AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಲಕ್ಷ್ಮೀ ಯೋಜನೆಯ 2000 ರೂ. ಅತ್ತೆಗಾ? ಸೊಸೆಗಾ? ಗೊಂದಲಗಳಿಗೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಅವಿಭಕ್ತ ಕುಟುಂಬಗಳಲ್ಲಿ ಗೃಹಲಕ್ಷ್ಮೀಗಾಗಿ ಪೈಪೋಟಿ ಶುರುವಾಗಿದ್ದು, 2000 ರೂ. ಅತ್ತೆಗಾ? ಸೊಸೆಗಾ? ಎನ್ನುವುದೇ ಗೊಂದಲಕ್ಕೆ ಇದೀಗ ತೆರೆ ಬಿದ್ದಿದೆ.

ಗೃಹಲಕ್ಷ್ಮೀ ಯೋಜನೆಯ 2000 ರೂ. ಅತ್ತೆಗಾ? ಸೊಸೆಗಾ? ಗೊಂದಲಗಳಿಗೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
TV9 Web
| Edited By: |

Updated on: May 30, 2023 | 3:25 PM

Share

ಬೆಂಗಳೂರು:  ಜೂನ್ 1ರಿಂದಲೇ 5 ಗ್ಯಾರಂಟಿ ಜಾರಿ ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಅದರಲ್ಲೂ ಮುಖ್ಯಮಂತ್ರಿ ಗೃಹಲಕ್ಷ್ಮೀ ಯೋಜನೆಯಡಿ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಕೊಡುತ್ತೇವೆ ಎಂದು ಸರ್ಕಾರ ಹೇಳುತ್ತಿದೆ. ಮನೆಯೊಡತಿ ಯಾರು ಎನ್ನುವುದನ್ನು ಗುರುತಿಸುವುದೇ ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಅವಿಭಕ್ತ ಕುಟುಂಬಗಳಲ್ಲಿ ಗೃಹಲಕ್ಷ್ಮೀಗಾಗಿ ಪೈಪೋಟಿ ಶುರುವಾಗಿದೆ. ಹೀಗಾಗಿ 2000 ರೂ. ಅತ್ತೆಗಾ? ಸೊಸೆಗಾ? ಎನ್ನುವುದೇ ಗೊಂದಲವಾಗಿದೆ. ಇನ್ನು ಈ ಬಗ್ಗೆ ಮಹಿಳಾ, ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಪ್ರತಿಕ್ರಿಯಿಸಿದ್ದು, ಗೃಹಲಕ್ಷ್ಮೀ ಯೋಜನೆಯ ಹಣ ಅತ್ತೆಗೆ ಸಿಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಪರೋಕ್ಷವಾಗಿ ಸೊಸೆಗೆ ಗೃಹಲಕ್ಷ್ಮೀ ಯೋಜನೆ ಇಲ್ಲ ಎಂದರು.

ಇದನ್ನೂ ಓದಿ: 2000 ರೂ. ಅತ್ತೆಗಾ? ಸೊಸೆಗಾ?: ಅವಿಭಕ್ತ ಕುಟುಂಬಗಳಲ್ಲಿ ಗೃಹಲಕ್ಷ್ಮೀಗಾಗಿ ಪೈಪೋಟಿ

ಬೆಳಗಾವಿಯಲ್ಲಿ ಇಂದು(ಮೇ30) ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ , ನಮ್ಮ ಸಂಪ್ರದಾಯದ ಪ್ರಕಾರ ಮನೆಯ ಒಡತಿ ಅತ್ತೆ ಆಗುತ್ತಾರೆ. ಹೀಗಾಗಿ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಅತ್ತೆಗೆ ನೀಡುತ್ತೇವೆ. ಅತ್ತೆ ಪ್ರೀತಿಯಿಂದ ಬೇಕಾದರೆ ಸೊಸೆಗೆ ಯೋಜನೆಯ ಹಣ ನೀಡಲಿ. ನಾಳೆ ಅಧಿಕಾರಿಗಳ ಜತೆ ಸಭೆ ನಡೆಸಿ ಅನುಷ್ಠಾನ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತದೆ ಎಂದು ಹೇಳಿದರು. ಈ ಮೂಲಕ ಲಕ್ಷ್ಮೀ ಹೆಬ್ಬಾಳ್ಕರ್ ಪರೋಕ್ಷವಾಗಿ ಗೃಹಲಕ್ಷ್ಮೀ ಯೋಜನೆ ಸೊಸೆಗೆ ಸಿಗುವುದಿಲ್ಲ ಎನ್ನುವ ಸುಳಿವು ನೀಡಿದರು.

ಇನ್ನೊಂದೆಡೆ ಅವಿಭಕ್ತ ಕುಟುಂಬಗಳಲ್ಲಿ ಗೃಹಲಕ್ಷ್ಮೀಗಾಗಿ ಪೈಪೋಟಿ ಶುರುವಾಗಿದ್ದು, ಅತ್ತೆ ಸೊಸೆ ಇಬ್ಬರಿಗೂ ಸರ್ಕಾರ ಎರಡು ಸಾವಿರ ರೂಪಾಯಿ ನೀಡಬೇಕು. ಒಬ್ಬರಿಗೆ ಕೊಟ್ಟು ಇಬ್ಬರ ನಡುವೆ ಭೇದಭಾವ ಮಾಡಬಾರದು ಎನ್ನುವ ಅಭಿಪ್ರಾಯಗಳ ವ್ಯಕ್ತವಾಗಿವೆ. ಹೀಗಾಗಿ ಅತ್ತೆಗಾ? ಸೊಸೆಗಾ? ಎನ್ನುವುದೇ ಗೊಂದಲವಾಗಿದ್ದು, ಇದೀಗ ಲಕ್ಷ್ಮೀ ಹೆಬ್ಬಾಳರ್ ಅತ್ತೆಯೇ ಗೃಹಲಕ್ಷ್ಮೀ ಯೋಜನೆ ಅರ್ಹರಾಗುತ್ತಾರೆ ಎಂದು ತಿಳಿಸಿದರು.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್