AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್: ಝೀರೋ ಬಿಲ್ ಬರುತ್ತಿದ್ದ ಮನೆಗಳಿಗೆ ಸಾವಿರಾರು ರೂ. ಬಿಲ್

ಕಾಂಗ್ರೆಸ್ ಸರ್ಕಾರದ ಜನಪ್ರಿಯ ಯೋಜನೆಗಳಲ್ಲಿ ಗೃಹ ಜ್ಯೋತಿ ಪ್ರಮುಖವಾದುದು. ಪ್ರತಿ ಅರ್ಹ ಮನೆಗೆ 200 ಯೂನಿಟ್​ಗಳವರೆಗೆ ಉಚಿತ ವಿದ್ಯುತ್ ಕೊಡುವ ಉದ್ದೇಶವಿದು. ಆದರೆ ಕೆಲವು ಕಡೆಗಳಲ್ಲಿ ಯೋಜನೆ ದಾರಿತಪ್ಪುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿದ್ದು, ಕೆಲ ಗೃಹ ಜ್ಯೋತಿ ಫಲಾನುಭವಿಗಳ ಮನೆಗಳಿಗೆ ಝೀರೋ ಬಿಲ್ ಬದಲಾಗಿ ಸಾವಿರಾರು ರೂ. ಬಿಲ್ ಬರುತ್ತಿದೆ.

ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್:  ಝೀರೋ ಬಿಲ್ ಬರುತ್ತಿದ್ದ ಮನೆಗಳಿಗೆ ಸಾವಿರಾರು ರೂ. ಬಿಲ್
Gruha Jyothi
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
| Edited By: |

Updated on: Sep 16, 2026 | 10:16 PM

Share

ಬೆಂಗಳೂರು, (ಸೆಪ್ಟೆಂಬರ್ 16): ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ಬೆಸ್ಕಾಂ ಶಾಕ್ ಕೊಟ್ಟಿದೆ. ಝೀರೋ ಬಿಲ್ ಬರುತ್ತಿದ್ದ ಮನೆಗಳಿಗೆ ಇದೀಗ ಸಾವಿರಾರು ರೂಪಾಯಿ ಕರೆಂಟ್ ಬಿಲ್ ಬಂದಿದೆ. ಕಳೆದ ಎರಡು ವರ್ಷಗಳ ಕಾಲ ಫಲಾನುಭವಿಗಳ ಮನೆಗಳಿಗೆ ಜಿರೋ ಜಿರೋ ಬಿಲ್ ಬರುತ್ತಿತ್ತು. ಆದ್ರೆ, ಇದೀಗ ರಾಜ್ಯ ಸರ್ಕಾರ ಪರಿಸ್ಕರಣೆ ಮಾಡಿದ ಬಳಿಕ ಜೀರೋ ಬಿಲ್ ಬರುತ್ತಿದ್ದ ಮನೆಗಳಿಗೆ ಸಾವಿರಾರು ರೂಪಾಯಿ ಬಿಲ್ ಬರುತ್ತಿದೆ. ಹೌದು..ಬೆಂಗಳೂರಿನ ಶಿವಾಜಿನಗರ ಕ್ಷೇತ್ರದ ಮಖಾನ್ ಕಾಂಪೌಂಡ್ ಏರಿಯಾದಲ್ಲಿ ಈ ಸಮಸ್ಯೆ ಎದುರಾಗಿದ್ದು, ಜನರು ಬೆಸ್ಕಾಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಜಾರಿಗೆ ಬಂದು 3 ವರ್ಷಗಳಾಗಿದೆ. ಪ್ರತಿ ಅರ್ಹ ಮನೆಗೂ 200 ಯೂನಿಟ್​ಗಳವರೆಗೆ ಉಚಿತ ವಿದ್ಯುತ್ ಕೊಡೋದು ಯೋಜನೆಯ ಉದ್ದೇಶ. ಆದರೆ ಸಾಕಷ್ಟು ಕಡೆಗಳಲ್ಲಿ ಗೃಹ ಜ್ಯೋತಿ ಫಲಾನುಭವಿಗಳಿಗೆ ಜೀರೋ ಬರ್ತಾ ಇಲ್ಲ. ಶಿವಾಜಿನಗರ ಬಳಿಯ ಭಾರತಿ ವಾರ್ಡ್​ನ ಮಕಾನ್ ಕಾಂಪೌಂಡ್ ಕಾಲೋನಿಯಲ್ಲಿ ಬಡವರು ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ದುಬಾರಿ ಬಿಲ್ ಬರ್ತಾ ಇದೆ.ಒಂದೆರೆಡು ತಿಂಗಳ ಹಿಂದೆ ಇದೇ ಕಾಲೋನಿಯ ಹಲವು ಮನೆಗಳಿಗೆ ಜೀರೋ ಬಿಲ್ ಬದಲು, 1,2,3 ರಿಂದ 5 ಸಾವಿರದವರೆಗೂ ಬಿಲ್ ಕೊಡಲಾಗಿದೆ.

ಇದನ್ನೂ ಓದಿ: ರೇಷನ್ ಕಾರ್ಡ್ ಇ-ಕೆವೈಸಿ ಬಗ್ಗೆ ಬಿಗ್ ಅಪ್ಡೇಟ್ ನೀಡಿದ ಸಚಿವ ರಿಜ್ವಾನ್ ಆರ್ಷದ್, ಬರಲಿದೆ ಮೊಬೈಲ್ ಆ್ಯಪ್

ಇನ್ನು ಈ ಬಗ್ಗೆ ಬೆಸ್ಕಾಂ ಅಧಿಕಾರಿಗಳ ಗಮನಕ್ಕೂ ತರಲಾಗಿದ್ದು, ಸಮಸ್ಯೆ ಸಂಪೂರ್ಣವಾಗಿ ಸರಿಹೋಗಿಲ್ಲ ಅಂತಾ ಸ್ಥಳೀಯರು ಹೇಳುತ್ತಿದ್ದಾರೆ. ಇನ್ನು ಬೆಸ್ಕಾಂ ಸಿಬ್ಬಂದಿ ಪ್ರಕಾರ, ಮೀಟರ್ ರೀಡರ್​ಗಳು ಎಸ್​ಐಆರ್​ ಪ್ರಕ್ರಿಯೆ ಹಾಗೂ ಗೃಹ ಜ್ಯೋತಿ ಮರುಪರಿಶೀಲನಾ ಕಾರ್ಯದಲ್ಲಿ ನಿರತರಾಗಿರುವುದರಿಂದ ಕೆಲವು ಕಡೆ ತಾಂತ್ರಿಕ ಸಮಸ್ಯೆಯಾಗಿದೆಯಂತೆ.

ಒಟ್ಟಾರೆ ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಹಲವು ಕಡೆಗಳಲ್ಲಿ ಗೃಹ ಜ್ಯೋತಿಯ ಪ್ರಕಾರ ಶೂನ್ಯ ಬಿಲ್ ಬರ್ತಾ ಇಲ್ಲ ಎಂಬ ಆರೋಪ ಇದೆ. ಏನೇ ಇದ್ದರೂ, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಗೃಹ ಜ್ಯೋತಿಯ ಆಸರೆ ಕೈತಪ್ಪದಿರಲಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.

ಲಕ್ಷ್ಮಿ ನರಸಿಂಹ ಸ್ವಾಮಿ. ಎಲ್ ಆದ ನಾನು ಮೂಲತಃ ಬೆಂಗಳೂರಿನವಾಗಿದ್ದು, ಪೂರ್ವ ತಾಲೂಕಿನ ದೊಡ್ಡಗುಬ್ಬಿ ಎಂಬ ಗ್ರಾಮದಲ್ಲಿ ವಾಸವಿದ್ದೇನೆ. ಕಳೆದ 6 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ವರದಿಗಾರನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಐತಿಹಾಸಿಕ ಸರ್ಕಾರಿ ಕಲಾ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನಭಾರತಿ) ದಲ್ಲಿ M.A (ಪತ್ರಿಕೋದ್ಯಮ ಮತ್ತು ಸಂವಹನ) ಸ್ನಾತಕೋತ್ತರ ಪದವಿ ಪೂರೈಸಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯ ನಗರ ಪಾಲಿಕೆಗಳು, ಬೆಸ್ಕಾಂ, ಜಲಮಂಡಳಿ, ಆಹಾರ, ಆರೋಗ್ಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಲ್ಲಿ ನಾಗರಿಕರಿಗೆ ಎದುರಾಗುವ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈವರೆಗೂ ಶ್ರಮವಹಿಸಿದ್ದು, ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದೇನೆ..

Read More