Gruha Lakshmi Scheme: ಗೃಹಲಕ್ಷ್ಮೀ ಯೋಜನೆಯಲ್ಲಿ ಬದಲಾವಣೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಹೇಳಿಕೆ

ರಾಜ್ಯ ಸರ್ಕಾರದ ಮಹತ್ವದ 5 ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ಅಡಿ ಮನೆಯ ಯಜಮಾನಿ ಅಕೌಂಟ್​ಗೆ 2 ಸಾವಿರ ರೂ. ಅನ್ನು ಸರ್ಕಾರ ಹಾಕಲಿದೆ. ಇದೀಗ ಈ ಯೋಜನೆಯಲ್ಲಿ ಕೆಲ ಬದಲಾವಣೆ ಮಾಡಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

Follow us
ವಿವೇಕ ಬಿರಾದಾರ
|

Updated on:Jun 17, 2023 | 4:45 PM

ಚಿಕ್ಕಮಗಳೂರು: ಗೃಹಲಕ್ಷ್ಮೀ (Gruha Lakshmi Scheme) ಯೋಜನೆಗೆ ಅರ್ಜಿ ಸಲ್ಲಿಕೆ  ಮತ್ತಷ್ಟು ವಿಳಂಬ ಆಗುತ್ತೆ. ಬಹಳ ಸರಳವಾಗಿ ಗೃಹಲಕ್ಷ್ಮೀ ಯೋಜನೆ ಜನರಿಗೆ ತಲುಪಬೇಕೆಂದು ಯೋಜನೆಯಲ್ಲಿ ಕೆಲವು ಬದಲಾವಣೆಳಗಳನ್ನು ಮಾಡಲಾಗುತ್ತಿದೆ. ಅಧಿಕಾರಿಗಳಿಗೆ ಕೆಲ ಬದಲಾವಣೆ ಮಾಡಲು ಸೂಚನೆ ನೀಡಿದ್ದೇವೆ. ಮೊದಲು ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್​​ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಇದೀಗ ಇದರ ಜೊತೆಗೆ ಗ್ರಾಮ ಪಂಚಾಯಿತಿಯಲ್ಲಿನ (Gram Panchayat) ಬಾಪೂಜಿ ಸೇವಾ ಕೇಂದ್ರದಲ್ಲೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಹೀಗಾಗಿ ಅರ್ಜಿ ಸಲ್ಲಿಸಲು ವಿಳಂಬವಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಹೇಳಿದ್ದಾರೆ.

ಚಿಕ್ಕಮಗಳೂರಿನ ಗೌರಿಗದ್ದೆ ಆಶ್ರಮದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸರ್ಕಾರದ ಯೋಜನೆಯನ್ನ ಯಾರು ಮನೆ ಮನೆ ಮುಟ್ಟಿಸಲು ಪ್ರಜಾ ಪ್ರತಿನಿಧಿ ಆರಂಭಿಸುತ್ತಿದ್ದೇವೆ. ಈಗಾಗಲೆ ಅಧಿಕಾರಿಗಳು ಸಾಫ್ಟ್ವೇರ್​​/ಅಪ್ಲಿಕೇಶನ್​ ಅನ್ನು ಅಭಿವೃದ್ಧಿ ಪಡಿಸುತ್ತಿದ್ದಾರೆ. ಅತ್ಯಂತ ಶೀಘ್ರದಲ್ಲೇ ಅರ್ಜಿ ಪ್ರಕ್ರಿಯೆ ಆರಂಭವಾಗುತ್ತದೆ. ಆಗಸ್ಟ್​​​ 17 ಅಥವಾ 18ರಂದು ಮನೆ ಯಜಮಾನಿ ಖಾತೆಗೆ ಹಣ ತಲಪುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ: ಆಶ್ವಾಸನೆ ಸಾಂವಿಧಾನಿಕ ನಿಬಂಧನೆ ಅಲ್ಲ, ಅದು ಕೇವಲ ಭರವಸೆ ಎಂದ ಸಚಿವ ಹೆಚ್​ಸಿ ಮಹದೇವಪ್ಪ

ಇದಕ್ಕೂ ಮುನ್ನ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಜಿಲ್ಲೆಯ ಕೊಪ್ಪ ತಾಲೂಕಿನ ವಿನಯ ಗುರೂಜಿ ಅವರ ಗೌರಿಗದ್ದೆ ಆಶ್ರಮದಲ್ಲಿ ಮಳೆಗಾಗಿ ಚಂಡಿಕಾಯಾಗ ನಡೆಸಿದರು. ಚಂಡಿಕಾಯಾಗದ ಪೂರ್ಣಾಹುತಿಯಲ್ಲಿ ಸಚಿವ ಡಿ.ಸುಧಾಕರ್​ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ಶಾಸಕರು ಭಾಗಿಯಾಗಿದ್ದರು.

ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪ್ರಮುಖ ಅಂಶಗಳು:

  • ಅರ್ಜಿದಾರರು 16-06-2023 ರಿಂದ ಅರ್ಜಿ ಸಲ್ಲಿಸಬಹುದಾಗಿರುತ್ತದೆ
  • ಅರ್ಜಿಗಳನ್ನು ಆನ್‌ಲೈನ್ ಮೂಲಕ ಅಥವಾ ಭೌತಿಕವಾಗಿ ಗ್ರಾಮ ಒನ್/ಬೆಂಗಳೂರು ಒನ್/ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಸಲ್ಲಿಸಬಹುದಾಗಿದೆ (https://sevasindhugs.karnataka.gov.in/gruhalakshmi)
  • ಅರ್ಜಿ ಸಲ್ಲಿಕೆಗೆ SMS ಮೂಲಕ ಹಾಗೂ ಸೇವಾಸಿಂಧು ಪೋರ್ಟಲ್ ಮೂಲಕ Auto generated ಸ್ವೀಕೃತಿಗಳನ್ನು ಪಡೆಯಬಹುದಾಗಿದೆ.
  • ಅರ್ಜಿ ಸಲ್ಲಿಸಲು ಅರ್ಜಿದಾರರ ಹಾಗೂ ಪತಿಯ ಆಧಾರ್ ಕಾರ್ಡ್ ಸಂಖ್ಯೆ ಮೊಬೈಲ್ ಸಂಖ್ಯೆ ಹಾಗೂ ಅರ್ಜಿದಾರರ ಬ್ಯಾಂಕ್‌ ಖಾತೆ ವಿವರಗಳು ಅಗತ್ಯವಾಗಿರುತ್ತದೆ.
  • ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ, ಸಂಪೂರ್ಣ ಉಚಿತವಾಗಿದ್ದು, ಅರ್ಜಿದಾರರು ಮಧ್ಯವರ್ತಿಗಳ ಮೇಲೆ ಅವಲಂಬಿತರಾಗದೆ ಅರ್ಜಿಯನ್ನು ಸ್ವತ ಮೇಲೆ ತಿಳಿಸಿದ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿರುತ್ತದೆ.
  • ಅರ್ಜಿ ಸಲ್ಲಿಕೆಗೆ ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಯೋಜನೆಯ ಕುರಿತಂತೆ ಸಂದೇಹ/ ಕುಂದುಕೊರತೆಗಳಿದ್ದಲ್ಲಿ ಸಹಾಯವಾಣಿ (Helpline) – 1902 ಗೆ ಸಂಪರ್ಕಿಸಬಹುದಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ  ಕ್ಲಿಕ್ ಮಾಡಿ

Published On - 4:43 pm, Sat, 17 June 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ