Gruha Jyothi Scheme: ಗೃಹಜ್ಯೋತಿ ಯೋಜನೆ ನೋಂದಣಿ, ಮೊದಲ ದಿನ 55 ಸಾವಿರ ಅರ್ಜಿ

ರಾಜ್ಯದ ಎಲ್ಲ ಮನೆಗಳಿಗೆ 200 ಯುನಿಟ್​​ ವರೆಗೆ ಉಚಿತ ವಿದ್ಯುತ್ ನೀಡುವ "ಗೃಹಜ್ಯೋತಿ" ಯೋಜನೆ ಸೌಲಭ್ಯ ಪಡೆಯಲು ನೋಂದಣಿ ಪ್ರಕ್ರಿಯೆ ಭಾನುವಾರ (ಜೂ.18) ರಂದು ಆರಂಭವಾಗಿದ್ದು, ಮೊದಲ ದಿನ 55,000 ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ.

Gruha Jyothi Scheme: ಗೃಹಜ್ಯೋತಿ ಯೋಜನೆ ನೋಂದಣಿ, ಮೊದಲ ದಿನ 55 ಸಾವಿರ ಅರ್ಜಿ
ಗೃಹ ಜ್ಯೋತಿ
Follow us
|

Updated on: Jun 19, 2023 | 7:37 AM

ಬೆಂಗಳೂರು: ರಾಜ್ಯದ ಎಲ್ಲ ಮನೆಗಳಿಗೆ 200 ಯುನಿಟ್​​ ವರೆಗೆ ಉಚಿತ ವಿದ್ಯುತ್ ನೀಡುವ “ಗೃಹಜ್ಯೋತಿ” (Gruha Jyoti) ಸೌಲಭ್ಯ ಪಡೆಯಲು ನೋಂದಣಿ ಪ್ರಕ್ರಿಯೆ ಭಾನುವಾರ (ಜೂ.18) ರಂದು ಆರಂಭವಾಗಿದ್ದು, ಮೊದಲ ದಿನ 55,000 ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ. ಗೃಹಜ್ಯೋತಿ ನೋಂದಣಿ ಪ್ರಕ್ರಿಯೆಗೆ ಸರ್ಕಾರ (Karnataka Government) ಅವಕಾಶ ಕಲ್ಪಿಸಿದ ಬೆನ್ನಲ್ಲೇ ಗ್ರಾಹಕರು ನೋಂದಣಿಗೆ ಮುಗಿಬಿದ್ದ ಕಾರಣ ಕೆಲ ಕಾಲ ಸರ್ವರ್ ಸಮಸ್ಯೆ ಎದುರಾಗಿತ್ತು. ಆಗಿಂದಾಗ್ಗೆ ಸರ್ವರ್ ಸಮಸ್ಯೆಯನ್ನು ತಾಂತ್ರಿಕ ಸಿಬ್ಬಂದಿ ನಿಭಾಯಿಸಿದರು. ಅತಿ ಹೆಚ್ಚು ಅರ್ಜಿಗಳು ಬೆಸ್ಕಾಂ ವ್ಯಾಪ್ತಿಯಲ್ಲಿ ಬಂದಿವೆ.

ನೋಂದಣಿ ಪ್ರಕ್ರಿಯೆ ರಾಜ್ಯದ ಎಲ್ಲಾ ಕರ್ನಾಟಕ ಒನ್, ಗ್ರಾಮ ಒನ್ ಹಾಗು ಬೆಂಗಳೂರು ಒನ್ ಕೇಂದ್ರಗಳಲ್ಲಿ ಏಕಕಾಲದಲ್ಲಿ ಆರಂಭವಾಗಿದ್ದು, ಭಾನುವಾರ ಸಂಜೆ 6 ಗಂಟೆ ವೇಳೆಗೆ ರಾಜ್ಯದಲ್ಲಿ ಒಟ್ಟು 55000 ಗ್ರಾಹಕರು ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಈ ಮೂಲಕ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಗೃಹಜ್ಯೋತಿಗೆ ಅರ್ಜಿ ಸಲ್ಲಿಸುವುದು ಹೇಗೆ?

ಜನೆಯ ಸೌಲಭ್ಯ ಪಡೆಯಲು ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ವೆಬ್​ಸೈಟ್​ಗೆ ಭೇಟಿ ನೀಡುವ ಮೂಲಕ ಮೊಬೈಲ್, ಕಂಪ್ಯೂಟರ್, ಲ್ಯಾಪ್​ಟಾಪ್​ನಲ್ಲೂ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1912 ಸಂಪರ್ಕಿಸಬಹುದಾಗಿದೆ.

ಗ್ರಾಹಕರು ವಿದ್ಯುತ್ ಬಿಲ್ ನಲ್ಲಿರುವ ಖಾತೆ ಸಂಖ್ಯೆ, ತಮ್ಮ ಆಧಾರ್ ಸಂಖ್ಯೆ ಹಾಗು ಮೊಬೈಲ್ ಸಂಖ್ಯೆಯನ್ನು ನಮೂದಿಸಿ ನೋಂದಣಿ ಮಾಡಿಕೊಳ್ಳಬಹುದು.

ರಾಜ್ಯದ ಎಲ್ಲಾ ಕರ್ನಾಟಕ ಒನ್, ಗ್ರಾಮ ಒನ್ ಹಾಗು ಬೆಂಗಳೂರು ಒನ್ ಕೇಂದ್ರಗಳಲ್ಲಿ ನೋಂದಣಿ ಮಾಡಬಹುದು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ