GST: ಆಹಾರ ಧಾನ್ಯದ ಮೇಲೆ ಜಿಎಸ್​ಟಿಗೆ ವಿರೋಧ; ಇಂದು ಅಕ್ಕಿಗಿರಣಿ, ಯಶವಂತಪುರ ಎಪಿಎಂಸಿ ಯಾರ್ಡ್​ ಬಂದ್

ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೆ ಯಾರ್ಡ್ ಬಂದ್ ಮಾಡಿ ವರ್ತಕರು ತಮ್ಮ ಪ್ರತಿರೋಧ ದಾಖಲಿಸಿದ್ದಾರೆ.

GST: ಆಹಾರ ಧಾನ್ಯದ ಮೇಲೆ ಜಿಎಸ್​ಟಿಗೆ ವಿರೋಧ; ಇಂದು ಅಕ್ಕಿಗಿರಣಿ, ಯಶವಂತಪುರ ಎಪಿಎಂಸಿ ಯಾರ್ಡ್​ ಬಂದ್
ಅಕ್ಕಿಗಿರಣಿ (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jul 15, 2022 | 9:01 AM

ಬೆಂಗಳೂರು: ಕೇಂದ್ರ ಸರ್ಕಾರವು ಆಹಾರ ಧಾನ್ಯಗಳ ಮೇಲೆ (Food Grains) ಶೇ 5ರ ಜಿಎಸ್​ಟಿ (Goods and Service Tax – GST) ವಿಧಿಸಿರುವುದನ್ನು ಅಕ್ಕಿಗಿರಣಿ ಮಾಲೀಕರು ಮತ್ತು ಯಶವಂತಪುರ ಎಪಿಎಂಸಿ ಯಾರ್ಡ್​ನ ವರ್ತಕರು ಹಾಗೂ ಕಾರ್ಮಿಕರು ಇಂದು ಮತ್ತು ನಾಳೆ (ಜುಲೈ 15-16) ಕಾರ್ಯಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಿದ್ದಾರೆ. ದಾವಣಗೆರೆಯ ಎಲ್ಲ 96 ಅಕ್ಕಿಗಿರಣಿಗಳು ಮತ್ತು ಮೆಕ್ಕೆಜೋಳ ವರ್ತಕರು ಬಂದ್​ಗೆ ಬೆಂಬಲ ಸೂಚಿಸಿವೆ.

ದಾವಣಗೆರೆ ಜಿಲ್ಲೆಯಲ್ಲಿ 65 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಬೆಳೆ ಬೆಳೆಯಲಾಗುತ್ತಿದೆ. ವರ್ಷಕ್ಕೆ ಸುಮಾರು 3.25 ಲಕ್ಷ ಟನ್ ಭತ್ತ ಉತ್ಪಾದನೆಯಾಗುತ್ತಿದೆ. ಕೇಂದ್ರ ಸರ್ಕಾರವು ಜಾರಿ ಮಾಡಿರುವ ಹೊಸ ನಿಯಮದಿಂದ ಭತ್ತದ ಬೆಳೆಗಾರರು ಮತ್ತು ವ್ಯಾಪಾರಿಗಳಿಗೆ ನಷ್ಟವಾಗಲಿದೆ ಎಂದು ವರ್ತಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಕ್ಕಿಗಿರಣಿಗಳನ್ನು ಬಂದ್ ಮಾಡಲಿರುವ ವರ್ತಕರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಿದ್ದಾರೆ.

ಜಿಎಸ್​ಟಿ ವಿರೋಧಿ ಹೋರಾಟವನ್ನು ಬೆಂಗಳೂರಿನ ಯಶವಂತಪುರ ಎಪಿಎಂಸಿ ಯಾರ್ಡ್ ಮಾಲೀಕರು ಸಹ ಬೆಂಬಲಿಸಿದ್ದಾರೆ. ಗೋಧಿ, ಅಕ್ಕಿ, ಬೇಳೆಕಾಳುಗಳಿಗೆ ಶೇ 5ರ ಜಿಎಸ್​ಟಿ ಹೇರುವ ಕೇಂದ್ರದ ನಿರ್ಧಾರವನ್ನು ವರ್ತಕರು ಮತ್ತು ಕಾರ್ಮಿಕ ಸಂಘಟನೆಗಳು ವಿರೋಧಿಸಿವೆ.

ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೆ ಯಾರ್ಡ್ ಬಂದ್ ಮಾಡಿ ವರ್ತಕರು ತಮ್ಮ ಪ್ರತಿರೋಧ ದಾಖಲಿಸಿದ್ದಾರೆ. ನಾನ್ ಬ್ರಾಂಡೆಡ್ ವಸ್ತುಗಳ ವರ್ತಕರಿಗೆ ಸರ್ಕಾರದ ಹೊಸ ನಡೆಯಿಂದ ಬಹಳ ದೊಡ್ಡ ನಷ್ಟವಾಗಲಿದೆ. ಎಪಿಎಂಸಿ ಯಾರ್ಡ್​ ಕಾರ್ಮಿಕ ಸಂಘಟನೆಗಳು ಸಹ ಬಂದ್​ಗೆ ಬೆಂಬಲ ವ್ಯಕ್ತಪಡಿಸಿವೆ.

ಅಕ್ಕಿ ಗಿರಣಿದಾರರ ಸಂಘದ ಪ್ರತಿಭಟನೆಗೆ ದಿ ಬೆಂಗಳೂರು ಹೋಲ್ ಸೇಲ್ ಫುಡ್ ಅಂಡ್ ಗ್ರೇನ್ಸ್ ಅಂಡ ಪಲ್ಸಸ್ (ಮರ್ಚೆಂಟ್ಸ್ ಅಸೋಸಿಯೇಷನ್), ಬೆಂಗಳೂರು ಗ್ರೈನ್ ಮರ್ಚೆಂಟ್ಸ್ ಅಸೋಸಿಯೇಷನ್, ಕರ್ನಾಟಕ ರೋಲರ್ ಫ್ಲೋರ್ ಮಿಲ್ಲರ್ಸ್ ಅಸೋಸಿಯೇಷನ್, ನ್ಯೂ ತರಗುಪೇಟೆ ಮರ್ಚೆಂಟ್ಸ್ ಅಸೋಸಿಯೇಷನ್ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಉಡುಪಿ ಜಿಲ್ಲೆಯ ಅಕ್ಕಿಗಿರಣಿದಾರರ ಸಂಘವೂ ಧರಣಿಗೆ ಬೆಂಬಲ ವ್ಯಕ್ತಪಡಿಸಿದೆ.

ಕೇಂದ್ರ ಸರ್ಕಾರದ ಅಧೀನದಲ್ಲಿರುವ ಜಿಎಸ್​ಟಿ ಮಂಡಳಿಯು ಆಹಾರ ಧಾನ್ಯಗಳ ಮೇಲೆ ವಿಧಿಸಿರುವ ಶೇ 5ರ ಜಿಎಸ್​ಟಿ ತೆರಿಗೆಯು ಜುಲೈ 18ರಿಂದ ಜಾರಿಗೆ ಬರಲಿದೆ. ಈ ತೆರಿಗೆಯಿಂದ ಅಕ್ಕಿ, ಜೋಳ, ರಾಗಿಯಂಥ ಆಹಾರ ಪದಾರ್ಥಗಳ ಬೆಲೆ ಹೆಚ್ಚಾಗಲಿದೆ. ಈಗಾಗಲೇ ಹಣದುಬ್ಬರದಿಂದ ಕಂಗಾಲಾಗಿರುವ ಕಾರ್ಮಿಕರು, ಬಡವರು, ಮಧ್ಯಮವರ್ಗದ ಜನರು ಹೊಸ ಹೊರೆಯನ್ನು ಸಹಿಸಿಕೊಳ್ಳುವ ಸ್ಥಿತಿಯಲ್ಲಿ ಇಲ್ಲ. ತೆರಿಗೆ ಹೇರುವ ನಿರ್ಧಾರ ಹಿಂಪಡೆಯಬೇಕು ಎಂದು ಸಂಘವು ಆಗ್ರಹಿಸಿದರು.

ಆಹಾರ ಧಾನ್ಯಗಳ ಮೇಲಿನ ತೆರಿಗೆ ತೆಗೆಯುವಂತೆ ಹಲವು ಬಾರಿ ಮನವಿ ನೀಡಿದರೂ ಜಿಎಸ್​ಟಿಯ ಕೇಂದ್ರ ಮತ್ತು ರಾಜ್ಯ ಕಚೇರಿಗಳಿಂದ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ. ಹೀಗಾಗಿ ಅನಿವಾರ್ಯವಾಗಿ ಪ್ರತಿಭಟನೆ ನಡೆಸಲು ಮುಂದಾಗಿದ್ದೇವೆ. ಜುಲೈ 15 ಮತ್ತು 16ರಂದು ಅಕ್ಕಿಗಿರಣಿಗಳಿಗೆ ಸಂಬಂಧಿಸಿದ ಎಲ್ಲ ರೀತಿಯ ವಹಿವಾಟುಗಳನ್ನು ಸಂಪೂರ್ಣ ಬಂದ್ ಮಾಡಲಾಗುವುದು. ಪ್ರತಿಭಟನೆ ನಡೆಸಿದ ನಂತರ ತೆರಿಗೆ ಅಧಿಕಾರಿಗಳು, ಜಿಲ್ಲಾಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಅಕ್ಕಿಗಿರಣಿದಾರರ ಸಂಘದ ಮುಖಂಡರಾದ ರಮೇಶ್ ನಾಯಕ್ ಹೇಳಿದ್ದಾರೆ.

Published On - 9:00 am, Fri, 15 July 22

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್