ನಾಳೆ ಗ್ರಾಮ ಪಂಚಾಯಿತಿ ಚುನಾವಣೆ: 43,238 ಸ್ಥಾನಗಳಿಗೆ ಮತದಾನ

ಒಟ್ಟು 43,238 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. 1,17,383 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮುಂಜಾನೆ ಏಳು ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.

ನಾಳೆ ಗ್ರಾಮ ಪಂಚಾಯಿತಿ ಚುನಾವಣೆ: 43,238 ಸ್ಥಾನಗಳಿಗೆ ಮತದಾನ
ಸಾಂದರ್ಭಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 21, 2020 | 9:35 PM

ಬೆಂಗಳೂರು: ಕರ್ನಾಟಕದಲ್ಲಿ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ನಾಳೆ ನಡೆಯಲಿದೆ. ಲೋಕಸಭೆ, ವಿಧಾನಸಭೆಗಿಂತಲೂ ಇದು ಭಿನ್ನ. ಮತದಾನದ ದಿನ ಹಲವು ಹಳ್ಳಿಗಳಲ್ಲಿ ಅಕ್ಷರಶಃ ಹಬ್ಬದ ವಾತಾವರಣ ನೆಲೆಗೊಳ್ಳುವುದು ವಾಡಿಕೆ. ದೂರದ ಊರುಗಳಲ್ಲಿ ನೆಲೆಸಿರುವವರನ್ನು ಅಭ್ಯರ್ಥಿಗಳೇ ವಾಹನ ವ್ಯವಸ್ಥೆ ಮಾಡಿ ಊರಿಗೆ ಕರೆಸಿಕೊಳ್ಳುತ್ತಿದ್ದರು. ಬಂದವರಿಗೆ ವೆಜ್ಜು-ನಾನ್​ ವೆಜ್ಜು, ಕುಡಿತದ ಔತಣವೂ ಸಲ್ಲುತ್ತಿತ್ತು. ಆದರೆ ಈ ಬಾರಿ ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಸಡಗರದ ಸ್ವರೂಪ ಬದಲಾಗಿದೆ.

ಒಟ್ಟು 43,238 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. 1,17,383 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮುಂಜಾನೆ ಏಳು ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಕೊರೊನಾ ವೈರಸ್​ ಪ್ರಕರಣಗಳು ಇನ್ನೂ ಜೀವಂತವಾಗಿರುವುದರಿಂದ ಮತಗಟ್ಟೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್​ ಧರಿಸುವುದು ಕಡ್ಡಾಯ. ಇನ್ನು, ಕರೊನಾ ಪಾಸಿಟಿವ್​ ಇರುವ ವ್ಯಕ್ತಿಗಳಿಗೆ ಕೊನೆಯ ಒಂದು ಗಂಟೆ ಅವಧಿಯಲ್ಲಿ ಮತದಾನಕ್ಕೆ ಅವಕಾಶ ಮಾಡಿಕೊಡಲು ಚುನಾವಣಾ ಆಯೋಗ ನಿರ್ಧರಿಸಿದೆ.

ಬೀದರ್ ಹೊರತುಪಡಿಸಿದರೆ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಬ್ಯಾಲಟ್​ ಪೇಪರ್​ಗಳನ್ನು ಮತದಾನಕ್ಕೆ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಪ್ರತಿ ಮತಗಟ್ಟೆಗೆ ಭದ್ರತಾ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

ಅವಿರೋಧ ಆಯ್ಕೆ ಈಗಾಗಲೇ 4,377 ಮಂದಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಯಾವುದೇ ಪ್ರತಿಸ್ಪರ್ಧಿಗಳು ಇಲ್ಲದ ಕಾರಣ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಿರುವ ಬಗ್ಗೆ ಚುನಾವಣಾ ಆಯೋಗ ಘೋಷಣೆ ಮಾಡಿದೆ. ಹೀಗಾಗಿ ನಾಳೆ 43,238 ಸ್ಥಾನಗಳಿಗೆ ಮಾತ್ರ ಚುನಾವಣೆ ನಡೆಯುತ್ತಿದೆ.

ಡಿಸೆಂಬರ್ 27ಕ್ಕೆ ಎರಡನೇ ಹಂತ ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಎರಡು ಹಂತದಲ್ಲಿ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿತ್ತು. ಈ ಮೊದಲೇ ಘೋಷಣೆ ಮಾಡಿದಂತೆ, ಮಂಗಳವಾರ ಮೊದಲ ಹಂತದ ಮತದಾನ ನಡೆದರೆ, ಡಿಸೆಂಬರ್ 27ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ. ಹೆಚ್ಚಲಿದೆ ಮತದಾನದ ಪ್ರಮಾಣ? ಈ ಬಾರಿ ಕೊರೊನಾ ವೈರಸ್​ನಿಂದಾಗಿ ಅನೇಕರು ವರ್ಕ್​ ಫ್ರಂ ಹೋಂ ಮಾಡುತ್ತಿದ್ದಾರೆ. ಹೀಗಾಗಿ, ಅನೇಕರು ತಮ್ಮ ಗ್ರಾಮದಲ್ಲೇ ಕುಳಿತು ಕೆಲಸ ಮಾಡುತ್ತಿದ್ದಾರೆ. ಈ ಮೊದಲಾಗಿದ್ದರೆ ಚುನಾವಣೆಗಾಗಿ ಬೆಂಗಳೂರಿನಿಂದಲೋ ಅಥವಾ ಬೇರೆ ನಗರದಿಂದಲೇ ಬರಬೇಕಿತ್ತು. ಆದರೆ, ಈ ಬಾರಿ ಆ ಸಮಸ್ಯೆ ಇರುವುದಿಲ್ಲ. ಹೀಗಾಗಿ, ಮತದಾನದ ಪ್ರಮಾಣ ಹೆಚ್ಚಲಿದೆ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಗ್ರಾ.ಪಂ. ಚುನಾವಣಾ ಕಣದಲ್ಲಿ BE, MBA ಪದವೀಧರರು.. ಅಭ್ಯರ್ಥಿಗಳಾಗಲು ಉದ್ಯೋಗವನ್ನೇ ತೊರೆದರು..

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ