ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಟ್ವೀಟ್ ಮಾಡಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ನಿನ್ನೆ ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ ಬಂದ ಹಿನ್ನೆಲೆಯಲ್ಲಿ ಇಂದು ಟ್ವೀಟ್ ಮಾಡಿದ ಅವರು, ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಆಶೀರ್ವದಿಸಿದ ಮತದಾರರಿಗೆ ಧನ್ಯವಾದಗಳು, ವಿಜೇತರಿಗೆ ಅಭಿನಂದನೆಗಳು. ಸವಾಲಿನ ಪರಿಸ್ಥಿತಿಗಳಲ್ಲಿ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ಅಭಿವೃದ್ಧಿ ಕಾರ್ಯಗಳನ್ನು ಜನರು ಬೆಂಬಲಿಸಿದ್ದಾರೆ. ವಿಪಕ್ಷಗಳ ಆರೋಪಗಳಿಗೆ ಸೂಕ್ತ ಉತ್ತರ ನೀಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ಈ ಬಾರಿ ಗ್ರಾಮ ಪಂಚಾಯಿತಿ ಚುನಾವಣೆಯನ್ನು ರಾಜಕೀಯ ಪಕ್ಷಗಳು ಗಂಭೀರವಾಗಿ ಪರಿಗಣಿಸಿದ್ದರು. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಹೆಚ್ಚಿನ ಆದ್ಯತೆ ನೀಡಿದ್ದವು. ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಿದ್ದವು.
ಗ್ರಾ.ಪಂ ಚುನಾವಣೆಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಆಶೀರ್ವದಿಸಿದ ಮತದಾರರಿಗೆ ಧನ್ಯವಾದಗಳು, ವಿಜೇತರಿಗೆ ಅಭಿನಂದನೆಗಳು. ಸವಾಲಿನ ಪರಿಸ್ಥಿತಿಗಳಲ್ಲಿ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ಅಭಿವೃದ್ಧಿ ಕಾರ್ಯಗಳನ್ನು ಜನ ಬೆಂಬಲಿಸಿದ್ದಾರೆ, ವಿಪಕ್ಷಗಳ ಆರೋಪಗಳಿಗೆ ಸೂಕ್ತ ಉತ್ತರ ನೀಡಿದ್ದಾರೆ.
— B.S. Yediyurappa (@BSYBJP) December 31, 2020
ನ್ಯೂ ಇಯರ್ ಸೆಲಬ್ರೇಷನ್: ಮಧ್ಯಾಹ್ನ 12 ಗಂಟೆಯಿಂದಲೇ ನಿಷೇಧಾಜ್ಞೆ.. ನಾಳೆ ಬೆಳಗ್ಗೆ 6 ಗಂಟೆವರೆಗೂ ಮಿಸುಕಾಡೋಂಗಿಲ್ಲ
Published On - 12:00 pm, Thu, 31 December 20