ಗೃಹ ಜ್ಯೋತಿ: ಶೇಕಡವಾರು ಬದಲಾಗಿ 10 ಯುನಿಟ್ ನೀಡಲು ತೀರ್ಮಾನ, ಸಚಿವ ಜಾರ್ಜ್‌ ವಿವರಣೆ ಇಲ್ಲಿದೆ

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಇಂಧನ ಇಲಾಖೆಯ ಸಚಿವ ಕೆ.ಜೆ.ಜಾರ್ಜ್‌, 48 ಯುನಿಟ್‌ಗಿಂತ ಕಡಿಮೆ ಬಳಸಿದವರಿಗೆ ಶೇ.10 ಯುನಿಟ್ ಫ್ರೀ ವಿದ್ಯುತ್ ಕೊಡುತ್ತಿದ್ದೆವು. ಆದರೆ ಇದೀಗ ಶೇ.10 ಬದಲು 10 ಯುನಿಟ್‌ ನೀಡಲು ಸಂಪುಟದಲ್ಲಿ ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ. ಕೇವಲ 20-25 ಯುನಿಟ್ ಬಳಸಿದರೆ ಶೇ.2ರಷ್ಟು ಯುನಿಟ್ ನೀಡುತ್ತಿದ್ದೆವು. ಆದರೆ ಸಂಪುಟ ನಿರ್ಧಾರದಿಂದ 48 ಇರುವುದು 58 ಯುನಿಟ್‌ ಆಗುತ್ತದೆ.

ಗೃಹ ಜ್ಯೋತಿ: ಶೇಕಡವಾರು ಬದಲಾಗಿ 10 ಯುನಿಟ್ ನೀಡಲು ತೀರ್ಮಾನ, ಸಚಿವ ಜಾರ್ಜ್‌ ವಿವರಣೆ ಇಲ್ಲಿದೆ
ಸಚಿವ ಕೆ.ಜೆ.ಜಾರ್ಜ್‌
Edited By:

Updated on: Jan 18, 2024 | 5:08 PM

ಬೆಂಗಳೂರು, ಜನವರಿ 18: 48 ಯುನಿಟ್‌ಗಿಂತ ಕಡಿಮೆ ಬಳಸಿದವರಿಗೆ ಶೇ.10 ಯುನಿಟ್ ಫ್ರೀ ವಿದ್ಯುತ್ ಕೊಡುತ್ತಿದ್ದೆವು. ಆದರೆ ಇದೀಗ ಶೇ.10 ಬದಲು 10 ಯುನಿಟ್‌ ನೀಡಲು ಸಂಪುಟದಲ್ಲಿ ನಿರ್ಧರಿಸಿದ್ದೇವೆ ಎಂದು  ಇಂಧನ ಇಲಾಖೆಯ ಸಚಿವ ಕೆ.ಜೆ.ಜಾರ್ಜ್‌ (KJ Goerge) ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲವರು 48 ಯುನಿಟ್ ಕೊಟ್ಟರೂ ಕಡಿಮೆ ಬಳಕೆ ಮಾಡುತ್ತಿದ್ದರು. ಕೇವಲ 20-25 ಯುನಿಟ್ ಬಳಸಿದರೆ ಶೇ.2ರಷ್ಟು ಯುನಿಟ್ ನೀಡುತ್ತಿದ್ದೆವು. ಆದರೆ ಸಂಪುಟ ನಿರ್ಧಾರದಿಂದ 48 ಇರುವುದು 58 ಯುನಿಟ್‌ ಆಗುತ್ತದೆ. ಮುಂದಿನ ಬಿಲ್ಲಿಂಗ್‌ನಲ್ಲಿ ಇದು ಸೇರ್ಪಡೆಯಾಗುತ್ತದೆ ಎಂದು ಹೇಳಿದ್ದಾರೆ.

ಇದರಿಂದ ಸರ್ಕಾರಕ್ಕೆ ಹೊರೆ ಆಗುತ್ತೆ, ಆದರೆ ಬಡವರಿಗೆ ಅನುಕೂಲವಾಗುತ್ತೆ. ಎಷ್ಟೋ ಗ್ರಾಹಕರಿಗೆ ಶೂನ್ಯ ಬಿಲ್‌ ಬರುತ್ತಿರಲಿಲ್ಲ. ಇವರಿಗೆ ಅನುಕೂಲ ಆಗಲಿ ಅಂತಾ ಸಿಎಂ ಸಿದ್ದರಾಮಯ್ಯ ತೀರ್ಮಾನ ಕೈಗೊಂಡಿದ್ದಾರೆ. ಇದರಿಂದ ವಾರ್ಷಿಕವಾಗಿ 500-600 ಕೋಟಿ ರೂ. ಹೆಚ್ಚುವರಿ ಹೊರೆ ಆಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗೃಹಜ್ಯೋತಿ ನಿಯಮದಲ್ಲಿ ಮಹತ್ವದ ಬದಲಾವಣೆ: ಶೇ.10ರಷ್ಟು ಬದಲು 10 ಯುನಿಟ್‌ ನೀಡಲು ಸಂಪುಟ ತೀರ್ಮಾನ

ಸಚಿವ ಹೆಚ್‌.ಕೆ.ಪಾಟೀಲ್‌ ಮಾತನಾಡಿ, ವಿದ್ಯುತ್ ಸರಬರಾಜು ಕಂಪನಿಗಳು ಯಪಿಸಿಎಲ್​ನವರಿಗೆ ಪಾವತಿಸಬೇಕಾದ ವಿವಾದಿತ ಮೊತ್ತದ ಕುರಿತು ಮತ್ತು ಸೆಂಟ್ರಲ್ ಇಆರ್.ಸಿಯವರ ಆದೇಶದ ಕುರಿತು ಚರ್ಚೆ ಮಾಡಲಾಗಿದೆ.

ಇದನ್ನೂ ಓದಿ: ಫ್ರೀ ಕರೆಂಟ್​ ಗೃಹಜ್ಯೋತಿ ಯೋಜನೆ ಅರ್ಜಿಗೆ ಏನೇನ್ ದಾಖಲೆ ಬೇಕು? ಇಲ್ಲಿದೆ ನೋಡಿ

ವಿವಿಧ ಭಿನ್ನ ಕಾನೂನು ಅಭಿಪ್ರಾಯಗಳು ವ್ಯಕ್ತವಾಗಿದೆ. ಲೇಟ್ ಪೇಮೆಂಟ್ ಸರ್ಚಾರ್ಜ್ 1348 ಕೋಟಿ ರೂ. + 419 ಕೋಟಿ ರೂ. ನೀಡಬೇಕಾಗಿದೆ. ಈ ಬಗ್ಗೆ ಮುಂದಿನ ಕ್ಯಾಬಿನೆಟ್​ನಲ್ಲಿ ಚರ್ಚೆ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರದ ಮೊಟ್ಟ ಮೊದಲ ಗ್ಯಾರಂಟಿ ಗೃಹಜ್ಯೋತಿ ಯೋಜನೆ ಆಗಸ್ಟ್ ತಿಂಗಳಿನಿಂದ ಜಾರಿಯಾಗಿತ್ತು. ಗೃಹಜ್ಯೋತಿ ಯೋಜನೆ ಅಡಿ 200 ಯುನಿಟ್ ಫ್ರೀ ವಿದ್ಯುತ್ ಖಚಿತವಾಗಿತ್ತು. 200 ಯುನಿಟ್ ಒಳಗಡೆ ಕರೆಂಟ್ ಬಳಸುವವರು ಆಗಸ್ಟ್​ನಿಂದ ಕರೆಂಟ್ ಬಿಲ್ ಕಟ್ಟುವ ಅಗತ್ಯವಿಲ್ಲ ಎಂದು ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:19 pm, Thu, 18 January 24

ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More
Loading...
Unable to load recommendations.
Follow Us