ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಇಂದು ಅದ್ಧೂರಿ ಚಾಲನೆ ಸಿಕ್ಕಿದೆ. ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಮೈಸೂರು ದಸರಾ ಮಹೋತ್ಸವವನ್ನ ಉದ್ಘಾಟನೆ ಮಾಡಿದರು. ಬೆಳಗ್ಗೆ 9.39ರಿಂದ 10.25ರ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡೇಶ್ವರಿ ದೇವಿಗೆ ಅಗ್ರಪೂಜೆಯನ್ನು ಸಲ್ಲಿಸಿದ ನಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು.
ಕಾರ್ಯಕ್ರಮದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ಪ್ರಹ್ಲಾದ ಜೋಷಿ, ಡಿಸಿಎಂ ಗೋವಿಂದ ಎಂ. ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Published On - 1:04 pm, Sun, 29 September 19