ಗೃಹ ಜ್ಯೋತಿ: ಶೇಕಡವಾರು ಬದಲಾಗಿ 10 ಯುನಿಟ್ ನೀಡಲು ತೀರ್ಮಾನ, ಸಚಿವ ಜಾರ್ಜ್ ವಿವರಣೆ ಇಲ್ಲಿದೆ
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಇಂಧನ ಇಲಾಖೆಯ ಸಚಿವ ಕೆ.ಜೆ.ಜಾರ್ಜ್, 48 ಯುನಿಟ್‌ಗಿಂತ ಕಡಿಮೆ ಬಳಸಿದವರಿಗೆ ಶೇ.10 ಯುನಿಟ್ ಫ್ರೀ ವಿದ್ಯುತ್ ಕೊಡುತ್ತಿದ್ದೆವು. ಆದರೆ ಇದೀಗ ಶೇ.10 ಬದಲು 10 ಯುನಿಟ್ ನೀಡಲು ಸಂಪುಟದಲ್ಲಿ ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ. ಕೇವಲ 20-25 ಯುನಿಟ್ ಬಳಸಿದರೆ ಶೇ.2ರಷ್ಟು ಯುನಿಟ್ ನೀಡುತ್ತಿದ್ದೆವು. ಆದರೆ ಸಂಪುಟ ನಿರ್ಧಾರದಿಂದ 48 ಇರುವುದು 58 ಯುನಿಟ್ ಆಗುತ್ತದೆ.

ಬೆಂಗಳೂರು, ಜನವರಿ 18: 48 ಯುನಿಟ್‌ಗಿಂತ ಕಡಿಮೆ ಬಳಸಿದವರಿಗೆ ಶೇ.10 ಯುನಿಟ್ ಫ್ರೀ ವಿದ್ಯುತ್ ಕೊಡುತ್ತಿದ್ದೆವು. ಆದರೆ ಇದೀಗ ಶೇ.10 ಬದಲು 10 ಯುನಿಟ್ ನೀಡಲು ಸಂಪುಟದಲ್ಲಿ ನಿರ್ಧರಿಸಿದ್ದೇವೆ ಎಂದು ಇಂಧನ ಇಲಾಖೆಯ ಸಚಿವ ಕೆ.ಜೆ.ಜಾರ್ಜ್ (KJ Goerge) ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲವರು 48 ಯುನಿಟ್ ಕೊಟ್ಟರೂ ಕಡಿಮೆ ಬಳಕೆ ಮಾಡುತ್ತಿದ್ದರು. ಕೇವಲ 20-25 ಯುನಿಟ್ ಬಳಸಿದರೆ ಶೇ.2ರಷ್ಟು ಯುನಿಟ್ ನೀಡುತ್ತಿದ್ದೆವು. ಆದರೆ ಸಂಪುಟ ನಿರ್ಧಾರದಿಂದ 48 ಇರುವುದು 58 ಯುನಿಟ್ ಆಗುತ್ತದೆ. ಮುಂದಿನ ಬಿಲ್ಲಿಂಗ್‌ನಲ್ಲಿ ಇದು ಸೇರ್ಪಡೆಯಾಗುತ್ತದೆ ಎಂದು ಹೇಳಿದ್ದಾರೆ.
ಇದರಿಂದ ಸರ್ಕಾರಕ್ಕೆ ಹೊರೆ ಆಗುತ್ತೆ, ಆದರೆ ಬಡವರಿಗೆ ಅನುಕೂಲವಾಗುತ್ತೆ. ಎಷ್ಟೋ ಗ್ರಾಹಕರಿಗೆ ಶೂನ್ಯ ಬಿಲ್ ಬರುತ್ತಿರಲಿಲ್ಲ. ಇವರಿಗೆ ಅನುಕೂಲ ಆಗಲಿ ಅಂತಾ ಸಿಎಂ ಸಿದ್ದರಾಮಯ್ಯ ತೀರ್ಮಾನ ಕೈಗೊಂಡಿದ್ದಾರೆ. ಇದರಿಂದ ವಾರ್ಷಿಕವಾಗಿ 500-600 ಕೋಟಿ ರೂ. ಹೆಚ್ಚುವರಿ ಹೊರೆ ಆಗುತ್ತದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಗೃಹಜ್ಯೋತಿ ನಿಯಮದಲ್ಲಿ ಮಹತ್ವದ ಬದಲಾವಣೆ: ಶೇ.10ರಷ್ಟು ಬದಲು 10 ಯುನಿಟ್ ನೀಡಲು ಸಂಪುಟ ತೀರ್ಮಾನ
ಸಚಿವ ಹೆಚ್.ಕೆ.ಪಾಟೀಲ್ ಮಾತನಾಡಿ, ವಿದ್ಯುತ್ ಸರಬರಾಜು ಕಂಪನಿಗಳು ಯಪಿಸಿಎಲ್ನವರಿಗೆ ಪಾವತಿಸಬೇಕಾದ ವಿವಾದಿತ ಮೊತ್ತದ ಕುರಿತು ಮತ್ತು ಸೆಂಟ್ರಲ್ ಇಆರ್.ಸಿಯವರ ಆದೇಶದ ಕುರಿತು ಚರ್ಚೆ ಮಾಡಲಾಗಿದೆ.
ಇದನ್ನೂ ಓದಿ: ಫ್ರೀ ಕರೆಂಟ್ ಗೃಹಜ್ಯೋತಿ ಯೋಜನೆ ಅರ್ಜಿಗೆ ಏನೇನ್ ದಾಖಲೆ ಬೇಕು? ಇಲ್ಲಿದೆ ನೋಡಿ
ವಿವಿಧ ಭಿನ್ನ ಕಾನೂನು ಅಭಿಪ್ರಾಯಗಳು ವ್ಯಕ್ತವಾಗಿದೆ. ಲೇಟ್ ಪೇಮೆಂಟ್ ಸರ್ಚಾರ್ಜ್ 1348 ಕೋಟಿ ರೂ. + 419 ಕೋಟಿ ರೂ. ನೀಡಬೇಕಾಗಿದೆ. ಈ ಬಗ್ಗೆ ಮುಂದಿನ ಕ್ಯಾಬಿನೆಟ್ನಲ್ಲಿ ಚರ್ಚೆ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರದ ಮೊಟ್ಟ ಮೊದಲ ಗ್ಯಾರಂಟಿ ಗೃಹಜ್ಯೋತಿ ಯೋಜನೆ ಆಗಸ್ಟ್ ತಿಂಗಳಿನಿಂದ ಜಾರಿಯಾಗಿತ್ತು. ಗೃಹಜ್ಯೋತಿ ಯೋಜನೆ ಅಡಿ 200 ಯುನಿಟ್ ಫ್ರೀ ವಿದ್ಯುತ್ ಖಚಿತವಾಗಿತ್ತು. 200 ಯುನಿಟ್ ಒಳಗಡೆ ಕರೆಂಟ್ ಬಳಸುವವರು ಆಗಸ್ಟ್ನಿಂದ ಕರೆಂಟ್ ಬಿಲ್ ಕಟ್ಟುವ ಅಗತ್ಯವಿಲ್ಲ ಎಂದು ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:19 pm, Thu, 18 January 24