AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gruha Lakshmi Scheme: ಬೆಳಗಾವಿ ಬದಲು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ, ಮಹೂರ್ತ ಫಿಕ್ಸ್

ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ಬೆಳಗಾವಿಯಲ್ಲಿ ಆಯೋಜಿಸಲಾಗಿತ್ತು. ಸದ್ಯ ಬೆಳಗಾವಿ ಬದಲು ಮೈಸೂರಿನಲ್ಲಿ ಕಾರ್ಯಕ್ರಮ ಆಯೋಜಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಹೀಗಾಗಿ ನಾಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮೈಸೂರಿಗೆ ತೆರಳಿ ಸ್ಥಳ ಪರಿಶೀಲನೆ ನಡೆಸಲಿದ್ದಾರೆ.

Gruha Lakshmi Scheme: ಬೆಳಗಾವಿ ಬದಲು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ, ಮಹೂರ್ತ ಫಿಕ್ಸ್
ಆಗಸ್ಟ್ 30 ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Poornima Agali Nagaraj
Poornima Agali Nagaraj| Edited By: Rakesh Nayak Manchi|

Updated on: Aug 19, 2023 | 9:46 PM

Share

ಬೆಂಗಳೂರು, ಆಗಸ್ಟ್ 19: ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಕಾರ್ಯಕ್ರಮದ ಸ್ಥಳ, ದಿನಾಂಕ ಬದಲಾವಣೆ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಈ ಹಿಂದೆ ಬೆಳಗಾವಿಯಲ್ಲಿ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಈಗ ಮೈಸೂರಿನಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದರು.

ಯೋಜನೆಯನ್ನು ಆಗಸ್ಟ್ 27 ರಂದು ಬೆಳಗಾವಿಯಲ್ಲಿ ಚಾಲನೆ ನೀಡಲಾಗುವುದು ಎಂದು ನಿರ್ಧರಿಸಲಾಗಿತ್ತು. ಸ್ಥಳ ಕೂಡ ನೋಡಲಾಗಿತ್ತು. ಆದರೆ ಆಗಸ್ಟ್ 30 ರಂದು ರಾಹುಲ್ ಗಾಂಧಿ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಹೀಗಾಗಿ ಅಂದು ಮೈಸೂರಿನಲ್ಲಿ ಕಾರ್ಯಕ್ರಮ ಆಯೋಜಿಸಿ ಯೋಜನೆಗೆ ಚಾಲನೆ ನೀಡಲಾಗುವುದು. ರಾಹುಲ್ ಗಾಂಧಿಯವರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದರು. ಅನ್ನಭಾಗ್ಯ ಯೋಜನೆ ಬೆಳಗಾವಿಯಲ್ಲಿ ನಡೆಯಬಹುದು ಎಂದರು.

ಇದನ್ನೂ ಓದಿ: ಗೃಹಲಕ್ಷ್ಮೀ ಯೋಜನೆ ಪೋಸ್ಟರ್​ ವಿವಾದ; ಮುಸ್ಲಿಂ‌ ಯುವತಿ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಮನಗರ ಬಿಜೆಪಿ ಸದಸ್ಯ

ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮ ಆಯೋಜನೆ ಹಿನ್ನೆಲೆ ನಾಳೆ ಮಧ್ಯಾಹ್ನ 12 ಗಂಟೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಪೂರ್ವಭಾವಿ ಸಭೆ ನಡೆಸಲಿರುವ ಅವರು, ನಾಳೆ ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಸೋಮವಾರ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮದ ಸ್ಥಳ ಪರಿಶೀಲನೆ ನಡೆಸಿ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ​ವಾಪಸ್​ ಆಗಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ