ಕೊನೆಗೂ ಗೃಹಲಕ್ಷ್ಮಿಯರ ಖಾತೆಗೆ ಬಂತು ಹಣ: ಆದರೂ ಮುಗಿಯದ ಗೋಳು!

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಐದು ಉಚಿತ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಜೂನ್ ತಿಂಗಳ ಹಣ ಮನೆ ಯಜಮಾನಿಯರ ಬ್ಯಾಂಕ್ ಖಾತೆಗೆ ಸಂದಾಯವಾಗಿದೆ. ಆದಾಗ್ಯೂ, ಮಹಿಳೆಯರ ಗೋಳು ತಪ್ಪಿಲ್ಲ. ಯಾಕೆಂದರೆ ಇನ್ನೆರಡು ತಿಂಗಳ ಬಾಕಿ ಹಣ ಜಮೆಯಾಗಲು ಇನ್ನೂ ಸಮಯ ಬೇಕಂತೆ!

ಕೊನೆಗೂ ಗೃಹಲಕ್ಷ್ಮಿಯರ ಖಾತೆಗೆ ಬಂತು ಹಣ: ಆದರೂ ಮುಗಿಯದ ಗೋಳು!
ಕೊನೆಗೂ ಗೃಹಲಕ್ಷ್ಮಿಯರ ಖಾತೆಗೆ ಬಂತು ಹಣ
Follow us
| Updated By: ಗಣಪತಿ ಶರ್ಮ

Updated on: Sep 10, 2024 | 11:13 AM

ಬೆಂಗಳೂರು, ಸೆಪ್ಟೆಂಬರ್ 10: ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗದ ವಿಚಾರ ಕಳೆದ ಕೆಲವು ತಿಂಗಳುಗಳಿಂದ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಗ್ಯಾರಂಟಿಗಳ ಹೆಸರಿನಲ್ಲಿ ಕಾಂಗ್ರೆಸ್ ಪಕ್ಷವು ಜನರನ್ನು ವಂಚಿಸುತ್ತಿದೆ ಎಂದು ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಟೀಕಿಸಿದ್ದವು. ಆದರೆ, ತಾಂತ್ರಿಕ ಕಾರಣಗಳಿಂದ ಗೃಹಲಕ್ಷ್ಮಿ ಹಣ ವರ್ಗಾವಣೆಯಾಗುತ್ತಿದೆ. ಖಂಡಿತವಾಗಿಯೂ ಸರ್ಕಾರವು 2000 ರೂ. ವರ್ಗಾವಣೆ ಮಾಡಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದರು. ಇದೀಗ ಕೊನೆಗೂ ಜೂನ್ ತಿಂಗಳ ಹಣ ಮಹಿಳೆಯರ ಖಾತೆಗಳಿಗೆ ವರ್ಗಾವಣೆಯಾಗಿದೆ.

ಮೂರು ತಿಂಗಳ‌ ಬಳಿಕ‌ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆ ಸೇರಿದೆ. ಆದರೆ, ಬಾಕಿ ಇರುವ ಇನ್ನೆರಡು ತಿಂಗಳ‌ ಹಣ ಖಾತೆ ಸೇರುವುದು ವಿಳಂಬವಾಗಲಿದೆ. ಸದ್ಯ ಜುಲೈ, ಆಗಸ್ಟ್ ತಿಂಗಳ ಹಣ ಖಾತೆಗಳಿಗೆ ವರ್ಗಾವಣೆಯಾಗುವುದು ಬಾಕಿ ಉಳಿದಿದೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳುವುದೇನು?

ಜುಲೈ ಹಾಗೂ ಆಗಸ್ಟ್​ ತಿಂಗಳ ಗೃಹಲಕ್ಷ್ಮಿ ಹಣವನ್ನು ಖಾತೆಗೆ ವರ್ಗಾಯಿಸುವ ಪ್ರಕ್ರಿಯೆ ಆರಂಭವಾಗಿಲ್ಲ. ಹೀಗಾಗಿ ಜುಲೈ ತಿಂಗಳ‌ ಬರುವುದು ವಿಳಂಬವಾಗುವ ಸಾಧ್ಯತೆ ಇದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸದ್ಯ ಮಹಿಳಾ ಮತ್ತು ಮಕ್ಕಳ ಇಲಾಖೆಯಯಿಂದ ಈಗಾಗಲೇ ಜುಲೈ ತಿಂಗಳ ಹಣಕ್ಕೆ ಪತ್ರ ಬರೆಯಲಾಗಿದೆ. ಇನ್ನೂ ಹಣ ಬಿಡುಗಡೆ ಮಾಡಿಲ್ಲ.‌ ಹೀಗಾಗಿ ಜುಲೈ ತಿಂಗಳ ಹಣ ಬರುವುದು ತಡವಾಗಲಿದೆ. ಸರ್ಕಾರ ನಮಗೆ ಬೇಗ ಕೊಟ್ಟರೆ ನಾವು ಖಾತೆಗಳಿಗೆ ವರ್ಗಾವಣೆ ಮಾಡುತ್ತೇವೆ. ಆದರೆ, ಸರ್ಕಾರದಿಂದ ಹಣ ಬಿಡುಗಡೆ ಮಾಡುವುದು ತಡವಾಗುತ್ತಿದೆ ಎಂದಿದ್ದಾರೆ.

ಜೂನ್ ತಿಂಗಳಲ್ಲಿ ಎಸ್ಸಿ, ಎಸ್ಟಿ ಫಾಲಾನುಭವಿಗಳ‌ ಪೋರ್ಟಲ್​ನಲ್ಲಿ ಒಂದಷ್ಟು ಸಮಸ್ಯೆಗಳು ಕಂಡುಬಂದಿದ್ದವು. ಅವುಗಳನ್ನು ಸರಿಪಡಿಸಿ ಈಗ ಖಾತೆಗೆ ಹಣಹಾಕಲಾಗುತ್ತಿದೆ. ಈ ಮಧ್ಯೆ, ಜೂನ್ ತಿಂಗಳ ಹಣದ ಜತೆಗೇ ಜುಲೈ ಹಣ ಕೂಡ ಬರಲಿದೆ ಎಂದು ಕಾಯುತ್ತಿದ್ದ ಫಾಲಾನುಭವಿಗಳಿಗೆ ನಿರಾಸೆಯಾಗಿದೆ.

ದುಡ್ಡಿನ ಕೊರತೆ ಇಲ್ಲವೆಂದ ಹೆಬ್ಬಾಳ್ಕರ್

ಜೂನ್ ತಿಂಗಳದ್ದು 80,000 ಜನರಿಗೆ ಹಣ ಬಂದಿರಲಿಲ್ಲ. ಅದು ಕೂಡ ಈಗಾಗಲೇ ವರ್ಗಾವಣೆಯಾಗಿದೆ. ಎಸ್ಸಿ, ಎಸ್ಟಿ ಪೋರ್ಟಲ್ ಬೇರೆ, ಹೀಗಾಗಿ ಅವರಿಗೆ ತೊಂದರೆ ಆಗಿತ್ತು. ಸರ್ಕಾರಕ್ಕೆ ದುಡ್ಡಿನ ಸಮಸ್ಯೆ ಇಲ್ಲ. ವಿರೋಧ ಪಕ್ಷಗಳು ವೃಥಾ ಆರೋಪ ಮಾಡುತ್ತಿವೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ‘ಟಿವಿ9’ಗೆ ತಿಳಿಸಿದ್ದಾರೆ.

ಇದನ್ನೂ ಓದಿ: 350ಕ್ಕೂ ಹೆಚ್ಚು ಪ್ರಭಾವಿ ಅಧಿಕಾರಿಗಳಿಗೆ ಸೈಟ್​​​ ಹಂಚಿಕೆ ಆರೋಪ: ಮುಡಾದ 18 ಅಧಿಕಾರಿಗಳಿಗೆ ಮೈಸೂರು ಲೋಕಾಯುಕ್ತ ನೋಟಿಸ್

ಗೃಹಲಕ್ಷ್ಮಿ ಯೋಜನೆ ಒಂದು ಮಹತ್ವಾಕಾಂಕ್ಷೆಯ ಯೋಜನೆ. ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಸಿಎಂ ಬಳಿಯೂ ಹಣ ಬಿಡುಗಡೆ ವಿಚಾರವಾಗಿ ಮಾತುಕತೆ ನಡೆಸಿದ್ದೇನೆ. ತಾಂತ್ರಿಕ ದೋಷವಾದಾಗ ಹಚ್ಚುಕಡಿಮೆ ಆಗುತ್ತದೆ. ಹಾಗೆಂದು ಹಣ ವರ್ಗಾವಣೆ ಮಾಡಿಯೇ ಮಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ