AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮ ಪಂಚಾಯಿತಿ ಚುನಾವಣಾ ಫಲಿತಾಂಶ: ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ

ನಾಳೆ ಒಟ್ಟು 2,22,814 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಮುಂಜಾನೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ ಸಿಗಲಿದೆ. 

ಗ್ರಾಮ ಪಂಚಾಯಿತಿ ಚುನಾವಣಾ ಫಲಿತಾಂಶ: ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on:Dec 30, 2020 | 11:54 AM

Share

ಬೆಂಗಳೂರು: ನವೆಂಬರ್ 22 ಹಾಗೂ ನವೆಂಬರ್ 27ರಂದು ಕರ್ನಾಟಕದಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣಾ ಫಲಿತಾಂಶ ಬುಧವಾರ (ಡಿ.30) ಬಹಿರಂಗಗೊಳ್ಳಲಿದೆ.

ಮೊದಲ ಹಂತದ ಚುನಾವಣೆಯಲ್ಲಿ ಒಟ್ಟು 43,238 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. 1,17,383 ಅಭ್ಯರ್ಥಿಗಳು ಕಣದಲ್ಲಿದ್ದರು. 4,377 ಮಂದಿ ಅವಿರೋಧವಾಗಿ ಆಯ್ಕೆ ಆಗಿದ್ದರು. ಇನ್ನು, ಎರಡನೇ ಹಂತದ ಚುನಾವಣೆಯಲ್ಲಿ 39,378 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. 1,05,431 ಅಭ್ಯರ್ಥಿಗಳು ಕಣದಲ್ಲಿದ್ದರು.

ಒಟ್ಟು 2,22,814 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಮುಂಜಾನೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ ಸಿಗಲಿದೆ.

ಗ್ರಾಮ ಪಂಚಾಯಿತಿ ಚುನಾವಣೆ ವೈಷಮ್ಯ; ರೈತನ ಜೋಳದ ತೆನೆ ಕಳವು ಮಾಡಿದ ಕಿಡಿಗೇಡಿಗಳು

Published On - 9:48 pm, Tue, 29 December 20

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More