AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

8 ಲಕ್ಷ ರೂ. ಲಂಚ ಪಡೆಯುವಾಗಲೇ ಬೆಂಗಳೂರಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ GST ಸೂಪರಿಂಟೆಂಡೆಂಟ್

ಕಬ್ಬಿಣದ ಅಂಗಡಿ ಮಾಲೀಕನಿಂದ 8 ಲಕ್ಷ ರೂ. ಲಂಚ ಪಡೆಯುತ್ತಿದ್ದ ಜಿಎಸ್‌ಟಿ ಸೂಪರಿಂಟೆಂಡೆಂಟ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅತೀ ಹೆಚ್ಚು ಆರೋಪಗಳು ಕೇಳಿಬಂದ ಹಿನ್ನೆಲೆ ಬನ್ನೇರುಘಟ್ಟ ಮತ್ತು ಮಂಟಪ ಪಂಚಾಯತ್​​ ಸಿಬ್ಬಂದಿಗೂ ಲೋಕಾಯುಕ್ತ ಅಧಿಕಾರಿಗಳು ಶಾಕ್​​ ಕೊಟ್ಟಿದ್ದರೆ, ಮತ್ತೊಂದೆಡೆ ನಿನ್ನೆ 50 ಲಕ್ಷ ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದ ಧಾರವಾಡ ತಹಶೀಲ್ದಾರ್​ ಸಚ್ಚಿದಾನಂದರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಲೋಕಾಯುಕ್ತ ಕೋರ್ಟ್​ ಆದೇಶ ನೀಡಿದೆ.

8 ಲಕ್ಷ ರೂ. ಲಂಚ ಪಡೆಯುವಾಗಲೇ ಬೆಂಗಳೂರಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ GST ಸೂಪರಿಂಟೆಂಡೆಂಟ್
ಲೋಕಾಯುಕ್ತ ಬಲೆಗೆ ಬಿದ್ದ GST ಸೂಪರಿಂಟೆಂಡೆಂಟ್Image Credit source: Tv9 Kannada
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Sep 17, 2026 | 3:55 PM

Share

ಬೆಂಗಳೂರು, ಸೆಪ್ಟೆಂಬರ್​​ 17: ಕಬ್ಬಿಣದ ಅಂಗಡಿ ಮಾಲೀಕನಿಂದ 8 ಲಕ್ಷ ರೂ. ಲಂಚ ಪಡೆಯುವಾಗ ಜಿಎಸ್‌ಟಿ ಸೂಪರಿಂಟೆಂಡೆಂಟ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಮೋಹಿತ್ ಪ್ರತಾಪ್ ಸಿಂಗ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದು, ಕಬ್ಬಿಣದ ಅಂಗಡಿ GST ವಿಚಾವಾಗಿ 20 ಲಕ್ಷ ಲಂಚ ಕೊಡುವಂತೆ ಜಮೀರ್‌ ಎಂಬವರ ಬಳಿ ಬೇಡಿಕೆ ಇಟ್ಟಿದ್ದರು. ಈ ಸಂಬಂಧ 8 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ ನಡೆಸಿದೆ. ಅಧಿಕಾರಿ ಲಂಚ ಪಡೆಯುತ್ತಿರುವ ವಿಡಿಯೋ ಕೂಡ ಲಭ್ಯವಿದೆ ಎನ್ನಲಾಗಿದ್ದು, ಜಿಎಸ್‌ಟಿ ಸೂಪರಿಂಟೆಂಡೆಂಟ್​​ನನ್ನು ಬಂಧಿಸಿ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ಬನ್ನೇರುಘಟ್ಟ, ಮಂಟಪ ಪಂಚಾಯತ್​​ ಸಿಬ್ಬಂದಿಗೂ ಲೋಕಾಯುಕ್ತ ಶಾಕ್​​

ಅತೀ ಹೆಚ್ಚು ಆರೋಪಗಳು ಕೇಳಿಬಂದ ಹಿನ್ನೆಲೆ ಬನ್ನೇರುಘಟ್ಟ ಮತ್ತು ಮಂಟಪ ಪಂಚಾಯತ್​​ ಸಿಬ್ಬಂದಿಗೂ ಲೋಕಾಯುಕ್ತ ಅಧಿಕಾರಿಗಳು ಶಾಕ್​​ ಕೊಟ್ಟಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಗಿರೀಶ್ ನೇತೃತ್ವದಲ್ಲಿ ರೇಡ್​​ ನಡೆದಿದ್ದು, ಎರಡೂ ಪಂಚಾಯತ್​​ ಕಚೇರಿಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಅದರಲ್ಲೂ ಬನ್ನೇರುಘಟ್ಟ ಪಂಚಾಯತ್​​ನಲ್ಲಿ ಅಕ್ರಮದ ಬಗ್ಗೆ ಸಾಲು ಸಾಲು ಆರೋಪ ಕೇಳಿಬಂದಿದ್ದ ಹಿನ್ನೆಲೆ ಲೋಕಾಯುಕ್ತ ಮಾಹಿತಿ ಕಲೆಹಾಕಿದೆ.

LIVE TV

ಇದನ್ನೂ ಓದಿ: ಭೂ ದಾಖಲೆ ಸರಿಪಡಿಸಲು 1 ಕೋಟಿ ಲಂಚ ಕೇಳಿ, ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್

ಧಾರವಾಡ ತಹಶೀಲ್ದಾರ್​ ಸಚ್ಚಿದಾನಂದ 14 ದಿನ ನ್ಯಾಯಾಂಗ ಬಂಧನ

ಮತ್ತೊಂದೆಡೆ, ನಿನ್ನೆ ₹50 ಲಕ್ಷ ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದ ಧಾರವಾಡ ತಹಶೀಲ್ದಾರ್​ ಸಚ್ಚಿದಾನಂದರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಲೋಕಾಯುಕ್ತ ಕೋರ್ಟ್​ ಆದೇಶ ನೀಡಿದೆ. 33 ಎಕರೆ ಜಮೀನು ಸಂಬಂಧ ಭೂಮಿಯ ಖರಾಬು ತೆಗೆಯಲು, ಅಂದರೆ ಆ ದಾಖಲೆಯನ್ನು ಸರಿಪಡಿಸಲು ತಹಶೀಲ್ದಾರ್​​ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ನಗರದ ಕರ್ನಾಟಕ ಕಾಲೇಜು ಬಳಿ ಹಣ ಪಡೆಯುವಾಗ ರೆಡ್​ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಕೈಗೆ ಅವರು ಸಿಕ್ಕಿಬಿದ್ದಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’