Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸೆಮಣೆ ಏರಬೇಕಿದ್ದ ವರ ಕೊರೊನಾಗೆ ಬಲಿ; ಬೆಂಗಳೂರಿನಲ್ಲಿ 28 ವರ್ಷದ ಯುವಕನ ಸಾವು

ಏಪ್ರಿಲ್ 12 ರಂದು ನಾಗರಬಾವಿಯ ಮೆಕ್ಲೂ ಲ್ಯಾಬ್​ನಲ್ಲಿ ಟೆಸ್ಟ್ ಮಾಡಿಸಿದಾಗ ನೆಗೆಟಿವ್ ಬಂದಿತ್ತು. ಬಳಿಕ ಯುಗಾದಿ ಹಬ್ಬದ ನಂತರ ಚಳಿ, ಜ್ವರ ಕಾಣಿಸಿಕೊಂಡಿದ್ದು, ಮತ್ತೆ ವೈದ್ಯರರನ್ನ ಭೇಟಿ ಮಾಡಿ ತಪಾಸಣೆ ನಡೆಸಿದ ವೇಳೆ ಕೊರೊನಾ‌ ಸೋಂಕು ದೃಢಪಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು.

ಹಸೆಮಣೆ ಏರಬೇಕಿದ್ದ ವರ ಕೊರೊನಾಗೆ ಬಲಿ; ಬೆಂಗಳೂರಿನಲ್ಲಿ 28 ವರ್ಷದ ಯುವಕನ ಸಾವು
ಸಾಗರ್ ಎ.ಜಿ (28)
Follow us
preethi shettigar
|

Updated on: May 01, 2021 | 7:35 AM

ಬೆಂಗಳೂರು: ಮುಂದಿನ ತಿಂಗಳು ಮದುವೆ ಮಾಡಬೇಕು ಎಂಬ ಯೋಜನೆಯಲ್ಲಿದ್ದ ಕುಟುಂಬಕ್ಕೆ ಕೊರೊನಾ ಶಾಕ್ ನೀಡಿದ್ದು, ಬಾಳಿ ಬದುಕಬೇಕಾಗಿದ್ದ ಯುವಕ ಸಾವಿನ ಮನೆ ಸೇರಿದ್ದಾನೆ. ಸಾಗರ್ ಎ.ಜಿ (28) ಕೊರೊನಾಗೆ ಬಲಿಯಾದ ಯುವಕ. ಐಸಿಯು ಬೆಡ್ ಮತ್ತು ಆಕ್ಸಿಜನ್ ಸಿಗದೆ ನರಳಾಡಿ ಪ್ರಾಣಬಿಟ್ಟಿದ್ದಾನೆ. ಟೆಸ್ಕೊ ಖಾಸಗಿ ಕಂಪನಿಯಲ್ಲಿ ಐಸಿ ರೋಲ್ ಆಗಿ ಸಾಗರ್ ಕಾರ್ಯನಿರ್ವಹಿಸುತ್ತಿದ್ದ.

ಕಳೆದ 2 ತಿಂಗಳ ಹಿಂದೆ ಸಾಗರ್ ಮದುವೆ ಬಗ್ಗೆ ಮಾತುಕತೆ ಕೂಡ ಆಗಿತ್ತು. ನಿಶ್ಚತಾರ್ಥ ಮಾಡದೆ ಕೇವಲ ಸರಳ ಮದುವೆಗೆ ಯೋಜನೆ ಮಾಡಲಾಗಿತ್ತು. ಆದರೆ ಅಷ್ಟರಲ್ಲಿ ಸಾಗರ್​ಗೆ ಕೊರೊನಾಗೆ ಬಲಿಯಾಗಿದ್ದಾನೆ. ಏಪ್ರಿಲ್ 12 ರಂದು ನಾಗರಬಾವಿಯ ಮೆಕ್ಲೂ ಲ್ಯಾಬ್​ನಲ್ಲಿ ಟೆಸ್ಟ್ ಮಾಡಿಸಿದಾಗ ನೆಗೆಟಿವ್ ಬಂದಿತ್ತು. ಬಳಿಕ ಯುಗಾದಿ ಹಬ್ಬದ ನಂತರ ಚಳಿ, ಜ್ವರ ಕಾಣಿಸಿಕೊಂಡಿದ್ದು, ಮತ್ತೆ ವೈದ್ಯರರನ್ನ ಭೇಟಿ ಮಾಡಿ ತಪಾಸಣೆ ನಡೆಸಿದ ವೇಳೆ ಕೊರೊನಾ‌ ಸೋಂಕು ದೃಢಪಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು.

ಹಬ್ಬ ಕಳೆದ ಒಂದು ವಾರದ ಬಳಿಕ ಮಧ್ಯ ರಾತ್ರಿ ಸುಸ್ತು ಮತ್ತು ಬೇಧಿ ಪ್ರಾರಂಭವಾಯಿತು. ಗ್ಲೂಕೋಸ್ ಹಾಕಿಸಿಕೊಳ್ಳೋಕೆ ಆಸ್ಪತ್ರೆಗೆ ಹೋಗಿದ್ದೇವು. ನಂತರ ಸಿಟಿ ಸ್ಕ್ಯಾನಿಂಗ್ ಮಾಡಿಸಿದ್ವಿ, ನ್ಯುಮೋನಿಯಾ ಇದೆ ಅಂದ್ರು ತುಂಬಾ ಸೀರಿಯಸ್ ಆಗಿದೆ ಅಂದ್ರು, ಅಲ್ಲೆಲ್ಲೂ ಐಸಿಯು ಬೆಡ್ ಸಿಕ್ಕಿಲ್ಲ. ಆದರೆ ವಿಧಿಯಾಟ ಸಾಗರ್ ಕೊರೊನಾಗೆ ಬಲಿಯಾಗಿದ್ದಾನೆ. ನಮಗಾದ ರೀತಿ ಯಾರಿಗೂ ಆಗದಿರಲಿ ಎಂದು ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ.

ಸರ್ಕಾರದ ವಿರುದ್ಧ ಮೃತನ ಕುಟುಂಬಸ್ಥರ ಆಕ್ರೋಶ 78 ವರ್ಷದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೊರೊನಾದಿಂದ‌ ಚಿಕಿತ್ಸೆ ಪಡೆದು ಗುಣಮುಖರಾಗುತ್ತಾರೆ. 28 ವರ್ಷದ ನಮ್ಮ ಪುತ್ರನಿಗೆ ಚಿಕಿತ್ಸೆ ಇಲ್ಲ. ಕನಿಷ್ಠ ಪಕ್ಷ ಬೆಡ್ ಕೂಡ ಸಿಗುತ್ತಿಲ್ಲ. ಬಿಬಿಎಂಪಿ ಮಾಹಿತಿ ಮೇರೆಗೆ ಹೋಂ ಐಸೋಲೇಷನ್ ಮಾಡಿದ್ದೇವು. ಆದರೂ ಸಾಗರ್​ನನ್ನು ಉಳಿಸಿಕೊಳ್ಳಲು ಆಗಲಿಲ್ಲ. ಸಿಎಂ, ಮಿನಿಸ್ಟರ್, ಎಂಎಲ್​ಎಗಳಿಗೆ ಮಣಿಪಾಲ್ ಆಸ್ಪತ್ರೆ ನಮ್ಮಂತರವರು ಮಣ್ಣುಪಾಲು ಎಂದು ಸಾಗರ್ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:

ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದ ಗರ್ಭಿಣಿ ವೈದ್ಯೆ ಕೊರೊನಾಗೆ ಬಲಿ

ಬೆಂಗಳೂರಲ್ಲಿ ಕೊರೊನಾಗೆ ಬಲಿಯಾಗುವವರ ಸಂಖ್ಯೆ ಹೆಚ್ಚಾಗ್ತಿದೆ, ದಿನಕ್ಕೆ 20-22 ಶವ ಬರ್ತಿದೆ ಎಂದ ಚಿತಾಗಾರ ಸಿಬ್ಬಂದಿ

(Groom aged 28 yrs died of Coronavirus infection in Bengaluru)

ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ