Gruha Lakshmi: ತೆರಿಗೆ ಪಾವತಿಸುವ ಮಕ್ಕಳಿದ್ದರೂ ತಾಯಂದಿರಿಗೆ ಸಿಗಲಿದೆ ಗೃಹಲಕ್ಷ್ಮೀ ಸೌಲಭ್ಯ; ಹೆಬ್ಬಾಳ್ಕರ್

ಮತ್ತೆ ನಿಲುವು ಬದಲಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ತೆರಿಗೆ ಪಾವತಿಸುವ ಮಕ್ಕಳಿದ್ದರೂ ತಾಯಂದಿರಿಗೆ ಗೃಹಲಕ್ಷ್ಮೀ ಯೋಜನೆಯ ಸೌಲಭ್ಯ ನೀಡಲಾಗುವುದು ಎಂದು ಹೇಳಿದ್ದಾರೆ.

Gruha Lakshmi: ತೆರಿಗೆ ಪಾವತಿಸುವ ಮಕ್ಕಳಿದ್ದರೂ ತಾಯಂದಿರಿಗೆ ಸಿಗಲಿದೆ ಗೃಹಲಕ್ಷ್ಮೀ ಸೌಲಭ್ಯ; ಹೆಬ್ಬಾಳ್ಕರ್
ಲಕ್ಷ್ಮೀ ಹೆಬ್ಬಾಳ್ಕರ್
Follow us
Ganapathi Sharma
|

Updated on: Jun 10, 2023 | 12:47 PM

ಬೆಂಗಳೂರು: ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ನೀಡಿದ ಪ್ರಮುಖ ಭರವಸೆಗಳಲ್ಲಿ ಒಂದಾಗಿರುವ ‘ಗೃಹ ಲಕ್ಷ್ಮಿ(Gruha Lakshmi) ಯೋಜನೆ ಕುರಿತಾದ ಗೊಂದಲಗಳು ಮುಂದುವರಿದಿವೆ. ಈ ಮಧ್ಯೆ ಮತ್ತೆ ನಿಲುವು ಬದಲಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar), ತೆರಿಗೆ ಪಾವತಿಸುವ ಮಕ್ಕಳಿದ್ದರೂ ತಾಯಂದಿರಿಗೆ ಗೃಹಲಕ್ಷ್ಮೀ ಯೋಜನೆಯ ಸೌಲಭ್ಯ ನೀಡಲಾಗುವುದು ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೇ ಅವರು, ತೆರಿಗೆ ಪಾವತಿಸುವ ಮಕ್ಕಳ ತಾಯಿಗೆ ಯೋಜನೆಯಡಿ 2,000 ರೂ. ನೀಡಲಾಗುವುದಿಲ್ಲ ಎಂದು ಹೇಳಿದ್ದರು. ನಂತರ ಈ ಕುರಿತು ಪರಿಗಣಿಸಲಾಗುವುದು ಎಂದು ಸ್ಪಷ್ಟನೆ ನೀಡಿದ್ದರು.

ಈ ವಾರದ ಆರಂಭದಲ್ಲಿ, ಯೋಜನೆಯ ಸೌಲಭ್ಯ ಪಡೆಯಲು ಸರ್ಕಾರವು ಹಲವಾರು ನಿರ್ಬಂಧಗಳನ್ನು ವಿಧಿಸಿತ್ತು. ಅವುಗಳಲ್ಲಿ ಮುಖ್ಯವಾದದ್ದೆಂದರೆ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ರಿಟರ್ನ್ಸ್ ಅಥವಾ ಜಿಎಸ್ಟಿ ರಿಟರ್ನ್ಸ್ ಸಲ್ಲಿಸುತ್ತಿದ್ದರೆ ಅವರು ಯೋಜನೆಗೆ ಅರ್ಹರಾಗಿರುವುದಿಲ್ಲ.

ಇದರಿಂದ ಮಕ್ಕಳು ಆದಾಯ ತೆರಿಗೆ ಕಟ್ಟುತ್ತಿದ್ದರೆ ಅವರ ತಾಯಿಗೆ ಸೌಲಭ್ಯ ದೊರೆಯಲಿದೆಯೇ ಎಂಬ ಬಗ್ಗೆ ಗೊಂದಲ ಉಂಟಾಗಿತ್ತು.

ಮಕ್ಕಳು ತೆರಿಗೆ ಪಾವತಿಸುತ್ತಿದ್ದರೆ ಅದು ತಿಂಗಳಿಗೆ 2,000 ರೂಪಾಯಿಗಳನ್ನು ಪಡೆಯುವ ಮಹಿಳೆಯರ ಅರ್ಹತೆಯ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಹೆಬ್ಬಾಳ್ಕರ್ ಹೇಳಿದ್ದಾರೆ.

ಇದನ್ನೂ ಓದಿ: ಗೃಹಲಕ್ಷ್ಮೀ ಯೋಜನೆ ಕಾರಣಕ್ಕೆ ಇತರೆ ಪಿಂಚಣಿಗಳನ್ನು ಕಡಿತ ಮಾಡುತ್ತಾ ಸರ್ಕಾರ? ಸಚಿವ ಕೃಷ್ಣ ಭೈರೇಗೌಡ ಸ್ಪಷ್ಟನೆ ಇಲ್ಲಿದೆ

ಈ ಮಧ್ಯೆ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಮ್ಮ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿಗಳೊಂದಿಗೆ ಯೋಜನೆ ಅನುಷ್ಠಾನ ಕುರಿತು ಈಗಾಗಲೇ ಜಂಟಿ ಸಭೆ ನಡೆಸಿದ್ದಾರೆ. ಸಭೆಯ ಮಾತನಾಡಿದ ಅವರು, ಈಗಾಗಲೇ ವಿವಿಧ ಪಿಂಚಣಿ ಪಡೆಯುತ್ತಿರುವ ಮಹಿಳೆಯರೂ ‘ಗೃಹ ಲಕ್ಷ್ಮಿ’ ಯೋಜನೆಗೆ ಅರ್ಹರಾಗಿರುತ್ತಾರೆ ಎಂದು ತಿಳಿಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ