ಜಿ.ಪಂ, ತಾ.ಪಂ ಚುನಾವಣೆ ಮುಂದೂಡಲು ಆಯೋಗಕ್ಕೆ ಮನವಿ ಸಲ್ಲಿಸುತ್ತೇವೆ; ಕಂದಾಯ ಸಚಿವ ಆರ್.ಅಶೋಕ್

|

Updated on: Apr 25, 2021 | 8:49 PM

ಈಗಿನ ಕರ್ಫ್ಯೂ ಫಲಿತಾಂಶ 14 ದಿನದ ಬಳಿಕ ತಿಳಿಯಲಿದೆ. ಆನಂತರ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಮೇ 4ರಿಂದ8ರವರೆಗೆ ಕೊರೊನಾ ಸೋಂಕು ಹೆಚ್ಚಾಗಲಿದೆ  ಎಂದು ತಜ್ಞರು ತಿಳಿಸಿದ್ದಾರೆ. ಇದರ ಅನ್ವಯ ನಾವು ಮಾನದಂಡ ರೂಪಿಸಲಿದ್ದೇವೆ; ಆರ್ ಅಶೋಕ್

ಜಿ.ಪಂ, ತಾ.ಪಂ ಚುನಾವಣೆ ಮುಂದೂಡಲು ಆಯೋಗಕ್ಕೆ ಮನವಿ ಸಲ್ಲಿಸುತ್ತೇವೆ; ಕಂದಾಯ ಸಚಿವ ಆರ್.ಅಶೋಕ್
ಆರ್. ಅಶೋಕ್
Follow us on

ಬೆಂಗಳೂರು: ಈ ಸಂದರ್ಭದಲ್ಲಿ ಚುನಾವಣೆ ನಡೆಸಲು ಸಾಧ್ಯವಿಲ್ಲ. ಜಿಲ್ಲಾ ಪಂಚಾಯತ್ ಮತ್ತು ತಾಲೂಕಾ ಪಂಚಾಯತ್ ಚುನಾವಣೆಗಳನ್ನು ಮುಂದೂಡಲು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸುತ್ತೇವೆ. ಸರ್ಕಾರ ಹೊರಡಿಸಿದ ಎರಡನೇ ಮಾರ್ಗಸೂಚಿಯೇ ಮುಂದುವರಿಯಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

ಈಗಿನ ಕರ್ಫ್ಯೂ ಫಲಿತಾಂಶ 14 ದಿನದ ಬಳಿಕ ತಿಳಿಯಲಿದೆ. ಆನಂತರ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಮೇ 4ರಿಂದ8ರವರೆಗೆ ಕೊರೊನಾ ಸೋಂಕು ಹೆಚ್ಚಾಗಲಿದೆ  ಎಂದು ತಜ್ಞರು ತಿಳಿಸಿದ್ದಾರೆ. ಇದರ ಅನ್ವಯ ನಾವು ಮಾನದಂಡ ರೂಪಿಸಲಿದ್ದೇವೆ. ಆದರೆ ನಾಳೆ ಬೆಂಗಳೂರಿನ ಮಾರುಕಟ್ಟೆಗಳನ್ನು ಸ್ಥಳಾಂತರ ಮಾಡಲಾಗುವುದು. ಈ ನಿರ್ಧಾರಕ್ಕೆ ಸಂಪುಟ ಸಭೆಯ ಒಪ್ಪಿಗೆ ದೊರೆತಿದೆ ಎಂದು ಅವರು ತಿಳಿಸಿದರು.

ಕರ್ನಾಟಕದಲ್ಲಿ ಹೆಚ್ಚುತ್ತಿದೆ ಕೊರೊನಾ ಸೋಂಕು
ಕರ್ನಾಟಕದಲ್ಲಿ ಇಂದು (ಏಪ್ರಿಲ್ 25) ಒಂದೇ ದಿನ ಒಟ್ಟು 34,804 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. 143 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಲ್ಲಿ ಇಂದು ಒಂದೇ ದಿನ 20,733 ಜನರಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಒಂದೇ ದಿನ ಸೋಂಕಿಗೆ 77 ಜನರು ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 13,39,201ಕ್ಕೆ (13.39 ಲಕ್ಷ) ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 14,426 ಜನರು ಸಾವನ್ನಪ್ಪಿದ್ದಾರೆ. ಸೋಂಕಿತರ ಪೈಕಿ 10,62,594 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 2,62,162 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಿನಲ್ಲಿ ಇಂದು 20,733 ಜನರಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಒಟ್ಟು ಸಂಖ್ಯೆ 6,53,656ಕ್ಕೇರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 77 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 5,800 ಜನರು ಮೃತಪಟ್ಟಿದ್ದಾರೆ. 6,53,656 ಸೋಂಕಿತರ ಪೈಕಿ 4,67,313 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 1,80,542 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: Explainer: 18ರಿಂದ 45 ವಯೋಮಾನದವರಿಗೆ ಕೋವಿಡ್ ಲಸಿಕೆ; ನೋಂದಣಿ ಹೇಗೆ? ಪಡೆದುಕೊಳ್ಳುವುದು ಎಲ್ಲಿ? ಡೇಟ್ ಮಿಸ್ ಆದ್ರೆ ಏನು ಮಾಡಬೇಕು?

Covid 19 Treatment in Bengaluru: ಬೆಂಗಳೂರಿನಲ್ಲಿ ತುರ್ತು ಕೊರೊನಾ ಆರೋಗ್ಯ ಸೇವೆಗಳಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ

(Govt will request election commission to postpone Zilla panchayat and taluk panchayat elections in Karnataka says Minister R Ashok)

Published On - 8:32 pm, Sun, 25 April 21