AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಸಮುದಾಯಕ್ಕೆ ಸೀಮಿತಾವಾಯ್ತಾ ಒಬಿಸಿ ಅನುದಾನ? ಕುರುಬ ಸಮುದಾಯದ 89 ಸಂಸ್ಥೆಗಳಿಗೆ ಬಂಪರ್

ಹಿಂದುಳಿದ ವರ್ಗಗಳ ಕಲ್ಯಾಣವೋ ಅಥವಾ ಸ್ವಜಾತಿಯ ಉದ್ಧಾರವೋ? ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬುದು ಪ್ರಜಾಪ್ರಭುತ್ವದ ಮೂಲ ಮಂತ್ರ. ಅದರಲ್ಲೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉದ್ದೇಶವೇ ಸಮಾಜದ ಕಟ್ಟಕಡೆಯ ಅಂಚಿನಲ್ಲಿರುವ ಸಮುದಾಯಗಳನ್ನು ಮುಖ್ಯವಾಹಿನಿಗೆ ತರುವುದು. ಆದರೆ ಇತ್ತೀಚೆಗೆ ಈ ಇಲಾಖೆಯ ಅನುದಾನ ಹಂಚಿಕೆಯಲ್ಲಿ ನಡೆದಿರುವ ಬೆಳವಣಿಗೆಗಳು, ಈ ಇಲಾಖೆ ಕೇವಲ ಒಂದು ನಿರ್ದಿಷ್ಟ ಸಮುದಾಯದ ಏಳಿಗೆಗಷ್ಟೇ ಸೀಮಿತವಾಗುತ್ತಿದೆಯೇ ಎಂಬ ಚರ್ಚೆಗಳು ಶುರುವಾಗಿವೆ.

ಒಂದೇ ಸಮುದಾಯಕ್ಕೆ ಸೀಮಿತಾವಾಯ್ತಾ ಒಬಿಸಿ ಅನುದಾನ? ಕುರುಬ ಸಮುದಾಯದ 89 ಸಂಸ್ಥೆಗಳಿಗೆ ಬಂಪರ್
Karnataka Backward Classes
ಪ್ರಸನ್ನ ಗಾಂವ್ಕರ್​
| Edited By: |

Updated on: Jun 11, 2026 | 8:36 PM

Share

ಬೆಂಗಳೂರು, (ಜೂನ್ 11): ಒಂದು ಸರ್ಕಾರ ಅಧಿಕಾರದಿಂದ ನಿರ್ಗಮಿಸುವ ಅಥವಾ ನಾಯಕತ್ವ ಬದಲಾವಣೆಯಾಗುವ ಸಂಕ್ರಮಣ ಕಾಲದಲ್ಲಿ ಅತ್ಯಂತ ತರಾತುರಿಯಲ್ಲಿ ಕೈಗೊಳ್ಳುವ ನಿರ್ಧಾರಗಳು ಯಾವಾಗಲೂ ಅನುಮಾನದ ಕಣ್ಣೋಟಕ್ಕೆ ಗುರಿಯಾಗುತ್ತವೆ. ಹೌದು..ಹಿಂದುಳಿದ ವರ್ಗಗಳ ಅನುದಾನ (Karnataka Backward Classes fund) ಹಂಚಿಕೆಯಲ್ಲೂ ಬೇಧ ಭಾವ ತಾರತಮ್ಯ ಎಸಗಿದ ಮತ್ತೊಂದು ಮುಖ ಹೊರ ಬಿದ್ದಿದೆ‌. ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಪ್ರಮಾಣವಚನಕ್ಕೆ ಕೇವಲ ಒಂದು ದಿನ ಬಾಕಿ ಇರುವಾಗ, ಆರ್ಥಿಕ ಇಲಾಖೆಯ ಮೂಲಕ 155 ವಿವಿಧ ಸಂಸ್ಥೆಗಳಿಗೆ 71.85 ಕೋಟಿ ರೂಪಾಯಿಗಳ ಅನುದಾನ ಮಂಜೂರು ಮಾಡಿರುವುದು ಚರ್ಚೆ ಹುಟ್ಟುಹಾಕಿದೆ. ಅಹಿಂದ ವರ್ಗದ ಅಗ್ರಗಣ್ಯ ನಾಯಕ ಎಂದೇ ಕರೆಯಿಸಿಕೊಳ್ಳುವ ಸಿದ್ದರಾಮಯ್ಯ ಸಮಸಮಾಜದ ಮಾತುಗಳನ್ನಾಡುತ್ತಾರೆ. ಹೋದಲ್ಲಿ ಬಂದಲ್ಲಿ ಎಲ್ಲ ವೇದಿಕೆಯಲ್ಲಿ ಸಿದ್ದರಾಮಯ್ಯ ಸಾಮಾಜಿಕ ನ್ಯಾಯದ ಕನಸು ಬಿತ್ತುತ್ತಾರೆ. ಆದರೆ ಅವರು ಬಿತ್ತುತ್ತಿರುವ ಕನಸನ್ನು ಅವರೇ ಸಾಕಾರಗೊಳಿಸುವಲ್ಲಿ ಎಡವಿದರೇ ಎಂಬ ಅನುಮಾನಗಳು ವ್ಯಕ್ತವಾಗುತ್ತಿವೆ.

ಅನುದಾನ ಹಂಚಿಕೆಯಲ್ಲೂ ಬೇಧ ಭಾವ

2026-27ನೇ ಸಾಲಿನ ಬಜೆಟ್​ನಲ್ಲಿ ಹಿಂದುಳಿದ ವರ್ಗಗಳ ಸಮುದಾಯ ಭವನಗಳ ನಿರ್ಮಾಣಕ್ಕಾಗಿ 136 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿತ್ತು. ಇದು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಸಾವಿರಕ್ಕೂ ಹೆಚ್ಚು ಜಾತಿಗಳಿಗೆ ತಲುಪಬೇಕಾದ ಹಕ್ಕು. ಆದರೆ ವಾಸ್ತವದಲ್ಲಿ ನಡೆದಿರುವುದು ಬೇರೆಯೇ. ಬಜೆಟ್​ನಲ್ಲಿ ಮೀಸಲಿಟ್ಟ ಹಣದ ಬರೋಬ್ಬರಿ ಶೇ57ರಷ್ಟು ಪಾಲನ್ನು ಕೇವಲ 3-4 ಸಮುದಾಯಗಳಿಗೆ ಸೀಮಿತಗೊಳಿಸಿರುವುದು ಸಾಮಾಜಿಕ ನ್ಯಾಯದ ಹಾದಿಯಲ್ಲಿ ನಡೆದಿರುವ ದೊಡ್ಡ ಎಡವಟ್ಟು.

ಇದನ್ನೂ ನೋಡಿ: ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್, ಸರ್ಕಾರಕ್ಕೆ ಎಷ್ಟು ಉಳಿತಾಯ ಗೊತ್ತಾ?

ರಾಕೇಶ್ ಸಿದ್ದರಾಮಯ್ಯ ಟ್ರಸ್ಟ್​ಗೆ 50 ಲಕ್ಷ ರೂಪಾಯಿ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆದೇಶದಲ್ಲಿ ಮಂಜೂರಾದ 155 ಸಂಸ್ಥೆಗಳ ಪೈಕಿ 89 ಸಂಸ್ಥೆಗಳು ಕುರುಬ ಸಮುದಾಯಕ್ಕೆ ಸೇರಿರುವುದು ಇಲಾಖೆಯ ತಾರತಮ್ಯ ನೀತಿಗೆ ಹಿಡಿದ ಕನ್ನಡಿಯಾಗಿದೆ. ಇನ್ನು ಟಿ. ನರಸೀಪುರದಂತಹ ಒಂದೇ ತಾಲೂಕಿಗೆ 13 ಸಮುದಾಯ ಭವನಗಳನ್ನು ಮಂಜೂರು ಮಾಡಲಾಗಿದೆ. ಗದಗದಲ್ಲಿರುವ ನಿರ್ದಿಷ್ಟ ರಾಕೇಶ್ ಸಿದ್ದರಾಮಯ್ಯ ಟ್ರಸ್ಟ್​ಗೆ 50 ಲಕ್ಷ ರೂಪಾಯಿಗಳ ಅನುದಾನ ನೀಡಿರುವುದು ಈ ಹಂಚಿಕೆಯ ಹಿಂದೆ ಕಲ್ಯಾಣದ ದೃಷ್ಟಿಕೋನಕ್ಕಿಂತ ಹೆಚ್ಚಾಗಿ ‘ರಾಜಕೀಯ ಪ್ರೇರಿತ ಕೃಪೆ’ಯಿದೆಯೋ ಎಂಬ ಸಂಶಯವನ್ನು ಬಲಪಡಿಸುತ್ತದೆ.

ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸಾವಿರಕ್ಕೂ ಹೆಚ್ಚು ಜಾತಿಗಳಿವೆ. ಕೇವಲ ಪ್ರವರ್ಗ-1ರ ಅಡಿಯಲ್ಲೇ 147 ಜಾತಿಗಳಿರುವಾಗ, ಉಳಿದ ಸಮುದಾಯಗಳ ಪಾಡೇನು? ಮಡಿವಾಳ, ಸವಿತಾ ಸಮಾಜ, ಹೆಳವ ಸೇರಿದಂತೆ ಅನೇಕ ಸಮುದಾಯಗಳು ತಮ್ಮ ಅಸ್ತಿತ್ವ ಮತ್ತು ಅಭಿವೃದ್ಧಿಗಾಗಿ ಹೋರಾಡುತ್ತಿವೆ. ಇವುಗಳಿಗೆ ಸಿಗಬೇಕಾದ ಹಕ್ಕುಗಳು ನಿರ್ದಿಷ್ಟ ಸಮುದಾಯಗಳ ಪಾಲಾಗುತ್ತಿದ್ದರೆ, ಈಡಿಗ, ಕುಂಬಾರ ಸೇರಿದಂತೆ ಅನೇಕ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಸಮುದಾಯಗಳ ಅಭಿವೃದ್ದಿಗೆ ಗಮನ ನೀಡಬೇಕಿದೆ. ಹಿಂದುಳಿದ ವರ್ಗಗಳ ಇಲಾಖೆ ತಾನೇ ರಚಿಸಿಕೊಂಡ ‘ಸಾಮಾಜಿಕ ನ್ಯಾಯದ ತತ್ವ’ಕ್ಕೆ ತಾನೇ ಅಪಚಾರವೆಸಗಿದಂತಲ್ಲವೇ? ಹೀಗಾಗಿ ಎಲ್ಲಾ ಸಮುದಾಯಗಳನ್ನ ಸಮಾನವಾಗಿ ಕಾಣಬೇಕು. ಆದೇಶವನ್ನ ಮರು ಪರಿಶೀಲನೆ ಮಾಡಬೇಕು ಎಂದು ಬ್ರಹ್ಮಶ್ರೀ ನಾರಾಯಣ ಗುರುಶಕ್ತಿ ಪೀಠದ ಪ್ರಣವಾನಂದಸ್ವಾಮೀಜಿ ಒತ್ತಾಯಿಸಿದ್ದಾರೆ. ಸರಕಾರದ ಅನುದಾನ ಹಂಚಿಕೆಯು ಅರ್ಹತೆ ಮತ್ತು ಅಗತ್ಯತೆಯನ್ನು ಆಧರಿಸಿರಬೇಕೇ ಹೊರತು, ಪ್ರಭಾವ ಮತ್ತು ಜಾತಿಯ ಬಲವನ್ನು ಆಧರಿಸಿರಬಾರದು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಇನ್ನು ಮುಂದೆ ಕೇವಲ ಒಂದು ಸಮುದಾಯದ “ಖಜಾನೆ”ಯಾಗದೆ, ಹೆಸರಿನಲ್ಲಿರುವಂತೆ ನಿಜಕ್ಕೂ ಹಿಂದುಳಿದ ಸಮುದಾಯಗಳ ಏಳಿಗೆಗೆ ಕೆಲಸ ಮಾಡಲಿದೆಯೇ? ಅಥವಾ ರಾಜಕೀಯ ಅಧಿಕಾರದ ಆಟಕ್ಕೆ ಇಲಾಖೆಯ ಬಜೆಟ್ ಬಳಕೆ ಆಗುತ್ತದೆಯೇ..? ಈ ತರಾತುರಿಯ ಆದೇಶಗಳ ಹಿಂದಿರುವ ಅಂತರಂಗವನ್ನ ಸರ್ಕಾರವೇ ಬಹಿರಂಗಪಡಿಸಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್