ಬಹಿಷ್ಕಾರದ ಬೆದರಿಕೆಗೆ ಸೊಪ್ಪು ಹಾಕದೆ ನಾಮಪತ್ರ ಸಲ್ಲಿಸಿದ ಅಭ್ಯರ್ಥಿ: ಸ್ಥಳಕ್ಕೆ ತಹಶೀಲ್ದಾರ್ ಭೇಟಿ
ಚುನಾವಣೆ ಸ್ಪರ್ಧಿಸುವ ಬದಲು ಐದು ಲಕ್ಷ ರೂಪಾಯಿ ಹಣವನ್ನು ಗ್ರಾಮದ ಅಭಿವೃದ್ಧಿಗಾಗಿ ನೀಡಬೇಕೆಂದು ರಮೇಶ್ ನಾಯ್ಕ್ ಎಂಬುವರಿಗೆ ಗ್ರಾಮಸ್ಥರು ಬೆದರಿಕೆ ಹಾಕಿದ್ದಾರೆ.
ದಾವಣಗೆರೆ: ಗ್ರಾಮದ ಅಭಿವೃದ್ಧಿಗೆ ಹಣ ನೀಡದೇ ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿಗೆ ಬಹಿಷ್ಕಾರ ಹಾಕಿದ ಘಟನೆ ಹರಪನಹಳ್ಳಿ ತಾಲ್ಲೂಕು ಬಾಪೂಜಿನಗರ ಗ್ರಾಮದಲ್ಲಿ ನಡೆದಿದೆ.
ಚುನಾವಣೆ ಸ್ಪರ್ಧಿಸುವ ಬದಲು ₹ 5 ಲಕ್ಷ ಹಣವನ್ನು ಗ್ರಾಮದ ಅಭಿವೃದ್ಧಿಗಾಗಿ ನೀಡಬೇಕೆಂದು ರಮೇಶ್ ನಾಯ್ಕ್ ಎಂಬುವರಿಗೆ ಗ್ರಾಮಸ್ಥರು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಬೆದರಿಕೆಗೆ ಸೊಪ್ಪು ಹಾಕದ ರಮೇಶ್ ನಾಯ್ಕ ನಾಮಪತ್ರ ಸಲ್ಲಿಸಿದರು. ರಮೇಶ್ ಅವರ ನಡೆ ಖಂಡಿಸಿದ ಕೆಲ ಗ್ರಾಮಸ್ಥರು ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಹೇಳಿದ್ದರು.
ಮಾಹಿತಿ ತಿಳಿದ ಹರಪನಹಳ್ಳಿ ತಹಶೀಲ್ದಾರ್ ನಂದೀಶ್ ಸ್ಥಳಕ್ಕೆ ಭೇಟಿ ನೀಡಿ, ಚುನಾವಣೆ ಬಹಿಷ್ಕರಿಸಿದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಗ್ರಾಮಸ್ಥರಿಗೆ ಎಚ್ಚರಿಕೆ ನೀಡಿದರು.
ಉಡುಪಿ: ಬ್ರಹ್ಮಾವರ ತಾಲೂಕಿನ ಕೋಡಿ ಗ್ರಾಮ ಪಂಚಾಯತಿ ಚುನಾವಣೆ ಬಹಿಷ್ಕಾರ.. ಯಾಕೆ?