AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಕರೆಂಟ್ ಬಿಲ್ ಜಾಸ್ತಿ ಬಂದಿದ್ದಕ್ಕೆ ಹೆಸ್ಕಾಂ ಸಿಬ್ಬಂದಿಗೆ ಹಲ್ಲೆ; ಆರೋಪಿ ಬಂಧನ

ಗೃಹಜ್ಯೋತಿ ಯೋಜನೆ ಜಾರಿಯಾದ ನಂತರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿದ್ಯುತ್​ ಮೀಟರ್​​ ರೀಡರ್​ ಮೇಲೆ ಗ್ರಾಹಕರು ಹಲ್ಲೆ ಮಾಡುತ್ತಿರುವ ಪ್ರಕರಣಗಳು ಹೆಚ್ಚು ವರದಿಯಾಗುತ್ತಿವೆ. ಅದರಂತೆ ಹುಬ್ಬಳ್ಳಿಯ ಮಹಾಲಕ್ಷ್ಮೀ ಬಡಾವಣೆಯಲ್ಲಿ ಕರೆಂಟ್​ ಬಿಲ್ ಕೊಡಲು ಹೋದ ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಲಾಗಿದೆ.

ಹುಬ್ಬಳ್ಳಿ: ಕರೆಂಟ್ ಬಿಲ್ ಜಾಸ್ತಿ ಬಂದಿದ್ದಕ್ಕೆ ಹೆಸ್ಕಾಂ ಸಿಬ್ಬಂದಿಗೆ ಹಲ್ಲೆ; ಆರೋಪಿ ಬಂಧನ
ಹಲ್ಲೆಗೊಳಗಾದ ಮಲ್ಲಯ್ಯ ಗಾಣಾಚಾರಿ
ಶಿವಕುಮಾರ್ ಪತ್ತಾರ್
| Edited By: ವಿವೇಕ ಬಿರಾದಾರ|

Updated on:Aug 16, 2023 | 3:34 PM

Share

ಹುಬ್ಬಳ್ಳಿ: ಗೃಹಜ್ಯೋತಿ (Gruhajyoti) ಯೋಜನೆ ಜಾರಿಯಾದ ನಂತರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿದ್ಯುತ್​ ಮೀಟರ್​​ ರೀಡರ್ (Meter Reader)​ ಮೇಲೆ ಗ್ರಾಹಕರು ಹಲ್ಲೆ ಮಾಡುತ್ತಿರುವ ಪ್ರಕರಣಗಳು ಹೆಚ್ಚು ವರದಿಯಾಗುತ್ತಿವೆ. ಅದರಂತೆ ಹುಬ್ಬಳ್ಳಿಯ (Hubballi) ಮಹಾಲಕ್ಷ್ಮೀ ಬಡಾವಣೆಯಲ್ಲಿ ಕರೆಂಟ್​ ಬಿಲ್ ಕೊಡಲು ಹೋದ ಹೆಸ್ಕಾಂ (HESCOM) ಸಿಬ್ಬಂದಿ ಮೇಲೆ ಹಲ್ಲೆ ಮಾಡಲಾಗಿದೆ. ಮಲ್ಲಯ್ಯ ಗಣಾಚಾರಿ ಹಲ್ಲೆಗೊಳಗಾದ ಹೆಸ್ಕಾಂ ಮೀಟರ್ ರೀಡರ್. ಅಬ್ದುಲ್ ಹಲ್ಲೆ ಮಾಡಿದ ಗ್ರಾಹಕ.

ಅಬ್ದುಲ್ ಕಳೆದ 2-3 ತಿಂಗಳ ಕರೆಂಟ್ ಬಿಲ್ ಬಾಕಿ ಉಳಿಸಿಕೊಂಡಿದ್ದರು. ಹೀಗಾಗಿ ಆಗಸ್ಟ್ ತಿಂಗಳ ಬಿಲ್ 5 ಸಾವಿರಕ್ಕಿಂತ ಜಾಸ್ತಿ ಬಂದಿದೆ. ನಿಗದಿತ 200 ಯೂನಿಟ್​ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡಿದ ಹಿನ್ನೆಲೆಯಲ್ಲಿ ಸರ್ಕಾರದ ಗೃಹಜ್ಯೋತಿ ಯೋಜನೆ ಸಹ ಕ್ಯಾನ್ಸಲ್ ಆಗಿದೆ.

ಇದನ್ನೂ ಓದಿ: ಹುಬ್ಬಳ್ಳಿ: ಟವರ್ ಮೇಲೆ ಎರಡು ಧರ್ಮಗಳ ಧ್ವಜ ಕಟ್ಟಿದ ಪ್ರಕರಣ: ಇಬ್ಬರು ವಶಕ್ಕೆ

ಹೀಗಾಗಿ ಮೀಟರ್ ರೀಡರ್ ಮಲ್ಲಯ್ಯ ಗಾಣಾಚಾರಿ ಎಂದಿನಂತೆ ವಿದ್ಯುತ್​ ಬಿಲ್ ನೀಡಲು ಹೋಗಿದ್ದಾರೆ. ಈ ವೇಳೆ ವಿದ್ಯುತ್​​ ಬಿಲ್​ ಜಾಸ್ತಿ ಬಂದಿದೆ ಎಂದು ಗ್ರಾಹಕ ​ಅಬ್ದುಲ್ ಇಟ್ಟಿಗೆಯಿಂದ ಮಲ್ಲಯ್ಯ ಗಾಣಾಚಾರಿ ಅವರ ತಲೆಗೆ ಹೊಡೆದು, ಮನಬಂದಂತೆ ಥಳಿಸಿರುವ ಆರೋಪ ಕೇಳಿಬಂದಿದೆ. ಈ ಕುರಿತು ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆ ಮಾಡಿರುವ ಆರೋಪಿ ಅಬ್ದುಲ್​ನನ್ನು ಪೊಲೀಸರು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:34 pm, Wed, 16 August 23

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ