AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC ತೃತೀಯ ಭಾಷೆಗೆ ಅಂಕದ ಬದಲು ಗ್ರೇಡ್: ಶೈಕ್ಷಣಿಕ ವರ್ಷದ ಆರಂಭದಲ್ಲೇ ಗೊಂದಲ ತಪ್ಪಿಸಲು ಸಿದ್ಧತೆ

SSLC ಪರೀಕ್ಷೆಯ ತೃತೀಯ ಭಾಷೆಗೆ ಅಂಕದ ಬದಲು ಗ್ರೇಡ್ ನೀಡಲು ಶಿಕ್ಷಣ ಇಲಾಖೆ ಮತ್ತೊಮ್ಮೆ ಮುಂದಾಗಿದೆ. ಕಳೆದ ವರ್ಷ ಪರೀಕ್ಷೆ ನಡೆಯುತ್ತಿದ್ದಾಗಲೇ ಈ ಆದೇಶ ಹೊರಡಿಸಿ ವಿದ್ಯಾರ್ಥಿಗಳಿಂದ ತೀವ್ರ ವಿರೋಧ ಎದುರಿಸಿತ್ತು. ಹೈಕೋರ್ಟ್ ಕೂಡ ಹಿಂದಿ ವಿಷಯಕ್ಕೆ ಗ್ರೇಡ್ ಬೇಡ, ಅಂಕ ನೀಡುವಂತೆ ಸೂಚಿಸಿತ್ತು. ಈಗ ಈ ಬಾರಿ ಶೈಕ್ಷಣಿಕ ವರ್ಷದ ಆರಂಭದಲ್ಲೇ ನಿಯಮ ಜಾರಿಗೆ ತರುವ ಸಿದ್ಧತೆ ಇಲಾಖೆ ನಡೆಸಿದೆ. ಆದರೆ ಖಾಸಗಿ ಶಿಕ್ಷಣ ಸಂಸ್ಥೆಗಳು ಈಗಾಗಲೇ ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿವೆ.

SSLC ತೃತೀಯ ಭಾಷೆಗೆ ಅಂಕದ ಬದಲು ಗ್ರೇಡ್: ಶೈಕ್ಷಣಿಕ ವರ್ಷದ ಆರಂಭದಲ್ಲೇ ಗೊಂದಲ ತಪ್ಪಿಸಲು ಸಿದ್ಧತೆ
VidhanasoudhaImage Credit source: Getty Images
Vinay Kashappanavar
| Edited By: |

Updated on: Jul 03, 2026 | 9:18 PM

Share

ಮುಖ್ಯಾಂಶಗಳು

  • SSLC ತೃತೀಯ ಭಾಷೆಗೆ ಅಂಕದ ಬದಲು ಗ್ರೇಡ್
  • ಶೈಕ್ಷಣಿಕ ವರ್ಷದ ಆರಂಭದಲ್ಲೇ ಆದೇಶ, ಹಿಂದಿನ ವರ್ಷದ ಗೊಂದಲ ತಪ್ಪಿಸಲು ಸಿದ್ಧತೆ
  • ನೂತನ ಸಚಿವರ ಅನುಮೋದನೆ ಬಳಿಕ ಜಾರಿ ಸಾಧ್ಯತೆ

ಬೆಂಗಳೂರು, (ಜುಲೈ 03):  ಎಸ್​​ಎಸ್​​ಎಲ್​​ಸಿ ಪರೀಕ್ಷೆಯಲ್ಲಿ ( SSLC Exams) ತೃತೀಯ ಭಾಷೆಯ ಮೌಲ್ಯಮಾಪನಕ್ಕೆ ಮತ್ತೆ ಹೊಸ ರೂಪ ನೀಡಲು ಶಿಕ್ಷಣ ಇಲಾಖೆ ಮುಂದಾಗಿದೆ. ಹಿಂದಿ, ಸಂಸ್ಕೃತ, ಉರ್ದು ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕದ ಬದಲು ಗ್ರೇಡ್ ನೀಡುವ ಪ್ರಸ್ತಾವನೆ ಅಂತಿಮ ಹಂತದಲ್ಲಿದ್ದು, ನೂತನ ಶಿಕ್ಷಣ ಸಚಿವರು ಅಧಿಕಾರ ವಹಿಸಿಕೊಂಡ ಬಳಿಕ ಮತ್ತೊಮ್ಮೆ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ. ಆದರೆ ಇಲಾಖೆಯ ಈ ನಿರ್ಧಾರಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ತೀವ್ರ ವಿರೋಧ ವ್ಯಕ್ತಪಡಿಸಿದೆ. ತೃತೀಯ ಭಾಷೆಗೆ ಅಂಕ ನೀಡದಿದ್ದರೆ ವಿದ್ಯಾರ್ಥಿಗಳ ಸಾಧನೆ ಅಳೆಯಲು ಸಾಧ್ಯವಾಗುವುದಿಲ್ಲ. ಉನ್ನತ ಶಿಕ್ಷಣ ಪ್ರವೇಶ ಮತ್ತು ಶೈಕ್ಷಣಿಕ ಸ್ಪರ್ಧೆಯ ಮೇಲೂ ಪರಿಣಾಮ ಬೀಳಲಿದೆ ಎಂದು ಒಕ್ಕೂಟ ಅಭಿಪ್ರಾಯಪಟ್ಟಿದೆ.

ಕಳೆದ ವರ್ಷವೇ ಆದೇಶಿಸಲಾಗಿತ್ತು

ಕಳೆದ ಶೈಕ್ಷಣಿಕ ವರ್ಷದಲ್ಲಿ SSLC ಪರೀಕ್ಷೆ ನಡೆಯುತ್ತಿದ್ದ ವೇಳೆಯಲ್ಲೇ ಇಲಾಖೆ ತೃತೀಯ ಭಾಷೆಗೆ ಗ್ರೇಡ್ ವ್ಯವಸ್ಥೆ ಘೋಷಿಸಿತ್ತು. ನಿಯಮ ಮಧ್ಯದಲ್ಲೇ ಬದಲಾವಣೆ ಮಾಡಿದ ಕಾರಣ ವಿದ್ಯಾರ್ಥಿಗಳು ಹಾಗೂ ಪೋಷಕರಿಂದ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಅನೇಕ ವಿದ್ಯಾರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಬಳಿಕ ಹೈಕೋರ್ಟ್ ಹಿಂದಿ ವಿಷಯಕ್ಕೆ ಗ್ರೇಡ್ ಅಲ್ಲ, ಅಂಕವೇ ನೀಡಬೇಕು ಎಂದು ಸರ್ಕಾರಕ್ಕೆ ಸೂಚನೆ ನೀಡಿತ್ತು.

ಇದನ್ನೂ ಓದಿ: ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸಮವಸ್ತ್ರ, ಶೂ ನೀಡಲು ಕ್ಯಾಬಿನೆಟ್​ ಅಸ್ತು

ಗೊಂದಲ ಮರುಕಳಿಸದಂತೆ ಪ್ಲ್ಯಾನ್

ಆದ್ರೆ, ಈ ಬಾರಿ ಕಳೆದ ವರ್ಷದಂತಹ ಗೊಂದಲ ಮರುಕಳಿಸದಂತೆ ಶೈಕ್ಷಣಿಕ ವರ್ಷದ ಆರಂಭದಲ್ಲೇ ನಿಯಮ ಜಾರಿಗೊಳಿಸಲು ಇಲಾಖೆ ಸಿದ್ಧತೆ ನಡೆಸಿದೆ. ಇನ್ನು ಈ ಬಗ್ಗೆ ಶಿಕ್ಷಣ ಇಲಾಖೆ ಆಯುಕ್ತರು ಕಳೆದ ವರ್ಷಕ್ಕೆ ಮಾತ್ರ ಕೋರ್ಟ್ ಆದೇಶ ನೀಡಿತ್ತು ಈ ವರ್ಷಕ್ಕೆ ಯಾವುದೆ ಸಮಸ್ಯೆ ಇಲ್ಲ ನಾವು ಈ ಬಗ್ಗೆ ಜಾರಿಗೆ ಈಗಾಗಲೇ ಆದೇಶವೇ ಇದೆ ಅಂತಿದ್ದಾರೆ.

ಒಟ್ಟಿನಲ್ಲಿ ಎಸ್​​ಎಸ್​​ಎಲ್​​ಸಿಯಲ್ಲಿ ತೃತೀಯ ಭಾಷೆಗೆ ಅಂಕದ ಬದಲು ಗ್ರೇಡ್ ನೀಡಲು ಇಲಾಖೆ ಮುಂದಾಗಿದ್ದು, ಕಳೆದ ವರ್ಷದ ವಿವಾದದ ನಂತರ ಈ ಬಾರಿ ಮೊದಲೇ ನಿಯಮ ಪ್ರಕಟಿಸಲು ಇಲಾಖೆ ಮುಂದಾಗಿರುವುದು ಕುತೂಹಲ ಮೂಡಿಸಿದೆ. ಆದರೆ ಗ್ರೇಡ್ ಪದ್ಧತಿ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆಯೋ ಅಥವಾ ಹೊಸ ವಿವಾದಕ್ಕೆ ಕಾರಣವಾಗುತ್ತೋ ಅಂತ ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us