AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gruha Lakshmi: ಮನೆಯ ಯಜಮಾನಿಗೆ ಸದ್ಯಕ್ಕಿಲ್ಲ ಸಿಹಿ ಸುದ್ದಿ, ಜ್ಯೋತಿ ಬೆಳಗಿದರೂ ಮನೆ ಬಾಗಿಲಿಗೆ ಲಕ್ಷ್ಮೀ ಬರುವುದು ಇನ್ನೂ ತಡ

ಮನೆಯ ಯಜಮಾನಿಗೆ ಸಿಹಿ ಸುದ್ದಿ ಸದ್ಯಕ್ಕಿಲ್ಲ. ಗೃಹ ಲಕ್ಷ್ಮಿ ಯೋಜನೆಗೆ ಜಾರಿಗೆಗೆ ಇನ್ನೂ ಶುಭ ಘಳಿಗೆ ಕೂಡಿ ಬಂದಿಲ್ಲ. ಸಚಿವ ಸಂಪುಟದಲ್ಲಿ ಚರ್ಚೆಯಾದರೂ ಇನ್ನೂ ಅರ್ಜಿ ಸಲ್ಲಿಕೆಗೆ ಮುಹೂರ್ತನಿಗದಿಯಾಗಿಲ್ಲ. ಈ ಹಿನ್ನೆಲೆಯಲ್ಲಿ ಜ್ಯೋತಿ ಬೆಳಗಿದರೂ ಮನೆ ಬಾಗಿಲಿಗೆ ಲಕ್ಷ್ಮಿ ಬರುವುದು ಇನ್ನೂ ತಡ.

Gruha Lakshmi: ಮನೆಯ ಯಜಮಾನಿಗೆ ಸದ್ಯಕ್ಕಿಲ್ಲ ಸಿಹಿ ಸುದ್ದಿ, ಜ್ಯೋತಿ ಬೆಳಗಿದರೂ ಮನೆ ಬಾಗಿಲಿಗೆ ಲಕ್ಷ್ಮೀ ಬರುವುದು ಇನ್ನೂ ತಡ
ಗೃಹಲಕ್ಷ್ಮಿ ಯೋಜನೆ,
ರಮೇಶ್ ಬಿ. ಜವಳಗೇರಾ
|

Updated on: Jun 29, 2023 | 7:22 AM

Share

ಬೆಂಗಳೂರು: ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಸಿಎಂ ಸಿದ್ದರಾಮಯ್ಯ (Siddaramaiah) ಘೋಷಿಸಿದ ಗ್ಯಾರಂಟಿಗಳಲ್ಲೊಂದಾಗಿದೆ. ಗೃಹಲಕ್ಷ್ಮೀ ಯೋಜನೆ ಜಾರಿಗೆ ಸರ್ಕಾರದಿಂದ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಅಂತಿಮ ತಯಾರಿ ನಡೆಯುತ್ತಿದೆ. ಗೃಹಲಕ್ಷ್ಮೀ ಯೋಜನೆ ಜಾರಿ ಬಗ್ಗೆ ನಿನ್ನೆ(ಜೂನ್ 28) ಸಿಎಂ ಸಿದ್ದರಾಮಯ್ಯ ನೇತೃತ್ವದ ಕ್ಯಾಬಿನೇಟ್ ಸಭೆಯಲ್ಲಿ ಚರ್ಚೆಯಾದರೂ ಇನ್ನೂ ಅರ್ಜಿ ಸಲ್ಲಿಕೆಗೆ ಮುಹೂರ್ತನಿಗದಿಯಾಗಿಲ್ಲ. ಕೆಲ ತಾಂತ್ರಿಕ ಕಾರಣಗಳಿಂದ ಯೋಜನೆ ಜಾರಿ ವಿಳಂಬವಾಗಲಿದೆಯಂತೆ. ಈ ಹಿನ್ನೆಲೆಯಲ್ಲಿ ಮನೆಯೊಡತಿಯ ಖಾತೆಗೆ 2 ಸಾವಿರ ರೂಪಾಯಿ ಬೀಳಲು ಇನ್ನೂ ತಡವಾಗಲಿದೆ.

ಇದನ್ನೂ ಓದಿ: Gruha Lakshmi Scheme: ಎಚ್ಚರ ಎಚ್ಚರ…ಗೃಹಲಕ್ಷ್ಮಿ ಯೋಜನೆ ಹೆಸರಿಲ್ಲಿ ಬಂದಿವೆ ಮೂರು ನಕಲಿ ಆ್ಯಪ್​

ಈ ಹಿಂದೆ ಹಲವು ಯೋಜನೆಗೆ ಅರ್ಜಿ ಸಲ್ಲಿಕೆಯಲ್ಲಿ ಸಮಸ್ಯೆ ಉಂಟಾಗಿತ್ತು. ಇದರಿಂದ ಎಚ್ಚೆತ್ತ ಸರ್ಕಾರ ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆ ವೇಳೆ ಗೊಂದಲ ಉಂಟಾಗುವುದನ್ನು ತಪ್ಪಿಸಲು ಪ್ರತ್ಯೇಕ ಮೊಬೈಲ್ ಆ್ಯಪ್ ರೆಡಿ ಮಾಡಲಾಗಿದೆ. ಯೋಜನೆಯನ್ನು ಸರಿಯಾದ ಫಲಾನುಭವಿಗಳಿಗೆ ತಲುಪಿಸಲು, ಯೋಜನೆ ದುರ್ಬಳಕೆ ತಪ್ಪಿಸಲು ಸಾಕಷ್ಟು ಮುಂಜಾಗ್ರತೆ ವಹಿಸಲಾಗುತ್ತಿದೆ. ಇದಕ್ಕಾಗಿಯೇ ಅಧಿಕಾರಿಗಳು ಸಮಯ ತೆಗೆದುಕೊಂಡು ಆ್ಯಪ್ ಸಿದ್ಧಪಡಿಸಿದ್ದಾರೆ. ಇನ್ನು ಜುಲೈ 14 ರಿಂದ ಅರ್ಜಿ ಸಲ್ಲಿಕೆ ಆರಂಭ ಆಗಲಿದೆ ಎನ್ನಲಾಗಿದ್ದು, ಈ ಸಂಬಂಧ ಜುಲೈ 3 ರಂದು ಹೆಚ್ಚಿನ ಮಾಹಿತಿ ನೀಡಲಿದ್ದಾರಂತೆ.

ತಾಂತ್ರಿಕ ಒತ್ತಡ ಕೇವಲ ಸರ್ಕಾರ ಹೇಳುತ್ತಿರುವ ನೆಪ ಮಾತ್ರಾನಾ.?

ಹೌದು…ಜ್ಯೋತಿ ಬೆಳಗಿದರೂ ಮನೆ ಬಾಗಿಲಿಗೆ ಲಕ್ಷ್ಮಿ ಬರುವುದು ಇನ್ನೂ ತಡವಾಗಲಿದೆ. ಗೃಹ ಲಕ್ಷ್ಮಿ ಯೋಜನೆಗೆ ಅನುದಾನದ ಕೊರತೆಯ ಆತಂಕ ಶುರುವಾಗಿದೆ. ಎಲ್ಲ ಗ್ಯಾರಂಟಿಗಳಿಗೆ ಹೋಲಿಸಿದರೆ ಗೃಹ ಲಕ್ಷ್ಮಿಗೆ ಹೆಚ್ಚಿನ ಅನುದಾನ ಬೇಕು. ಹೀಗಾಗಿ ತಾಂತ್ರಿಕ ಒತ್ತಡ ಕೇವಲ ಸರ್ಕಾರ ಹೇಳುತ್ತಿರುವ ನೆಪ ಮಾತ್ರಾನಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. ಸುಮಾರು 2 ಕೋಟಿಗೂ ಹೆಚ್ಚು ಮಹಿಳೆಯರಿಂದ ಅರ್ಜಿ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಕ್ಕೆ ಸರಿಸುಮಾರು 30 ರಿಂದ 35 ಸಾವಿರ ಕೋಟಿಯಷ್ಟು ಬೃಹತ್ ಮೊತ್ತ ಗೃಹ ಲಕ್ಷ್ಮಿ ಯೋಜನೆಗೆ ಬೇಕಿದೆ. ಹೀಗಾಗಿ ಇಷ್ಟು ದೊಡ್ಡ ಮೊತ್ತವನ್ನು ಹೊಂದಿಸುವುದು ಸರ್ಕಾರಕ್ಕೆ ದೊಡ್ಡ ಚಿಂತೆಯಾಗಿದೆ.

ಬಜೆಟ್ ವರೆಗೂ ಕಾಯುವ ಬಗ್ಗೆ ಸರಕಾರದ ಮಟ್ಟದಲ್ಲಿ ಚರ್ಚೆಯಾಗುತ್ತಿದ್ದು, ಬಜೆಟ್ ನಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಅನುದಾನ ಘೋಷಣೆ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಬಜೆಟ್ ಮುಗಿದ ಬಳಿಕ ವಿವಿಧ ಇಲಾಖೆಗಳ ಅನುದಾನ ಹಂಚಿಕೆ ಗಮನಿಸಿಕೊಂಡು ಗೃಹ ಲಕ್ಷ್ಮಿ ಜಾರಿಯಾಗುವ ಸಾಧ್ಯತೆಗಳಿವೆ. ಇನ್ನೊಂದೆಡೆ ಗೃಹ ಲಕ್ಷ್ಮಿ ಮೂಲಕ ಪಕ್ಷ ಸಂಘಟನೆಯನ್ನೂ ಬಲಗೊಳಿಸಿಕೊಳ್ಳು ಕಾಂಗ್ರೆಸ್ ಸರ್ಕಾರ ಪ್ಲ್ಯಾನ್ ಮಾಡುತ್ತಿದೆ ಎಂದು ತಿಳಿದುಬಂದಿದೆ. ಪ್ರಜಾಪ್ರತಿನಿಧಿಗಳ ಆಯ್ಕೆ ಮೂಲಕ ಪಕ್ಷ ಸಂಘಟನೆಗೂ ಯೋಜನೆ ಬಳಕೆ ಮಾಡಿಕೊಳ್ಳಲು ಯೋಜನೆ ರೂಪಿಸಿದೆ. ಇದೇ ಕಾರಣಕ್ಕೆ ಅಪ್ಲಿಕೇಷನ್ ರೆಡಿಯಾದರೂ ಇನ್ನೂ ಸಿಕ್ಕಿಲ್ಲ ಗೃಹ ಲಕ್ಷ್ಮಿ ಯೋಜನೆಗೆಅಧಿಕೃತವಾಗಿ ಜಾರಿಗೆಗೆ ಗ್ರೀನ್​ ಸಿಗ್ನಲ್ ನೀಡುತ್ತಿಲ್ಲ ಎಂದು ಹೇಳಲಾಗಿದೆ.

ಮತ್ತೊಂದಡೆ ಆ್ಯಪ್ ಬಿಡುಗಡೆಗೂ ಮುನ್ನವೇ ಪ್ಲೇ ಸ್ಟೋರ್​ಗಳಲ್ಲಿ ಫೇಕ್ ಆ್ಯಪ್​ಗಳ ಆರ್ಭಟವೂ ಜೋರಾಗಿದೆ..‌ ಒಂದಲ್ಲ, ಎರಡಲ್ಲ ನಾಲ್ಕೈದು ಹೆಸರಿ ಗೃಹಲಕ್ಷ್ಮೀ ಆ್ಯಪ್​ಗಳು ಬಂದಿವೆ. ಆ್ಯಪ್​ಗಳಲ್ಲಿ ಅರ್ಜಿ ಸಲ್ಲಿಕೆ ಮಾಡೋರು ಇದರಿಂದ ಎಚ್ಚರಿಕೆ ಇರಬೇಕಾಗಿದೆ.

ಒಟ್ಟಾರೆಯಾಗಿ ಜೂನ್ ತಿಂಗಳಿನಿಂದ ಆರಂಭವಾಗಬೇಕಿದ್ದ ಗೃಹಲಕ್ಷ್ಮಿ ಯೋಜನೆ, ಜುಲೈ ತಿಂಗಳಲ್ಲಿ ಆರಂಭವಾಗಲಿದ್ದು, ಆಗಸ್ಟ್ ತಿಂಗಳ ಹೊತ್ತಿಗೆ ಫಲಾನುಭವಿಗಳ ಕೈ ಸೇರಲಿದೆ ಎನ್ನಲಾಗುತ್ತಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್
ರೆಬೆಲ್ ನಾಯಕರಲ್ಲಿ ಕುಮಾರ ಬಂಗಾರಪ್ಪ ಉಳಿದವರಿಗಿಂತ ಜಾಸ್ತಿ ಜನಪ್ರಿಯ
ರೆಬೆಲ್ ನಾಯಕರಲ್ಲಿ ಕುಮಾರ ಬಂಗಾರಪ್ಪ ಉಳಿದವರಿಗಿಂತ ಜಾಸ್ತಿ ಜನಪ್ರಿಯ