ಬೆಂಗಳೂರು, (ಜುಲೈ 26): ತೀವ್ರ ವಿರೋಧದ ನಡುವೆ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಬದಲಾವಣೆ ಮಾಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು (ಜುಲೈ 26) ನಡೆದ ಸಚಿವ ಸಂಪುಟ) ಒಪ್ಪಿಗೆ ನೀಡಿದೆ. ರಾಮನಗರ ಜಿಲ್ಲೆಯ ಹೆಸರು (Bengaluru South District) ಮಾತ್ರ ಬದಲಾವಣೆಯಾಗಲಿದೆ, ಜಿಲ್ಲಾ ಕೇಂದ್ರ ಸೇರಿ ಉಳಿದ ಎಲ್ಲವೂ ಹಾಗೆ ಉಳಿಯಲಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾನೂನು ಸಚಿವ ಎಚ್.ಕೆ. ಪಾಟೀಲ್ ಮಾತನಾಡಿ, ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾವಣೆ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಬ್ರ್ಯಾಂಡ್ ಬೆಂಗಳೂರು ನಿರ್ಮಾಣದ ದೃಷ್ಟಿಯಿಂದ ಈ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ. ಜಿಲ್ಲಾ ಕೇಂದ್ರ ಸೇರಿದಂತೆ ಉಳಿದ ಎಲ್ಲವೂ ಹಾಗೇ ಉಳಿಯಲಿದೆ. ಚುನಾವಣಾ ದೃಷ್ಟಿಯಿಂದ ಹೀಗೆ ಮಾಡಿಲ್ಲ. ಜನರ ಹಿತಾಸಕ್ತಿ ಕಾಪಾಡಲು ಜೊತೆಗೆ ಬ್ರ್ಯಾಂಡ್ ಬೆಂಗಳೂರು ದೃಷ್ಟಿಯಿಂದ ಹೀಗೆ ಮಾಡಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಗುಡ್ನ್ಯೂಸ್: ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ವಯೋಮಿತಿ ಸಡಿಲಿಕೆ
ರಾಮನಗರದವರೂ ಬ್ರ್ಯಾಂಡ್ ಬೆಂಗಳೂರಿಗೆ ಬರಬೇಕು ಎನ್ನುತ್ತಾರೆ. ಜನರ ಅಭಿಪ್ರಾಯ, ಶಾಸಕರ ಅಭಿಪ್ರಾಯ , ಕೆಲ ನಾಯಕರ ಅಭಿಪ್ರಾಯ ತೆಗೆದುಕೊಂಡು ತೀರ್ಮಾನ ಮಾಡಿದ್ದೇವೆ. ನೋಟಿಫೈ ಮಾಡಬೇಕು, ಆಮೇಲೆ ಹೆಸರು ಬದಲಾವಣೆ ಪ್ರಕ್ರಿಯೆ ಶುರುವಾಗುತ್ತೆ. ಇದಕ್ಕೆ ಒಂದು ಸಮಿತಿಯನ್ನು ಮಾಡಲಾಗುತ್ತದೆ ಎಂದು ರಾಮನಗರ ಹೆಸರು ಬದಲಾವಣೆಗೆ ಸಚಿವ ಎಚ್.ಕೆ ಪಾಟೀಲ್ ಸಮರ್ಧಿಸಿಕೊಂಡರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:28 pm, Fri, 26 July 24