Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ, ಅರ್ಜಿಯಲ್ಲೇನಿದೆ?

ಗೃಹಲಕ್ಷ್ಮೀ ಯೋಜನೆಯ ಅರ್ಜಿ: ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಎರಡನೇ ಗ್ಯಾರಂಟಿಯಾಗಿರುವ ಗೃಹ ಲಕ್ಷ್ಮೀ ಯೋಜನೆಯ ಕುರಿತು ಅಧಿಕೃತ ಆದೇಶ ಹೊರಬಿದ್ದಿದೆ. ಇದೀಗ ಗೃಹಲಕ್ಷ್ಮೀ ಯೋಜನೆ ಅರ್ಜಿ ನಮೂನೆ ಬಿಡುಗಡೆಯಾಗಿದೆ.

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ, ಅರ್ಜಿಯಲ್ಲೇನಿದೆ?
ಗೃಹಲಕ್ಷ್ಮಿ ಯೋಜನೆ,
Follow us
ರಮೇಶ್ ಬಿ. ಜವಳಗೇರಾ
|

Updated on:Jun 09, 2023 | 2:38 PM

ಬೆಂಗಳೂರು: ಚುನಾವಣೆಗೂ ಮುನ್ನ ಘೋಷಿಸಿದ್ದ ಗೃಹಲಕ್ಷ್ಮೀ ಯೋಜನೆಯನ್ನು(Gruha Lakshmi Scheme) ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದೆ. ಈ ಯೋಜನೆಯಡಿ ಮನೆಯ ಯಜಮಾನಿಗೆ 2000ರೂಪಾಯಿ ಸಹಾಯಧನ ನೀಡಲಾಗುತ್ತಿದ್ದು, ಲಾಭ ಪಡೆದುಕೊಳ್ಳಲು ಸರ್ಕಾರವು ಹಲವು ಷರತ್ತುಗಳನ್ನು ವಿಧಿಸಿದೆ. ಈಗಾಗಲೇ ಕೆಲ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಇದೀಗ ಅರ್ಜಿ ನಮೂನೆಯನ್ನು (Gruha Lakshmi Scheme application) ಬಿಡುಗಡೆ ಮಾಡಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಗೃಹಲಕ್ಷ್ಮಿ ಯೋಜನೆ ಅರ್ಜಿ ನಮೂನೆ ಬಿಡುಗಡೆ ಮಾಡಲಾಗಿದ್ದು, ‘ಗೃಹಲಕ್ಷ್ಮೀ’ ಅರ್ಜಿ ನಮೂನೆಯಲ್ಲಿ ಮೂವರ ಭಾವಚಿತ್ರವಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾವಚಿತ್ರ ಅರ್ಜಿ ನಮೂನೆಯಲ್ಲಿದೆ.

ಇದನ್ನೂ ಓದಿ: Gruha Lakshmi Scheme: ಗೃಹ ಲಕ್ಷ್ಮೀ ಯೋಜನೆಗೆ ಮಾರ್ಗಸೂಚಿ ಪ್ರಕಟ: ಮತ್ತೆ ಗೊಂದಲ ಮೂಡಿಸಿದ ಸರ್ಕಾರ

ಇನ್ನು ಅರ್ಜಿಯಲ್ಲಿ ಮನೆಯ ಯಜಮಾನಿ ಪತಿಯ ದಾಖಲೆಗಳನ್ನು ಕೇಳಲಾಗಿದೆ. ಪತಿಯ ಆಧಾರ್ ಕಾರ್ಡ್ ವೋಟರ್ ಐಡಿ ದಾಖಲೆ ಕೂಡ ಅರ್ಜಿ ಸಲ್ಲಿಕೆ ವೇಳೆ ಅಗತ್ಯವಾಗಿದೆ. ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ಮುಂದಾಗಿತ್ತು. ಇತ್ತೀಚೆಗೆ ನಡೆದ ಸಚಿವ ಸಂಪುಟದ ಅನುಮೋದನ ಪಡೆದುಕೊಂಡಿತ್ತು. ಸದ್ಯ ಸರ್ಕಾರ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಿದೆ.

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

ಈ ಯೋಜನೆಯ ಫಲಾನುಭವಿಗಳು ಜೂನ್ 15 ರಿಂದ ಜುಲೈ 15 ರವರೆಗೆ ಅರ್ಜಿ ಸಲ್ಲಿಸಬೇಕು. ಆ ನಂತರ ಜುಲೈ 15 ರಿಂದ ಫಲಾನುಭವಿಗಳ ಆಯ್ಕೆ ಮಾಡುವುದು. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15 ರಂದು ಅವರ ಬ್ಯಾಂಕ್‌ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಅರ್ಜಿದಾರರು ಸೇವಾ ಸಿಂಧು ಪೋರ್ಟಲ್‌ ಮೂಲಕವಾಗಲಿ ಅಥವಾ ಭೌತಿಕವಾಗಿಯಾಗಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲಿ ಪ್ರಮುಖ ಷರತ್ತುಗಳೇನು?

1. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ. 2. ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಬ್ಬ ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸಲಿದೆ. 3. ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್‌ ಖಾತೆ ಮತ್ತು ಆಧಾರ ಕಾರ್ಡ್‌ ಗಳನ್ನು ಜೋಡಣೆ ಮಾಡಬೇಕು. 4. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ಪಾವತಿದಾರರಾಗಿದ್ದಲ್ಲಿ ಸೌಲಭ್ಯ ಸಿಗುವುದಿಲ್ಲ.

5. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿಯು ಜಿಎಸ್‌ಟಿ ರಿಟರ್ನ್ ಸಲ್ಲಿಸುವವರಾಗಿದ್ದಲ್ಲಿ ಈ ಯೋಜನೆಗೆ ಅರ್ಹರಾಗಿರುವುದಿಲ್ಲ.

Published On - 11:05 am, Thu, 8 June 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್