವನ್ನು ತಿರಸ್ಕರಿಸಿ ಮನುವಾದವನ್ನು ಪುರಸ್ಕರಿಸಬೇಕೆಂದು ಕೆಲವು ಸಮಾಜ ವಿರೋಧಿ ಶಕ್ತಿಗಳು ಹಾಕುತ್ತಿರುವ ಕೂಗಿನ ಫಲ. ಹೆಣ್ಣುಮಕ್ಕಳ ತುಚ್ಛೀಕರಣವನ್ನು ನಮ್ಮ ಸರ್ಕಾರ ಖಂಡಿತ ಸಹಿಸುವುದಿಲ್ಲ, ಇದಕ್ಕೆ ಕಾರಣಕರ್ತರಾದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:43 pm, Sat, 6 April 24