ಗೃಹಲಕ್ಷ್ಮಿಯರೇ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಆಫರ್

ಕಾಂಗ್ರೆಸ್​ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆ ಒಂದು ವರ್ಷ ಪೂರೈಸಿದೆ. ಈ ಸಂದರ್ಭದಲ್ಲಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಾಜ್ಯದ ಮಹಿಳೆಯರಿಗೆ ರೀಲ್ಸ್ ಸ್ಪರ್ಧೆಯೊಂದನ್ನು ಆಯೋಜಿಸಿದ್ದಾರೆ. ಆ ಬಗ್ಗೆ ವಿಡಿಯೋ ಸಂದೇಶದ ಮೂಲಕ ಸಚಿವೆ ನೀಡಿದ ವಿವರ ಇಲ್ಲಿದೆ.

ಗೃಹಲಕ್ಷ್ಮಿಯರೇ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಆಫರ್
ಗೃಹಲಕ್ಷ್ಮಿಯರೇ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಆಫರ್Image Credit source: women and child development department
Follow us
Ganapathi Sharma
|

Updated on: Sep 02, 2024 | 12:18 PM

ಬೆಂಗಳೂರು, ಸೆಪ್ಟೆಂಬರ್ 2: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಉಚಿತ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ, ಪ್ರತಿ ಮನೆಯ ಯಜಮಾನಿ ಖಾತೆಗೆ ತಿಂಗಳಿಗೆ 2000 ರೂ. ವರ್ಗಾವಣೆ ಮಾಡುವ ‘ಗೃಹಲಕ್ಷ್ಮಿ’ ಯೋಜನೆ ಒಂದು ವರ್ಷ ಪೂರೈಸಿದೆ. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಾಜ್ಯದ ಮಹಿಳೆಯರಿಗೆ ಹೊಸದೊಂದು ಆಫರ್ ನೀಡಿದ್ದಾರೆ. ಯೋಜನೆ ಬಗ್ಗೆ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ ಎಂದು ಅವರು ಸಾಮಾಜಿಕ ಮಾಧ್ಯಮಗಳ ಮೂಲಕ ಮಹಿಳೆಯರಿಗೆ ಮನವಿ ಮಾಡಿದ್ದಾರೆ.

ರಾಜ್ಯದ ಕೋಟ್ಯಂತರ ಮನೆಯೊಡತಿಯರ ಕುಟುಂಬ ನಿರ್ವಹಣೆಯ ಜವಾಬ್ದಾರಿಯೊಂದಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಅನುಷ್ಠಾನಗೊಳಿಸಿರುವ ‘ಗೃಹಲಕ್ಷ್ಮಿ’ ಯೋಜನೆ ಯಶಸ್ವಿಯಾಗಿ ಒಂದು ವರ್ಷ ಪೂರೈಸಿರುವ ಸಂಭ್ರಮದಲ್ಲಿದೆ. ಮನೆಯೊಡತಿಯರಿಗೆ / ಕುಟುಂಬಗಳಿಗೆ ಗೃಹಲಕ್ಷ್ಮಿ ಯೋಜನೆಯಿಂದ ಏನೆಲ್ಲ ಬದಲಾವಣೆಗಳಾಗಿವೆ ಎಂಬುದನ್ನು ತಿಳಿದುಕೊಳ್ಳಲು ಕಾತುರಳಾಗಿದ್ದೇನೆ. ನಿಮ್ಮ ಜೀವನದಲ್ಲಿ ಗೃಹಲಕ್ಷ್ಮಿ ಯೋಜನೆಯಿಂದಾದ ಬದಲಾವಣೆಯ ಕುರಿತು ಒಂದು ತಿಂಗಳ ಅವಧಿಯವರೆಗೆ (ಸೆಪ್ಟೆಂಬರ್ 30) ರೀಲ್ಸ್ ಮೂಲಕ ಸೋಷಿಯಲ್ ಮಿಡಿಯಾಗಳಲ್ಲಿ ಪೋಸ್ಟ್ ಮಾಡಿ ನಮ್ಮೊಂದಿಗೆ ಹಂಚಿಕೊಳ್ಳಿ, ಯಾವ ರೀಲ್ಸ್​ಗಳು ಹೆಚ್ಚಿನ ವೀಕ್ಷಣೆಗಳನ್ನು (Views) ಪಡೆದುಕೊಳ್ಳುತ್ತವೆಯೋ ಅಂತಾ ರೀಲ್ಸ್​ಗಳಿಗೆ ವೈಯಕ್ತಿಕವಾಗಿ ಬಹುಮಾನ ವಿತರಿಸಲಿದ್ದೇನೆ‌ ಎಂದು ಅವರು ಉಲ್ಲೇಖಿಸಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್ ವಿಡಿಯೋ ಸಂದೇಶ

ಮತ್ತೊಂದು ಸಂದೇಶದಲ್ಲಿ, ಗೃಹಲಕ್ಷ್ಮಿ ಯೋಜನೆಯ ಹಣದಿಂದಾಗಿ ನಾಡಿನ ಕೋಟ್ಯಂತರ ಮಹಿಳೆಯರು ನೆಮ್ಮದಿಯ ಬದುಕು ಕಟ್ಟಿಕೊಂಡಿದ್ದಾರೆ. ಗೃಹಲಕ್ಷ್ಮಿ ಯೋಜನೆ ಅನುಷ್ಠಾನಗೊಂಡಾಗಿನಿಂದ ಮಹಿಳೆಯರ ಮುಖದಲ್ಲಿ ಮಂದಹಾಸ ಮೂಡಿದೆ. ಗೃಹಲಕ್ಷ್ಮಿ ಯೋಜನೆ ಯಶಸ್ವಿ ಪಯಣದೊಂದಿಗೆ ಒಂದು ವರ್ಷ ಪೂರೈಸಿದೆ. ಈ ಯಶಸ್ವಿ ಪಯಣದ ಸಂಭ್ರಮದಲ್ಲಿ ತಾವೂ ಭಾಗವಹಿಸಿ, ಗೃಹಲಕ್ಷ್ಮಿಯಿಂದ ತಮಗಾದ ಉಪಯುಕ್ತತೆ ಕುರಿತು ಅನಿಸಿಕೆಗಳನ್ನು ನಮ್ಮೊಂದಿಗೆ ಹಂಚಿಕೊಳ್ಳಿ ಎಂದು ಹೆಬ್ಬಾಳ್ಕರ್ ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ